ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬಂತೆಂದರೆ ವಿನಾಶ ಬಂದಂತೆ: ಪ್ರಧಾನಿ ಮೋದಿ

ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬಂದರೆ ವಿನಾಶ ಬಂದಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಧ್ಯಪ್ರದೇಶದ ಛತ್ತರ್​ಪುರಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ, ಚಿನ್ನದ ಚಮಚದೊಂದಿಗೆ ಹುಟ್ಟಿದ ಕಾಂಗ್ರೆಸ್ ನಾಯಕರಿಗೆ ಬಡವರು ಎಂಬುದು ಹಾಸ್ಯವಾಗಿತ್ತು. ಕಾಂಗ್ರೆಸ್ ನಾಯಕರು ಛಾಯಾಚಿತ್ರ ತೆಗೆಸಿಕೊಂಡು ಹಿಂತಿರುಗುತ್ತಿದ್ದ ಸ್ಲಂಗಳಲ್ಲಿ ಇಂದು ಮೋದಿಯವರು ಬಡವರಿಗೆ ಶಾಶ್ವತ ಮನೆಗಳನ್ನು ನೀಡುತ್ತಿದ್ದಾರೆ. ಇಂದು ಈ ಬಡವನ ಮಗ ಮೋದಿಯವರು ಮಕ್ಕಳ ಪೋಷಣೆಯ ಬಗ್ಗೆ ಚಿಂತಿಸುತ್ತಿದ್ದಾನೆ ಎಂದರು.

ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬಂತೆಂದರೆ ವಿನಾಶ ಬಂದಂತೆ: ಪ್ರಧಾನಿ ಮೋದಿ
ನರೇಂದ್ರ ಮೋದಿ Image Credit source: NDTV
Follow us
ನಯನಾ ರಾಜೀವ್
|

Updated on:Nov 09, 2023 | 3:18 PM

ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬಂದರೆ ವಿನಾಶ ಬಂದಂತೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಮಧ್ಯಪ್ರದೇಶದ ಛತ್ತರ್​ಪುರಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ, ಚಿನ್ನದ ಚಮಚದೊಂದಿಗೆ ಹುಟ್ಟಿದ ಕಾಂಗ್ರೆಸ್ ನಾಯಕರಿಗೆ ಬಡವರು ಎಂಬುದು ಹಾಸ್ಯವಾಗಿತ್ತು. ಕಾಂಗ್ರೆಸ್ ನಾಯಕರು ಛಾಯಾಚಿತ್ರ ತೆಗೆಸಿಕೊಂಡು ಹಿಂತಿರುಗುತ್ತಿದ್ದ ಸ್ಲಂಗಳಲ್ಲಿ ಇಂದು ಮೋದಿಯವರು ಬಡವರಿಗೆ ಶಾಶ್ವತ ಮನೆಗಳನ್ನು ನೀಡುತ್ತಿದ್ದಾರೆ. ಇಂದು ಈ ಬಡವನ ಮಗ ಮೋದಿ ಮಕ್ಕಳ ಪೋಷಣೆಯ ಬಗ್ಗೆ ಚಿಂತಿಸುತ್ತಿದ್ದಾನೆ ಎಂದರು.

ಮಧ್ಯಪ್ರದೇಶದ 240 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 17 ರಂದು ಚುನಾವಣೆ ನಡೆಯಲಿದೆ. ಅದಕ್ಕೂ ಮುನ್ನ ಎಲ್ಲಾ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರಕ್ಕೆ ತಮ್ಮ ಶಕ್ತಿ ತುಂಬುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿನ ದಿನಗಳಲ್ಲಿ ಬೃಹತ್ ಸಮಾವೇಶ ನಡೆಸುತ್ತಿದ್ದಾರೆ. ಇಂದು ಮೂರು ರ್ಯಾಲಿಗಳನ್ನು ನಡೆಸುತ್ತಿದ್ದಾರೆ.

ಈ ವೇಳೆ ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬಲೂನ್ ಉಬ್ಬಿಕೊಳ್ಳುತ್ತಿದ್ದಂತೆಯೇ ಅದು ಅಲ್ಲೊಂದು ಇಲ್ಲೊಂದು ಸದ್ದು ಮಾಡುತ್ತಾ ಬೀಳುತ್ತದೆ, ಅದೇ ರೀತಿ ಕಾಂಗ್ರೆಸ್ ನಾಯಕರು ಇತ್ತೀಚಿನ ದಿನಗಳಲ್ಲಿ ಅಲ್ಲಿ ಇಲ್ಲಿ ಓಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು ಎಂದರು.

ಕಾಂಗ್ರೆಸ್ ದೇಶವನ್ನು ಹಿಂದಕ್ಕೆ ಕೊಂಡೊಯ್ಯಲಿದೆ, ಕಾಂಗ್ರೆಸ್ ಮಹಿಳಾ ಮೀಸಲಾತಿ ಕಾನೂನನ್ನು ವರ್ಷಗಳ ಕಾಲ ತಡೆಹಿಡಿದಿದೆ. ನಾವು ತ್ರಿವಳಿ ತಲಾಖ್ ಮಸೂದೆಯನ್ನು ತಂದಾಗ ಕಾಂಗ್ರೆಸ್ ಕೂಡ ವಿರೋಧಿಸಿತ್ತು. ರಾಮನನ್ನು ಕಾಲ್ಪನಿಕ ಎಂದು ಕಾಂಗ್ರೆಸ್ ಬಣ್ಣಿಸಿದೆ. ಬುಡಕಟ್ಟು ಮಹಿಳೆಯೊಬ್ಬರು ದೇಶದ ರಾಷ್ಟ್ರಪತಿಯಾಗುವುದನ್ನು ಕಾಂಗ್ರೆಸ್ ಕೂಡ ವಿರೋಧಿಸಿತ್ತು. ರಿವರ್ಸ್ ಗೇರ್ ಹೊಂದಿರುವವರ ಬಗ್ಗೆ ಜಾಗರೂಕರಾಗಿರಬೇಕು. ಎಲ್ಲೆಲ್ಲಿ ಕಾಂಗ್ರೆಸ್ ಬಂದಿತೋ ಅಲ್ಲೆಲ್ಲ ವಿನಾಶ ತಂದಿದೆ.

ಕಾಂಗ್ರೆಸ್‌ಗೆ ಒಂದೇ ಒಂದು ಉಗುರು ಇದೆ ಮತ್ತು ಆ ಉಗುರು ಬಡವರಿಂದ ಕಿತ್ತುಕೊಳ್ಳಲು ಮಾತ್ರ ಬಳಸಲ್ಪಡುತ್ತದೆ. ನಿಮ್ಮನ್ನು ಮತ್ತು ಮಧ್ಯಪ್ರದೇಶವನ್ನು ಕಾಂಗ್ರೆಸ್‌ನ ಕಪಿಮುಷ್ಠಿಯಿಂದ ರಕ್ಷಿಸಿಕೊಳ್ಳಬೇಕು.

ಇನ್ನೊಂದೆಡೆ ರಾಹುಲ್​ ಗಾಂಧಿಯಿಂದ ಭರವಸೆಯ ಸುರಿಮಳೆ ಕಾಂಗ್ರೆಸ್ ಸರ್ಕಾರ ರಚನೆಯಾದರೆ 27 ಲಕ್ಷ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ರಾಹುಲ್ ಗಾಂಧಿ ಹೇಳಿದರು. 100 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ಕಾಂಗ್ರೆಸ್ ಸರ್ಕಾರ ರೈತರ 2 ಲಕ್ಷ ರೂ.ವರೆಗಿನ ಸಾಲ ಮನ್ನಾ ಮಾಡಲಿದೆ. ಇಲ್ಲಿ ಗೋಧಿ ಬೆಲೆ ಕ್ವಿಂಟಲ್‌ಗೆ 2600 ರೂ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಗ್ಯಾಸ್ ಸಿಲಿಂಡರ್ ಬೆಲೆಯನ್ನು 500 ರೂ.ಗೆ ಇಳಿಸಲಾಗುವುದು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಮಧ್ಯಪ್ರದೇಶದಲ್ಲಿ ನವೆಂಬರ್ 17ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಹೊರ ಬೀಳಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:04 pm, Thu, 9 November 23