ನಾಳೆ ದೇಶಾದಾದ್ಯಂತ ನಡೆಯಲಿರುವ ಪ್ರತಿಭಟನೆಗೆ ಕಾರ್ಯತಂತ್ರ ರೂಪಿಸಲು ತುರ್ತು ಸಭೆ ಕರೆದ ಕಾಂಗ್ರೆಸ್

| Updated By: ರಶ್ಮಿ ಕಲ್ಲಕಟ್ಟ

Updated on: Jul 25, 2022 | 1:36 PM

ನಾಳೆ ದೇಶದಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದ್ದು, ಅದರ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಲು ಪಕ್ಷ ಸಂಸದರು, ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಉಸ್ತುವಾರಿಗಳ ಸಭೆ ಕರೆದಿದೆ.

ನಾಳೆ ದೇಶಾದಾದ್ಯಂತ ನಡೆಯಲಿರುವ ಪ್ರತಿಭಟನೆಗೆ ಕಾರ್ಯತಂತ್ರ ರೂಪಿಸಲು ತುರ್ತು ಸಭೆ ಕರೆದ ಕಾಂಗ್ರೆಸ್
ಕಾಂಗ್ರೆಸ್ ಪ್ರತಿಭಟನೆ
Follow us on

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ನಾಳೆ (ಮಂಗಳವಾರ) ಜಾರಿ ನಿರ್ದೇಶನಾಲಯಕ್ಕೆ ವಿಚಾರಣೆಗಾಗಿ ಹಾಜರಾಗಲಿದ್ದಾರೆ. ಈ ವೇಳೆ ದೇಶದಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದ್ದು, ಅದರ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಲು ಪಕ್ಷ ಸಂಸದರು, ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಉಸ್ತುವಾರಿಗಳ ಸಭೆ ಕರೆದಿದೆ. ಇಂದು ಸಂಜೆ 7 ಗಂಟೆಗೆ ಎಐಸಿಸಿ ಪ್ರಧಾನ ಕಚೇರಿಯಲ್ಲಿ ತುರ್ತು ಸಭೆ ನಡೆಯಲಿದೆ ಎಂದು ಎಎನ್ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ(National Herald case) ಎರಡನೇ ಸುತ್ತಿನ ವಿಚಾರಣೆಗಾಗಿ ಜುಲೈ 25ರಂದು ಹಾಜರಾಗುವಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರಿಗೆ ಗುರುವಾರ ಇಡಿ ಸಮನ್ಸ್ ನೀಡಿದೆ. ಜುಲೈ 21ರಂದು ಸೋನಿಯಾ ಗಾಂಧಿ ಇಡಿ (ED) ಕಚೇರಿಗೆ ಹೋಗಿದ್ದರು. ಅಲ್ಲಿ 2-3 ಗಂಟೆಗಳ ಕಾಲ ವಿಚಾರಣೆಗೆ ಒಳಗಾದರು. ಇದಾದ ನಂತರ ಎರಡನೇ ಸುತ್ತಿನ  ವಿಚಾರಣೆಗೆ ಅವರು ನಾಳೆ ಹಾಜರಾಗಲಿದ್ದಾರೆ.

ನ್ಯಾಷನಲ್ ಹೆರಾಲ್ಡ್​ (National Herald Case)​​ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾ ಗಾಂಧಿ  ಜಾರಿ ನಿರ್ದೇಶನಾಲಯ ವಿಚಾರಣೆಗೆ ಹಾಜರಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಲು ಮುಂದಾಗಿದೆ. ಭಾರತದ ಯಾವುದೇ ಫೆಡರಲ್ ತನಿಖಾ ಸಂಸ್ಥೆ ಕಾಂಗ್ರೆಸ್ ಅಧ್ಯಕ್ಷರನ್ನು ಪ್ರಶ್ನಿಸುತ್ತಿರುವುದು ಇದೇ ಮೊದಲು. ಕೆಲವು ದಿನಗಳ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನೂ ಈ ಪ್ರಕರಣದಲ್ಲಿ ಇಡಿ ಸುದೀರ್ಘ ವಿಚಾರಣೆ ನಡೆಸಿತ್ತು. ದೆಹಲಿಯಲ್ಲಿರುವ ಇಡಿ ಪ್ರಧಾನ ಕಚೇರಿಯಲ್ಲಿ ರಾಹುಲ್ ಗಾಂಧಿಯನ್ನು ಐದು ದಿನಗಳಲ್ಲಿ 50 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು. ಅದನ್ನು ವಿರೋಧಿಸಿ ಭಾರತದಾದ್ಯಂತ ಭಾರೀ ಪ್ರತಿಭಟನೆಗಳು ನಡೆದಿದ್ದವು.

Published On - 12:42 pm, Mon, 25 July 22