ರಾಷ್ಟ್ರಪತಿ ಕುರಿತ ಸೋನಿಯಾ ಗಾಂಧಿ ಹೇಳಿಕೆಯನ್ನು ತಿರುಚಲಾಗಿದೆ; ಕಾಂಗ್ರೆಸ್ ಸ್ಪಷ್ಟನೆ
ರಾಷ್ಟ್ರಪತಿ ದ್ರೌಪದಿ ಮುರ್ಮು ‘ಪೂರ್ ಲೇಡಿ’ ಎಂಬ ಸೋನಿಯಾ ಗಾಂಧಿ ಹೇಳಿಕೆಗೆ ಸಂಬಂಧಿಸಿದಂತೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕಾಂಗ್ರೆಸ್ ಈ ಬಗ್ಗೆ ಸ್ಪಷ್ಟನೆ ನೀಡಿದೆ. ಕಾಂಗ್ರೆಸ್ ಪಕ್ಷ ಎಂದಿಗೂ ರಾಷ್ಟ್ರಪತಿರನ್ನು ಅವಮಾನಿಸಿಲ್ಲ, ಮುಂದೆಯೂ ಅವಮಾನಿಸುವುದಿಲ್ಲ. ಸೋನಿಯಾ ಗಾಂಧಿ ನೀಡಿದ ಹೇಳಿಕೆಯನ್ನು ತಿರುಚಲಾಗಿದೆ. ಬಿಜೆಪಿ ಸರ್ಕಾರ ಹೊಸ ಸಂಸತ್ ಕಟ್ಟಡದ ಉದ್ಘಾಟನೆಗೆ ರಾಷ್ಟ್ರಪತಿಯನ್ನು ಆಹ್ವಾನಿಸಿಲ್ಲ. ಅಲ್ಲದೇ ರಾಮಮಂದಿರ ಉದ್ಘಾಟನೆಗೂ ರಾಷ್ಟ್ರಪತಿಯರನ್ನು ಕರೆದಿರಲಿಲ್ಲ. ಇದು ನಿಜವಾದ ಅವಮಾನ ಎಂದು ಕಾಂಗ್ರೆಸ್ ಆರೋಪ ಮಾಡಿದೆ.

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಸಂಸತ್ನಲ್ಲಿ ಮಾಡಿದ ಭಾಷಣದ ಬಗ್ಗೆ ಪ್ರತಿಕ್ರಿಯಿಸುವಾಗ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ರಾಷ್ಟ್ರಪತಿಯವನ್ನು ಪೂರ್ ಲೇಡಿ, ಅವರಿಗೆ ಮಾತನಾಡಲೂ ಕಷ್ಟವಾಗುತ್ತಿತ್ತು, ಬಹಳ ಸುಸ್ತಾಗಿದ್ದರು ಎಂದು ಹೇಳಿದ್ದರು. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಬಿಜೆಪಿ ಈ ಬಗ್ಗೆ ಕಾಂಗ್ರೆಸ್ ಬೇಷರತ್ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸ್ಪಷ್ಟನೆ ನೀಡಿದೆ. ಸೋನಿಯಾ ಗಾಂಧಿಯವರು ನೀಡಿದ ಹೇಳಿಕೆಯನ್ನು ತಿರಚಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಸೋನಿಯಾ ಗಾಂಧಿ ರಾಷ್ಟ್ರಪತಿಗಳ ಬಗ್ಗೆ ನೀಡಿದ ಹೇಳಿಕೆಗೆ ವ್ಯಕ್ತವಾದ ವಿರೋಧದ ನಡುವೆಯೇ, ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಪಕ್ಷವು ರಾಷ್ಟ್ರಪತಿ ಅಥವಾ ಯಾವುದೇ ನಾಗರಿಕರನ್ನು ಎಂದಿಗೂ ಅವಮಾನಿಸಲು ಸಾಧ್ಯವಿಲ್ಲ. ಬಿಜೆಪಿ ಸೋನಿಯಾ ಗಾಂಧಿಯ ಹೇಳಿಕೆಯನ್ನು ತಿರುಚಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಘನತೆಗೆ ಧಕ್ಕೆ ತಂದಿದೆ; ದ್ರೌಪದಿ ಮುರ್ಮು ಕುರಿತ ಸೋನಿಯಾ ಗಾಂಧಿ ಟೀಕೆಗೆ ರಾಷ್ಟ್ರಪತಿ ಭವನ ಆಕ್ರೋಶ
“ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮತ್ತು ನಮ್ಮ ನಾಯಕರು ಎಂದಿಗೂ ರಾಷ್ಟ್ರಪತಿ ಅಥವಾ ಯಾವುದೇ ನಾಗರಿಕರನ್ನು ಅವಮಾನಿಸಲು ಸಾಧ್ಯವಿಲ್ಲ. ಇದು ನಮ್ಮ ಸಂಸ್ಕೃತಿಯಲ್ಲ” ಎಂದು ಖರ್ಗೆ ಹೇಳಿದ್ದಾರೆ.
#WATCH | Delhi | After the President’s address to the Parliament, Congress MP Sonia Gandhi says,”…The President was getting very tired by the end…She could hardly speak, poor thing…” pic.twitter.com/o6cwoeYFdE
— ANI (@ANI) January 31, 2025
“ಹೊಸ ಸಂಸತ್ತಿನ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿಯನ್ನು ಆಹ್ವಾನಿಸದ ದಿನವೇ ಮೋದಿ ಸರ್ಕಾರವು ರಾಷ್ಟ್ರಪತಿಗಳನ್ನು ಅವಮಾನಿಸಿತು. ಬಿಜೆಪಿ ಉದ್ದೇಶಪೂರ್ವಕವಾಗಿ ನಮ್ಮ ಪ್ರಸ್ತುತ ರಾಷ್ಟ್ರಪತಿ ಮತ್ತು ಹಿಂದಿನ ರಾಷ್ಟ್ರಪತಿಗಳನ್ನು ಪ್ರಜಾಪ್ರಭುತ್ವದ ದೇವಾಲಯ ಮತ್ತು ರಾಮ ಮಂದಿರ ಎರಡರಿಂದಲೂ ದೂರವಿಟ್ಟಿತ್ತು” ಎಂದು ಅವರು ಟೀಕಿಸಿದ್ದಾರೆ.
ಇದನ್ನೂ ಓದಿ: ಬುಡಕಟ್ಟು ಜನರಿಗಾದ ಅವಮಾನ; ರಾಷ್ಟ್ರಪತಿ ದ್ರೌಪದಿ ಮುರ್ಮು ಕುರಿತ ಸೋನಿಯಾ ಗಾಂಧಿ ಹೇಳಿಕೆಗೆ ಮೋದಿ ಆಕ್ಷೇಪ
ಬಿಜೆಪಿ ಉದ್ದೇಶಪೂರ್ವಕವಾಗಿ ಪ್ರಸ್ತುತ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಅವರಿಗಿಂತ ಹಿಂದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಸಂಸತ್ತು ಮತ್ತು ಅಯೋಧ್ಯೆಯ ರಾಮ ಮಂದಿರದಿಂದ ದೂರವಿಟ್ಟಿದೆ ಎಂದು ಖರ್ಗೆ ಆರೋಪಿಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ