P Chidambaram | 2022ರ ಗೋವಾ ವಿಧಾನಸಭಾ ಚುನಾವಣೆ ವೀಕ್ಷಕರಾಗಿ ಕಾಂಗ್ರೆಸ್ನಿಂದ ಪಿ. ಚಿದಂಬರಂ ನೇಮಕ
Goa Assembly Election 2022 | ಕಾಂಗ್ರೆಸ್ ಪಕ್ಷದಿಂದ ಗೋವಾ ಚುನಾವಣಾ ಹಿರಿಯ ವೀಕ್ಷಕರಾಗಿ ಪಿ. ಚಿದಂಬರಂ ಅವರನ್ನು ನೇಮಕ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ತಿಳಿಸಿದ್ದಾರೆ.
ನವದೆಹಲಿ: 2022ರಲ್ಲಿ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯ ವೀಕ್ಷಕರಾಗಿ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ (P Chidambaram) ಅವರನ್ನು ನೇಮಕ ಮಾಡಿ ಪಕ್ಷ ಆದೇಶ ಹೊರಡಿಸಿದೆ. ಕಾಂಗ್ರೆಸ್ ಪಕ್ಷದಿಂದ ಗೋವಾ ಚುನಾವಣಾ ಹಿರಿಯ ವೀಕ್ಷಕರಾಗಿ ಪಿ. ಚಿದಂಬರಂ ಅವರನ್ನು ನೇಮಕ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ತಿಳಿಸಿದ್ದಾರೆ.
ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವರೂ ಆಗಿರುವ ಪಿ. ಚಿದಂಬರಂ ಮುಂದಿನ ವರ್ಷ ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾ ಕಾರ್ಯತಂತ್ರಗಳು ಮತ್ತು ಸಂಘಟನೆಯನ್ನು ನೋಡಿಕೊಳ್ಳುತ್ತಾರೆ ಎಂದು ಕೆ.ಸಿ. ವೇಣುಗೋಪಾಲ್ ಆದೇಶದಲ್ಲಿ ತಿಳಿಸಿದ್ದಾರೆ.
Congress appoints P Chidambaram as election observer for Goa Assembly polls due next year
— Press Trust of India (@PTI_News) August 9, 2021
2017ರಲ್ಲಿ ನಡೆದ ಗೋವಾ ಚುನಾವಣೆಯಲ್ಲಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ, ಬಿಜೆಪಿ ಇತರೆ ಪ್ರಾದೇಶಿಕ ಪಕ್ಷಗಳೊಂದಿಗೆ ಸೇರಿ ಮೈತ್ರಿ ಮಾಡಿಕೊಂಡಿದ್ದರಿಂದ ಕಾಂಗ್ರೆಸ್ ಅಧಿಕಾರಕ್ಕೇರಲು ಸಾಧ್ಯವಾಗಿರಲಿಲ್ಲ. ಈ ಬಾರಿಯೂ ಅತಿಹೆಚ್ಚು ಮತಗಳನ್ನು ಗಳಿಸಿ ಗೋವಾದಲ್ಲಿ ಅಧಿಕಾರಕ್ಕೇರಬೇಕೆಂಬ ಉದ್ದೇಶದಿಂದ ಕಾಂಗ್ರೆಸ್ ನಾಯಕರು ಈಗಾಗಲೇ ಕಾರ್ಯತಂತ್ರ ರೂಪಿಸಿದ್ದಾರೆ.
40 ಸದಸ್ಯರಿರುವ ಗೋವಾ ವಿಧಾನಸಭೆಗೆ ಮುಂದಿನ ವರ್ಷ ಅಂದರೆ 2022ರ ಫೆಬ್ರವರಿಯಲ್ಲಿ ಚುನಾವಣೆ ನಡೆಯಲಿದೆ.
ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಎದುರಾಗಲಿದೆ ಚುನಾವಣೆ ಸವಾಲು; ಪಾಲಿಕೆ, ನಗರಸಭೆಗಳಿಗೆ ಚುನಾವಣೆ ಘೋಷಿಸಿ ಎಂದ ಹೈಕೋರ್ಟ್
ಗೋವಾ ಕಾಂಗ್ರೆಸ್ ನಾಯಕರೊಂದಿಗೆ ರಾಹುಲ್ ಗಾಂಧಿ ಸಭೆ, ಮುಂಬರುವ ವಿಧಾನ ಸಭೆ ಚುನಾವಣೆ ಸಿದ್ಧತೆ ಕುರಿತು ಚರ್ಚೆ
(Congress Appoints P Chidambaram as Senior Election Observer for Goa Assembly Election in 2022)
Published On - 6:47 pm, Mon, 9 August 21