Wayanad Bypolls: ವಯನಾಡ್ ಉಪಚುನಾವಣೆಗೆ ನಾಳೆ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ

ಲೋಕಸಭೆ ಚುನಾವಣೆಯ ಗೆಲುವಿನ ಕೆಲವು ದಿನಗಳ ನಂತರ ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಂಡಿದ್ದರು. ಕೇರಳದ ವಯನಾಡ್ ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದರು. ಇದೀಗ ಆ ಸ್ಥಾನಕ್ಕೆ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ.

Wayanad Bypolls: ವಯನಾಡ್ ಉಪಚುನಾವಣೆಗೆ ನಾಳೆ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ
ಪ್ರಿಯಾಂಕಾ ಗಾಂಧಿ
Follow us
|

Updated on: Oct 22, 2024 | 9:06 PM

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ನಾಳೆ (ಬುಧವಾರ) ವಯನಾಡ್ ಲೋಕಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. ಬುಧವಾರ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಕಲ್ಪೆಟ್ಟಾ ಹೊಸ ಬಸ್ ನಿಲ್ದಾಣದಿಂದ ಬೆಳಿಗ್ಗೆ 11 ಗಂಟೆಗೆ ರೋಡ್ ಶೋ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 12 ಗಂಟೆ ಸುಮಾರಿಗೆ ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಲಾಗುವುದು.

ಚುನಾವಣಾ ಆಯೋಗವು ಕಳೆದ ವಾರ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಯನ್ನು ಘೋಷಿಸುವುದರೊಂದಿಗೆ ಕೇರಳ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿಯವರ ಚುನಾವಣಾ ಚೊಚ್ಚಲ ಪ್ರವೇಶಕ್ಕೆ ವೇದಿಕೆಯನ್ನು ಸಿದ್ಧಪಡಿಸಲಾಯಿತು. ವಯನಾಡ್ ಉಪಚುನಾವಣೆಯ ದಿನಾಂಕವನ್ನು ಘೋಷಿಸಿದ ಕೂಡಲೇ ಕೇರಳದ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ (52) ಅವರು ತಮ್ಮ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಘೋಷಿಸಿತು.

ಇದನ್ನೂ ಓದಿ: Wayanad Bypolls: ವಯನಾಡಿ​​ನಲ್ಲಿ ಮಹಿಳಾ ಸಮರ; ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧೆ

ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ನವ್ಯಾ ಹರಿದಾಸ್ ಅವರನ್ನು ಕಣಕ್ಕಿಳಿಸಿದೆ. 2024 ರ ಲೋಕಸಭೆ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಿಂದ ಗೆದ್ದ ನಂತರ ಅಮೇಥಿಯನ್ನು ಉಳಿಸಿಕೊಳ್ಳುವ ನಿರ್ಧಾರದ ನಂತರ ರಾಹುಲ್ ವಯನಾಡ್ ಸ್ಥಾನವನ್ನು ತೆರವು ಮಾಡಿದಾಗ ಉಪಚುನಾವಣೆ ಅಗತ್ಯವಾಗಿತ್ತು. ವಯನಾಡ್ ಲೋಕಸಭಾ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿರುದ್ಧ ನವ್ಯಾ ಹರಿದಾಸ್ ಅವರನ್ನು ಕಣಕ್ಕಿಳಿಸಿದೆ. ನವ್ಯಾ ಹರಿದಾಸ್ ಅವರು ಪಕ್ಷದ ಕ್ರಿಯಾಶೀಲ ನಾಯಕರಲ್ಲಿ ಒಬ್ಬರು. ವೃತ್ತಿಯಲ್ಲಿ ಮೆಕ್ಯಾನಿಕಲ್ ಇಂಜಿನಿಯರ್ ಆಗಿರುವ ನವ್ಯಾ ಅವರು 2007 ರಲ್ಲಿ ಬಿ.ಟೆಕ್ ಅನ್ನು ಪೂರ್ಣಗೊಳಿಸಿದ್ದಾರೆ. ಅವರು ಕೋಝಿಕ್ಕೋಡ್ ಕಾರ್ಪೊರೇಶನ್‌ನಲ್ಲಿ ಕೌನ್ಸಿಲರ್ ಆಗಿದ್ದಾರೆ ಮತ್ತು ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ: ರಷ್ಯಾ-ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕೆ ಭಾರತ ಸಹಾಯ; ಪುಟಿನ್ ಜೊತೆ ಪ್ರಧಾನಿ ಮೋದಿ ಮಾತು

ಭಾರತದ ಚುನಾವಣಾ ಆಯೋಗವು ಅಕ್ಟೋಬರ್ 15 ರಂದು 48 ಅಸೆಂಬ್ಲಿ ಕ್ಷೇತ್ರಗಳು ಮತ್ತು ಎರಡು ಸಂಸದೀಯ ಸ್ಥಾನಗಳಿಗೆ ಉಪಚುನಾವಣೆಗಳನ್ನು ಘೋಷಿಸಿತು. ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ಜೊತೆಗೆ 2 ಹಂತಗಳಲ್ಲಿ ಉಪಚುನಾವಣೆಗಳು ನಡೆಯಲಿವೆ. ಕೇರಳದ 47 ವಿಧಾನಸಭಾ ಕ್ಷೇತ್ರಗಳು ಮತ್ತು ವಯನಾಡ್ ಸಂಸದೀಯ ಸ್ಥಾನವನ್ನು ಒಳಗೊಂಡ ಮೊದಲ ಹಂತದ ಮತದಾನವು ನವೆಂಬರ್ 13ರಂದು ನಡೆಯಲಿದೆ. ಎರಡನೇ ಹಂತದ ಮತದಾನವು ನವೆಂಬರ್ 20ರಂದು ಉತ್ತರಾಖಂಡದ ಕೇದಾರನಾಥ ವಿಧಾನಸಭಾ ಕ್ಷೇತ್ರ ಮತ್ತು ಮಹಾರಾಷ್ಟ್ರದ ನಾಂದೇಡ್ ಸಂಸದೀಯ ಕ್ಷೇತ್ರಕ್ಕೆ ನಡೆಯಲಿದೆ. ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ