ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಕಾಂಗ್ರೆಸ್ ಕರೆ; ಇಂಡಿಯಾ ಬಣದಲ್ಲಿ ಹೆಚ್ಚುತ್ತಿದೆಯೇ ಬಿರುಕು?

'ಇಡಿ ಅಧಿಕಾರಿಗಳ ಮೇಲೆ ಆಡಳಿತಾರೂಢ ಸರ್ಕಾರದ ಗೂಂಡಾಗಳು ನಡೆಸಿದ ದಾಳಿಯ ನಂತರ ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ ಎಂಬುದು ಸ್ಪಷ್ಟವಾಗಿದೆ. ಇಂದು ಗಾಯಗೊಂಡಿದ್ದಾರೆ, ನಾಳೆ ಕೊಲೆಯಾಗಬಹುದು.ಇಂತಹ ಘಟನೆ ನಡೆದರೂ ಅಚ್ಚರಿ ಪಡಬೇಕಿಲ್ಲ ಎಂದ ಅಧೀರ್ ರಂಜನ್ ಚೌಧರಿ

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಕಾಂಗ್ರೆಸ್ ಕರೆ; ಇಂಡಿಯಾ ಬಣದಲ್ಲಿ ಹೆಚ್ಚುತ್ತಿದೆಯೇ ಬಿರುಕು?
ಅಧೀರ್ ರಂಜನ್ ಚೌಧರಿ
Follow us
ರಶ್ಮಿ ಕಲ್ಲಕಟ್ಟ
|

Updated on: Jan 05, 2024 | 7:57 PM

ಕೋಲ್ಕತ್ತಾ ಜನವರಿ 05: ಮಮತಾ ಬ್ಯಾನರ್ಜಿ (Mamata Banerjee) ಆಡಳಿತವಿರುವ ಪಶ್ಚಿಮ ಬಂಗಾಳದಲ್ಲಿ (West Bengal) ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಶುಕ್ರವಾರ ಇಂಡಿಯಾ ಬಣದಲ್ಲಿನ (INDIA Bloc) ಬಿರುಕು ಹೆಚ್ಚುತ್ತಿರುವಂತೆ ಕಂಡುಬಂದಿದೆ. 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಗೆ ಸವಾಲು ಹಾಕುವುದಾಗಿ ಪ್ರತಿಜ್ಞೆ ಮಾಡಿದ ಇಂಡಿಯಾ ಒಕ್ಕೂಟದಲ್ಲಿನ ಎರಡು ಪಕ್ಷಗಳ ನಡುವೆ ಬೆಳೆಯುತ್ತಿರುವ ಜಗಳ, ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ಟಿಎಂಸಿ ಬೆಂಬಲಿಗರ ದಾಳಿಗೆ ಪ್ರತಿಕ್ರಿಯೆಯಾಗಿ ಬಂದಿದೆ.

ರಾಜ್ಯದಲ್ಲಿ ಈಗ ಕಾನೂನು ಮತ್ತು ಸುವ್ಯವಸ್ಥೆ ಇಲ್ಲ. ಟಿಎಂಸಿ ಆಡಳಿತವಿರುವ ರಾಜ್ಯದಲ್ಲಿ ಅಧಿಕಾರಿಗಳ ಹತ್ಯೆ ನಡೆದರೆ ಆಶ್ಚರ್ಯವಿಲ್ಲ ಎಂದು ಪಶ್ಚಿಮ ಬಂಗಾಳದ ಉಸ್ತುವಾರಿ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ. ‘ಇಡಿ ಅಧಿಕಾರಿಗಳ ಮೇಲೆ ಆಡಳಿತಾರೂಢ ಸರಕಾರದ ಗೂಂಡಾಗಳು ನಡೆಸಿದ ದಾಳಿಯ ನಂತರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ ಎಂಬುದು ಸ್ಪಷ್ಟವಾಗಿದೆ. ಇಂದು ಗಾಯಗೊಂಡಿದ್ದಾರೆ, ನಾಳೆ ಕೊಲೆಯಾಗಬಹುದು.ಇಂತಹ ಘಟನೆ ನಡೆದರೂ ಅಚ್ಚರಿ ಪಡಬೇಕಿಲ್ಲ. ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ತಕ್ಷಣವೇ ಹೇರಬೇಕು ಎಂದು ನಾವು ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದರು.

ಪ್ರತಿಯಾಗಿ ತೃಣಮೂಲದ ವಾಗ್ದಾಳಿ ನಡೆಸಿದೆ. ಅಧೀರ್ ರಂಜನ್ ಚೌಧರಿ ಬಿಜೆಪಿಯ ಏಜೆಂಟ್ ಎಂದು ಟಿಎಂಸಿ ನಾಯಕ ಕುನಾಲ್ ಘೋಷ್ ಹೇಳಿದ್ದಾರೆ.

ಗುರುವಾರ ರಾತ್ರಿ, ಪಶ್ಚಿಮ ಬಂಗಾಳದ ಉತ್ತರ 24 ಪರಗಣದ ಸಂದೇಶ್‌ಖಾಲಿ ಗ್ರಾಮದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಬ್ಲಾಕ್ ಮಟ್ಟದ ನಾಯಕರ ನಿವಾಸದ ಮೇಲೆ ದಾಳಿ ನಡೆಸಲು ಯತ್ನಿಸಿದಾಗ ಜಾರಿ ನಿರ್ದೇಶನಾಲಯ (ಇಡಿ) ತಂಡವು ದಾಳಿ ನಡೆಸಿ ವಾಹನಗಳಿಗೆ ಹಾನಿ ಮಾಡಿತ್ತು.

ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ಸುಕಾಂತ ಮಜುಂದಾರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಘಟನೆಯ ಬಗ್ಗೆ ಎನ್‌ಐಎ ತನಿಖೆಗೆ ಒತ್ತಾಯಿಸಿದ್ದಾರೆ. ತನಿಖಾ ಸಂಸ್ಥೆ ಸ್ಥಳೀಯರನ್ನು ಪ್ರಚೋದಿಸಿದೆ ಎಂದು ಟಿಎಂಸಿ ಸಂಸದ ಸಂತನು ಸೇನ್ ಹೇಳಿದ್ದಾರೆ. “ಕೇಂದ್ರ ಪಡೆಗಳಿಂದ ಸುತ್ತುವರಿದ ಕೇಂದ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಸ್ಥಳೀಯ ಜನರನ್ನು ಕೆರಳಿಸಿದ್ದಾರೆ. ಅದಕ್ಕಾಗಿಯೇ ನಿರಂತರವಾಗಿ ಪ್ರತಿ ಪ್ರತಿಕ್ರಿಯೆಗಳು ನಡೆಯುತ್ತಿವೆ” ಎಂದು ಅವರು ಹೇಳಿದರು.

ಈ ವರ್ಷದ ಲೋಕಸಭೆ ಚುನಾವಣೆಗೆ ಬಂಗಾಳದಲ್ಲಿ ಟಿಎಂಸಿ ಕೇವಲ ಎರಡು ಸ್ಥಾನಗಳನ್ನು ಬಿಟ್ಟುಕೊಡಲು ಸಿದ್ಧವಾಗಿದೆ ಎಂದು ಅಧೀರ್ ರಂಜನ್ ಚೌಧರಿ ಗುರುವಾರ ಹೇಳಿದ್ದಾರೆ. ಮಮತಾ ಬ್ಯಾನರ್ಜಿಯ ನಿಜವಾದ ಉದ್ದೇಶ ಹೊರಬಿದ್ದಿದೆ. ಅವರು (ಟಿಎಂಸಿ) ಪಶ್ಚಿಮ ಬಂಗಾಳದಲ್ಲಿ ಎರಡು ಸ್ಥಾನಗಳನ್ನು (ಕಾಂಗ್ರೆಸ್‌ಗೆ) ನೀಡುವುದಾಗಿ ಹೇಳುತ್ತಿದ್ದಾರೆ. ಆ ಸ್ಥಾನಗಳಲ್ಲಿ ಈಗಾಗಲೇ ಕಾಂಗ್ರೆಸ್ ಸಂಸದರಿದ್ದಾರೆ. ಅವರು ನಮಗೆ ಏನು ಹೊಸದನ್ನು ನೀಡುತ್ತಿದ್ದಾರೆ? ಮಮತಾ ಬ್ಯಾನರ್ಜಿ ಮತ್ತು ಬಿಜೆಪಿಯನ್ನು ಸೋಲಿಸಿ ನಾವು ಈ ಎರಡು ಸ್ಥಾನಗಳನ್ನು ಗೆದ್ದಿದ್ದೇವೆ. ಅವರು ನಮಗೆ ಏನು ಉಪಕಾರ ಮಾಡುತ್ತಿದ್ದಾರೆ?

ಮಮತಾ ಬ್ಯಾನರ್ಜಿ ಅವರನ್ನು ಯಾರು ನಂಬುತ್ತಾರೆ? ಕಾಂಗ್ರೆಸ್ ಗೆಲ್ಲಲು ಮಮತಾ ಅವರೇ ಬೇಕು… ಕಾಂಗ್ರೆಸ್ ಹೋರಾಡಬಹುದು ಮತ್ತು ಹೆಚ್ಚು ಸ್ಥಾನಗಳನ್ನು ಗೆಲ್ಲುವ ಸಾಮರ್ಥ್ಯ ಹೊಂದಿದೆ. ನಾವು ತೋರಿಸುತ್ತೇವೆ. ಮಮತಾ ಔದಾರ್ಯದಿಂದ ಕೊಟ್ಟ ಈ ಎರಡು ಸ್ಥಾನಗಳನ್ನು ನಾವು ಉಳಿಸಿಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ.

ಇದನ್ನೂ ಓದಿ:ಪ್ರಧಾನಿ ಮೋದಿ ಎದುರು ವಾರಾಣಸಿಯಿಂದ ಸ್ಪರ್ಧಿಸಿ: ಮಮತಾ ಬ್ಯಾನರ್ಜಿಗೆ ಬಿಜೆಪಿ ನಾಯಕಿ ಸವಾಲು

ಚೌಧರಿ ಬಿಜೆಪಿಯವರಂತೆ ವರ್ತಿಸುತ್ತಿದ್ದಾರೆ ಎಂದು ಟಿಎಂಸಿ ಹೇಳಿದೆ. 2021ರ ಅಸೆಂಬ್ಲಿ ಚುನಾವಣೆಯಲ್ಲಿ ಟಿಎಂಸಿ ಏಕಾಂಗಿಯಾಗಿ ಹೋರಾಡಿದೆ. ಆದರೆ ಅಧೀರ್ ಚೌಧರಿ ಅವರ ಪಕ್ಷವು ಸಿಪಿಎಂ ಜೊತೆ ಮೈತ್ರಿ ಮಾಡಿಕೊಂಡು ಸೊನ್ನೆ ಸಾಧಿಸಿದೆ. ಅವರು ಏನು ಮಾತನಾಡುತ್ತಿದ್ದಾರೆ? ಬಿಜೆಪಿ ವಿರುದ್ಧ ಹೋರಾಡಲು ಟಿಎಂಸಿಗೆ ಯಾರೂ ಅಗತ್ಯವಿಲ್ಲ, ಆದರೆ ಇಂಡಿಯಾ ಒಕ್ಕೂಟಕ್ಕಾಗಿ ನಮ್ಮ ನಾಯಕಿ ಮಮತಾ ಬ್ಯಾನರ್ಜಿ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ. ಆದರೆ, ಕಾಂಗ್ರೆಸ್ ಡಬಲ್ ಗೇಮ್ ಆಡುತ್ತಿದೆ ಎಂದು ಟಿಎಂಸಿ ಹೇಳಿದೆ.

ಬ್ಯಾನರ್ಜಿಯವರ TMC 22 ಸ್ಥಾನಗಳನ್ನು ಗೆದ್ದಿದೆ; ಬಿಜೆಪಿ 18 ಸ್ಥಾನಗಳನ್ನು ಗೆದ್ದಿತ್ತು. ಬಂಗಾಳದಲ್ಲಿ ಬಿಜೆಪಿಯನ್ನು ಸೋಲಿಸಲು ಟಿಎಂಸಿ ಮಾತ್ರ ಸಾಧ್ಯ ಎಂದು ಮಮತಾ ಬ್ಯಾನರ್ಜಿ ಇತ್ತೀಚೆಗೆ ತಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ