ಯೋಗಿ ಆದಿತ್ಯನಾಥ ಸರ್ಕಾರ ಪ್ರಮಾಣ ವಚನ ಸ್ವೀಕರಿಸಿದ್ದು ಸಮಾಜವಾದಿ ಪಾರ್ಟಿ ನಿರ್ಮಿಸಿದ ಕ್ರೀಡಾಂಗಣದಲ್ಲಿ: ಅಖಿಲೇಶ್ ಯಾದವ್

ಸಮಾಜವಾದಿ ಪಕ್ಷ ನಿರ್ಮಿಸಿದ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹೊಸ ಸರ್ಕಾರಕ್ಕೆ ಅಭಿನಂದನೆಗಳು. ಕೇವಲ ಸರ್ಕಾರ ರಚಿಸಲು ಅಲ್ಲ, ಜನರ ಸೇವೆಗಾಗಿ ಪ್ರಮಾಣ ವಚನ ಸ್ವೀಕರಿಸಬೇಕು.

ಯೋಗಿ ಆದಿತ್ಯನಾಥ ಸರ್ಕಾರ ಪ್ರಮಾಣ ವಚನ ಸ್ವೀಕರಿಸಿದ್ದು ಸಮಾಜವಾದಿ ಪಾರ್ಟಿ ನಿರ್ಮಿಸಿದ ಕ್ರೀಡಾಂಗಣದಲ್ಲಿ: ಅಖಿಲೇಶ್ ಯಾದವ್
ಅಖಿಲೇಶ್ ಯಾದವ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Mar 25, 2022 | 9:01 PM

ಲಖನೌ: ಲಖನೌದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಸ್ಟೇಡಿಯಂನಲ್ಲಿ ಶುಕ್ರವಾರ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ (Yogi Adityanath) ಅವರು ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದಾದ ನಂತರ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) “ಸಮಾಜವಾದಿ ಪಾರ್ಟಿ (Samajwadi Party) ನಿರ್ಮಿಸಿದ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹೊಸ ಸರ್ಕಾರಕ್ಕೆ ಅಭಿನಂದನೆಗಳು. ಕೇವಲ ಸರ್ಕಾರ ರಚಿಸಲು ಅಲ್ಲ, ಜನರ ಸೇವೆಗಾಗಿ ಪ್ರಮಾಣ ವಚನ ಸ್ವೀಕರಿಸಬೇಕು ಎಂದು  ಟ್ವೀಟ್ ಮಾಡಿದ್ದಾರೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳ ಕ್ರೆಡಿಟ್ ಅನ್ನು ಬಿಜೆಪಿ ಕದಿಯುತ್ತಿದೆ ಎಂದು ಅಖಿಲೇಶ್ ಯಾದವ್ ಆರೋಪಿಸಿದ್ದರು. ಯೋಗಿ ಆದಿತ್ಯನಾಥ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಲಖನೌದಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಹಲವಾರು ಉನ್ನತ ಕೇಂದ್ರ ಸಚಿವರು ಮತ್ತು ಮುಖ್ಯಮಂತ್ರಿಗಳು ಈ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಕೇಶವ್ ಪ್ರಸಾದ್ ಮೌರ್ಯ ಅವರು ಸಿರತುದಿಂದ ಚುನಾವಣೆಯಲ್ಲಿ ಸೋತರೂ ಉಪಮುಖ್ಯಮಂತ್ರಿಯಾಗಿ ಮುಂದುವರಿದಿದ್ದಾರೆ . ದಿನೇಶ್ ಶರ್ಮಾ ಬದಲಿಗೆ ಎರಡನೇ ಉಪ ಮುಖ್ಯಮಂತ್ರಿಯಾಗಿ ಬ್ರಜೇಶ್ ಪಾಠಕ್ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕರಿಸಿದ ಪ್ರಮುಖ ಬಿಜೆಪಿ ಮುಖಗಳಲ್ಲಿ ಬೇಬಿ ರಾಣಿ ಮೌರ್ಯ, ಸ್ವತಂತ್ರ ದೇವ್ ಸಿಂಗ್, ಸುರೇಶ್ ಖನ್ನಾ, ನಂದಗೋಪಾಲ್ ನಂದಿ ಮೊದಲಾದವರು ಸೇರಿದ್ದಾರೆ.

ಮೊಹ್ಸಿನ್ ರಾಜಾ, ಸಿದ್ಧಾರ್ಥ್ ನಾಥ್ ಸಿಂಗ್, ಅಶುತೋಷ್ ಟಂಡನ್ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ. ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು 273 ಸ್ಥಾನಗಳನ್ನು ಗೆಲ್ಲುವ ಮೂಲಕ ಎರಡನೇ ಬಾರಿಗೆ ಅಧಿಕಾರಕ್ಕೇರಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆದ ನಂತರ 403 ಸದಸ್ಯ ಬಲದ ವಿಧಾನಸಭೆಯಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಮತ್ತು ಅದರ ಮಿತ್ರಪಕ್ಷಗಳು 125 ಸ್ಥಾನಗಳನ್ನು ಗೆದ್ದಿವೆ.

ಯೋಗಿ ಪ್ರಮಾಣ ವಚನ ಸ್ವೀಕಾರ

ಲಖನೌದ  ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರೀಡಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಉನ್ನತ ನಾಯಕರು ಭಾಗವಹಿಸಿದ್ದ ಭವ್ಯ ಸಮಾರಂಭದಲ್ಲಿ ಯೋಗಿ ಆದಿತ್ಯನಾಥ ಶುಕ್ರವಾರ ಉತ್ತರ ಪ್ರದೇಶದ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಗೋರಖನಾಥ ಮಠದ ಪ್ರಧಾನ ಅರ್ಚಕರೂ ಆಗಿರುವ ಆದಿತ್ಯನಾಥ ಅವರು ಉತ್ತರ ಪ್ರದೇಶದ 33ನೇ ಮುಖ್ಯಮಂತ್ರಿಯಾಗಿದ್ದಾರೆ. ಸಂಪೂರ್ಣ ಐದು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ನಂತರ ಸತತ ಎರಡನೇ ಅವಧಿಗೆ ಗೆದ್ದ ಮೊದಲ ಸಿಎಂ ಆಗಿದ್ದಾರೆ ಯೋಗಿ.

ಇಬ್ಬರು ಉಪ ಮುಖ್ಯಮಂತ್ರಿಗಳು, 16 ಇತರ ಕ್ಯಾಬಿನೆಟ್ ಸಚಿವರು, 14 ರಾಜ್ಯ ಸಚಿವರು (ಸ್ವತಂತ್ರ ಉಸ್ತುವಾರಿ) ಮತ್ತು 20 ರಾಜ್ಯ ಸಚಿವರು ಸೇರಿದಂತೆ ಯೋಗಿ ಆದಿತ್ಯನಾಥ ಮತ್ತು ಅವರ 52 ಸದಸ್ಯರ ತಂಡಕ್ಕೆ ಉತ್ತರ ಪ್ರದೇಶದ ರಾಜ್ಯಪಾಲ ಆನಂದಿಬೆನ್ ಪಟೇಲ್ ಪ್ರಮಾಣ ವಚನ ಬೋಧಿಸಿದರು.

ಹಿಂದಿನ ಆದಿತ್ಯನಾಥ್ ಸರ್ಕಾರದ 21 ಸಚಿವರನ್ನು ಉಳಿಸಿಕೊಂಡಿದ್ದು, 22 ಸಚಿವರನ್ನು ಕೈಬಿಡಲಾಗಿದೆ. ನೂತನ ಸಂಪುಟದಲ್ಲಿ 31 ಮಂದಿ ಹೊಸ ಮುಖಗಳಿದ್ದು, ಐವರು ಮಹಿಳಾ ಸಚಿವರೂ ಇದ್ದಾರೆ.

ಇದನ್ನೂ ಓದಿ: Yogi Adityanath Oath Taking ಉತ್ತರಪ್ರದೇಶದ ಸಿಎಂ ಆಗಿ ಯೋಗಿ ಆದಿತ್ಯನಾಥ ; ಉಪ ಮುಖ್ಯಮಂತ್ರಿಯಾಗಿ ಕೇಶವ್ ಮೌರ್ಯ ಮತ್ತು ಬ್ರಿಜೇಶ್ ಪಾಠಕ್ ಪ್ರಮಾಣ ವಚನ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ