ದೆಹಲಿ ಅಕ್ಟೋಬರ್ 12: ಅರ್ಬನ್ ನಕ್ಸಲರು ಕಾಂಗ್ರೆಸ್ ಪಕ್ಷವನ್ನು ನಡೆಸುತ್ತಿದ್ದಾರೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಬಿಜೆಪಿ ಭಯೋತ್ಪಾದಕರ ಪಕ್ಷ ಎಂದಿದ್ದಾರೆ. ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ತಳ್ಳಿಹಾಕಿದ ಖರ್ಗೆ, “ಮೋದಿ ಯಾವಾಗಲೂ ಕಾಂಗ್ರೆಸ್ ಅನ್ನು ಅರ್ಬನ್ ನಕ್ಸಲರ ಪಕ್ಷ ಎಂದು ಲೇಬಲ್ ಮಾಡುತ್ತಾರೆ. ಅದು ಅವರ ಅಭ್ಯಾಸ. ಆದರೆ ಅವರ ಸ್ವಂತ ಪಕ್ಷದ ಬಗ್ಗೆ ಏನಂತಾರೆ? ಬಿಜೆಪಿ ಭಯೋತ್ಪಾದಕರ ಪಕ್ಷವಾಗಿದ್ದು, ಹತ್ಯೆಯಲ್ಲಿ ತೊಡಗಿದೆ. ಇಂತಹ ಆರೋಪ ಮಾಡುವ ಹಕ್ಕು ಮೋದಿಯವರಿಗಿಲ್ಲ ಎಂದಿದ್ದಾರೆ.
ಅರ್ಬನ್ ನಕ್ಸಲರು ಕಾಂಗ್ರೆಸ್ ಅನ್ನು ನಡೆಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಎರಡು ಬಾರಿ, ವಿವಿಧ ಸಂದರ್ಭಗಳಲ್ಲಿ ಹೇಳಿದ್ದಾರೆ.
ಅಕ್ಟೋಬರ್ 5 ರಂದು, ಪಿಎಂ ನರೇಂದ್ರ ಮೋದಿ ಅವರು ಕಾಂಗ್ರೆಸ್ ಅನ್ನು ಅರ್ಬನ್ ನಕ್ಸಲರ ಗುಂಪು ನಿಯಂತ್ರಿಸುತ್ತಿದೆ ಎಂದು ಹೇಳಿದ್ದು, ಪಕ್ಷದ “ಅಪಾಯಕಾರಿ ಅಜೆಂಡಾ” ವನ್ನು ಸೋಲಿಸಲು ಜನರು ಒಗ್ಗೂಡಬೇಕೆಂದು ಒತ್ತಾಯಿಸಿದರು.
BJP is a terrorist party. They engage in lynching, they kill, & they persecute the marginalized communities. They exploit tribal people…Modi has no right to govern, that his govt is oppressive, especially towards the marginalized & tribal community..: Congress President Kharge pic.twitter.com/YqBGS3gLx2
— Megh Updates 🚨™ (@MeghUpdates) October 12, 2024
ವಿಧಾನಸಭೆ ಚುನಾವಣೆಗೆ ಮುನ್ನ ಮಹಾರಾಷ್ಟ್ರದ ವಿದರ್ಭ ಪ್ರದೇಶದ ವಾಶಿಮ್ ಬಳಿ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ, “ನಾವೆಲ್ಲರೂ ಒಂದಾದರೆ ದೇಶವನ್ನು ವಿಭಜಿಸುವ ಅವರ ಕಾರ್ಯಸೂಚಿ ವಿಫಲವಾಗುತ್ತದೆ ಎಂದು ನಾನು ಭಾವಿಸುತ್ತೇನೆ. ಭಾರತಕ್ಕಾಗಿ ಒಳ್ಳೆಯ ಉದ್ದೇಶವನ್ನು ಹೊಂದಿರದ ಜನರೊಂದಿಗೆ ಕಾಂಗ್ರೆಸ್ ಎಷ್ಟು ನಿಕಟವಾಗಿ ನಿಂತಿದೆ ಎಂಬುದನ್ನು ಪ್ರತಿಯೊಬ್ಬರೂ ನೋಡಬಹುದು. ದಲಿತರನ್ನು ದಲಿತರು, ಬಡವರನ್ನು ಬಡವರು ಎಂದು ಉಳಿಸಿಕೊಳ್ಳಲು ಕಾಂಗ್ರೆಸ್ ಬಯಸುತ್ತಿದೆ. ಹಾಗಾಗಿ ಕಾಂಗ್ರೆಸ್ ಬಗ್ಗೆ ಎಚ್ಚರದಿಂದಿರಿ. ಅರ್ಬನ್ ನಕ್ಸಲರು ಕಾಂಗ್ರೆಸ್ ಆಡಳಿತ ನಡೆಸುತ್ತಿದ್ದಾರೆ. ಪಕ್ಷವು ದೇಶವನ್ನು ವಿಭಜಿಸಲು ಬಯಸುತ್ತದೆ, ಆದ್ದರಿಂದ ಅದು ನಮ್ಮನ್ನು ಒಡೆಯಲು ಪ್ರಯತ್ನಿಸುತ್ತಿದೆ. ಹಾಗಾಗಿ ಕಾಂಗ್ರೆಸ್ ಪಕ್ಷದ ಕುತಂತ್ರವನ್ನು ವಿಫಲಗೊಳಿಸಲು ಒಗ್ಗಟ್ಟಾಗಿರಿ. ಇದು ಒಟ್ಟಿಗೆ ಇರಬೇಕಾದ ಸಮಯ ಎಂದು ಹೇಳಿದ್ದರು.
ಅಕ್ಟೋಬರ್ 9 ರಂದು ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದ ನಂತರ ಅವರು ಮತ್ತೆ “ಅರ್ಬನ್ ನಕ್ಸಲರ” ಬಗ್ಗೆ ಪ್ರಸ್ತಾಪಿಸಿದರು.
ಇದನ್ನೂ ಓದಿ: ತಮಿಳುನಾಡು ರೈಲು ಅಪಘಾತಕ್ಕೆ ಕಾರಣವೇನು? ರೈಲ್ವೆ ಅಧಿಕಾರಿ ಹೀಗಂತಾರೆ…
ಅಕ್ಟೋಬರ್ 9 ರಂದು ಮಹಾರಾಷ್ಟ್ರದಲ್ಲಿ ವಾಸ್ತವಿಕವಾಗಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ನಂತರ, ಹರ್ಯಾಣ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ದೇಶದ ಮನಸ್ಥಿತಿಯನ್ನು ತೋರಿಸುತ್ತದೆ. ಜನರು ಕಾಂಗ್ರೆಸ್ ಮತ್ತು “ಅರ್ಬನ್ ನಕ್ಸಲರ” ದ್ವೇಷದ ಪಿತೂರಿಗಳಿಗೆ ಬಲಿಯಾಗುವುದಿಲ್ಲ ಎಂದು ತೋರಿಸಿದ್ದಾರೆ ಎಂದು ಹೇಳಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 5:40 pm, Sat, 12 October 24