AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh: ಮಧ್ಯಪ್ರದೇಶ ಸರ್ಕಾರ ನೀಡಿದ ಮೇಕಪ್ ಬಾಕ್ಸ್​​​ನಲ್ಲಿ ಕಾಂಡೋಮ್, ಗರ್ಭನಿರೋಧಕ ಮಾತ್ರೆ ಪತ್ತೆ

ಮಧ್ಯಪ್ರದೇಶದಲ್ಲಿ ಹೊಸದಾಗಿ ಜಾರಿಯಾಗಿರುವ ನಿಕಾಹ್ ಯೋಜನೆ ಅಡಿಯಲ್ಲಿ ಸರ್ಕಾರವು ಮಧ್ಯಪ್ರದೇಶದ ಝಬುವಾ ಜಿಲ್ಲೆಯಲ್ಲಿ ಸಾಮೂಹಿಕ ವಿವಾಹ ಮಹೋತ್ಸವವನ್ನು ನಡೆಸಿತ್ತು.

Madhya Pradesh: ಮಧ್ಯಪ್ರದೇಶ ಸರ್ಕಾರ ನೀಡಿದ ಮೇಕಪ್ ಬಾಕ್ಸ್​​​ನಲ್ಲಿ ಕಾಂಡೋಮ್, ಗರ್ಭನಿರೋಧಕ ಮಾತ್ರೆ ಪತ್ತೆ
ವೀಡಿಯೊ ವೈರಲ್
TV9 Web
| Edited By: |

Updated on: May 30, 2023 | 3:51 PM

Share

ಝಬುವಾ: ಮಧ್ಯಪ್ರದೇಶದಲ್ಲಿ (Madhya Pradesh) ಹೊಸದಾಗಿ ಜಾರಿಯಾಗಿರುವ ನಿಕಾಹ್ ಯೋಜನೆ ಅಡಿಯಲ್ಲಿ ಸರ್ಕಾರವು ಮಧ್ಯಪ್ರದೇಶದ ಝಬುವಾ ಜಿಲ್ಲೆಯಲ್ಲಿ ಸಾಮೂಹಿಕ ವಿವಾಹ ಮಹೋತ್ಸವವನ್ನು ನಡೆಸಿತ್ತು. ಪ್ರತಿ ವಧುಗಳಿಗೆ ಮೇಕಪ್ ಬಾಕ್ಸ್‌ಗಳನ್ನು ನೀಡಲಾಗಿತ್ತು. ಆದರೆ ಅದರಲ್ಲಿ ಕಾಂಡೋಮ್ ಮತ್ತು ಗರ್ಭನಿರೋಧಕ ಮಾತ್ರೆಗಳನ್ನು ಇಡಲಾಗಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮುಖ್ಯಮಂತ್ರಿ ಕನ್ಯಾ ವಿವಾಹ/ನಿಕಾಹ್ ಯೋಜನೆ ಅಡಿಯಲ್ಲಿ, ಹಿಂದುಳಿದ ಸಮುದಾಯಗಳ ಮಹಿಳೆಯರಿಗಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಏರ್ಪಡಿಸಿದ್ದರು. ಸೋಮವಾರ (ಮೇ29)ದಂದು 296 ಜೋಡಿಗಳಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಾಮೂಹಿಕ ಕಾರ್ಯಕ್ರಮದ ಸಂದರ್ಭದಲ್ಲಿ, ನವವಿವಾಹಿತರಿಗೆ ವಿತರಿಸಲಾದ ಮೇಕ್ಅಪ್ ಬಾಕ್ಸ್‌ಗಳಲ್ಲಿ ಉಚಿತ ಕಾಂಡೋಮ್‌ಗಳು ಮತ್ತು ಗರ್ಭನಿರೋಧಕ ಮಾತ್ರೆಗಳನ್ನು ಇಡಲಾಯಿತು. ಹಿರಿಯ ಜಿಲ್ಲಾ ಅಧಿಕಾರಿ ಭೂರಸಿಂಗ್ ರಾವತ್ ಅವರು ತಮ್ಮ ಇಲಾಖೆಯಿಂದ ಈ ವಿತರಣೆ ನಡೆದಿಲ್ಲ, ಇದರಲ್ಲಿ ನನ್ನ ಪಾತ್ರವಿಲ್ಲ ಎಂದು ರಾವತ್ ಹೇಳಿದ್ದಾರೆ.

ಕುಟುಂಬ ಯೋಜನೆ ಜಾಗೃತಿ ಕಾರ್ಯಕ್ರಮದ ಭಾಗವಾಗಿ ಕಾಂಡೋಮ್‌ಗಳು ಮತ್ತು ಇತರ ಗರ್ಭನಿರೋಧಕಗಳನ್ನು ಸರಬರಾಜು ಮಾಡಿರುವ ಸಾಧ್ಯತೆಗಳು ಇದೆ ಎಂದು ರಾವತ್ ರಾಜ್ಯ ಆರೋಗ್ಯ ಇಲಾಖೆಯ ಮೇಲೆ ಆರೋಪ ಹೊರಿಸಿದ್ದಾರೆ. ಅವರ ಪ್ರಕಾರ, ಕುಟುಂಬ ಯೋಜನೆ ಕುರಿತು ಜಾಗೃತಿ ಮೂಡಿಸುವ ಅಭಿಯಾನದ ಭಾಗವಾಗಿ ಆರೋಗ್ಯ ಇಲಾಖೆ ಈ ವಸ್ತುಗಳನ್ನು ವಿತರಿಸುವ ಸಾಧ್ಯತೆಯಿದೆ. ಮೇಕಪ್ ಕಿಟ್‌ನ ವೀಡಿಯೊವನ್ನು ಟ್ವೀಟ್‌ನಲ್ಲಿ ಮಧ್ಯಪ್ರದೇಶ ಕಾಂಗ್ರೆಸ್​​ನ ನಾಯಕ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಇದು ಸರ್ಕಾರ ನಾಚಿಕೆಗೇಡುತನ, ಮಧ್ಯಪ್ರದೇಶದ ಬಿಜೆಪಿ ಸರ್ಕಾರವು ಕನ್ಯಾ ವಿವಾಹ ಯೋಜನೆಯಡಿ ನೀಡಲಾದ ಮೇಕಪ್ ಬಾಕ್ಸ್‌ಗಳಲ್ಲಿ ಕಾಂಡೋಮ್ ಮತ್ತು ಗರ್ಭನಿರೋಧಕ ಮಾತ್ರೆಗಳನ್ನು ವಿತರಿಸಿದೆ. ಮುಖ್ಯಮಂತ್ರಿಗಳೇ ನಿಮಗೆ ನಾಚಿಕೆ ಇಲ್ಲವೇ?” ಎಂದು ಕಾಂಗ್ರೆಸ್ ಹೇಳಿದೆ. ಮುಖ್ಯಮಂತ್ರಿ ಕನ್ಯಾ ವಿವಾಹ/ನಿಕಾಹ್ ಯೋಜನೆಯು ಫಲಾನುಭವಿಗೆ 49 ಸಾವಿರವನ್ನು ನೀಡುತ್ತದೆ, ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. 6,000 ರೂ. ಮೊತ್ತದ ಆಹಾರ, ನೀರು ಮತ್ತು ಟೆಂಟ್ ಒದಗಿಸುತ್ತೇವೆ. ವಿತರಿಸಿದ ಪ್ಯಾಕೆಟ್‌ಗಳಲ್ಲಿ ಏನಿದೆ ಎಂದು ನನಗೆ ತಿಳಿದಿರಲಿಲ್ಲ ಎಂದು ರಾವತ್ ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: Madhya Pradesh Firing: ಮಾರ್ಕೆಟ್​ನಲ್ಲಿ ಬಿಜೆಪಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಮಧ್ಯಪ್ರದೇಶ ಸರ್ಕಾರವು ಏಪ್ರಿಲ್ 2006 ರಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಹಿಳೆಯರ ವಿವಾಹಗಳಿಗೆ ಹಣಕಾಸಿನ ನೆರವು ನೀಡಲು ಮುಖ್ಯಮಂತ್ರಿ ಕನ್ಯಾ ವಿವಾಹ/ನಿಕಾಹ್ ಯೋಜನೆಯನ್ನು ಪ್ರಾರಂಭಿಸಿತು. ವಧುವಿನ ಕುಟುಂಬವು ಈ ಯೋಜನೆಯಡಿ ಸರ್ಕಾರದಿಂದ 55,000 ಪಡೆಯುತ್ತದೆ.

ಕಳೆದ ತಿಂಗಳು ದಿಂಡೋರಿಯ ಗಡ್ಸರಾಯ್ ಪ್ರದೇಶದಲ್ಲಿ ನಡೆದ ಅದ್ಧೂರಿ ವಿವಾಹ ಸಮಾರಂಭದಲ್ಲಿ ಕೆಲವು ವಧುಗಳು ಗರ್ಭಾವಸ್ಥೆಯ ಪರೀಕ್ಷೆಗೆ ಒಳಗಾಗುವಂತೆ ಒತ್ತಾಯಿಸಿರುವ ಘಟನೆ ನಡೆದಿದ್ದು. ಈ ಯೋಜನೆಯು ಟೀಕೆಗೆ ಗುರಿಯಾಯಿತು. ಗರ್ಭಧಾರಣೆಯ ಪರೀಕ್ಷೆಯು ಪಾಸಿಟಿವ್ ಆಗಿದ್ದ ಮಹಿಳೆಯೊಬ್ಬಳು ತಾನು ಮದುವೆಗೂ ಮುನ್ನ ತನ್ನ ಭಾವಿ ಪತಿಯೊಂದಿಗೆ ವಾಸಿಸುತ್ತಿದ್ದೆ ಎಂದು ಹೇಳಿದ್ದಾಳೆ.

ಡಿಂಡೋರಿಯ ಮುಖ್ಯ ವೈದ್ಯಕೀಯ ಅಧಿಕಾರಿಯ ಪ್ರಕಾರ, ವಧು ಮತ್ತು ವರನ ವಯಸ್ಸನ್ನು ದೃಢೀಕರಿಸಲು, ಕುಡಗೋಲು ಕಣ ರಕ್ತಹೀನತೆಗಾಗಿ ಮತ್ತು ಅವರು ದೈಹಿಕವಾಗಿ ಸದೃಢರಾಗಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಈ ಪರೀಕ್ಷೆಗಳನ್ನು ಸಾಮಾನ್ಯವಾಗಿ ಮಾಡಲಾಗುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ