ಅಸ್ಸಾಂನಲ್ಲಿ ರಾಹುಲ್ ಗಾಂಧಿ ಭದ್ರತೆ ಬಗ್ಗೆ ಕಳವಳ, ಅಮಿತ್​ ಶಾಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿ ಅಸ್ಸಾಂನಲ್ಲಿ ಭಾರತ್​ ಜೋಡೋ ನ್ಯಾಯ ಯಾತ್ರೆ ವೇಳೆ ಎದುರಿಸಿರುವ ಭದ್ರತಾ ಲೋಪಗಳ ಬಗ್ಗೆ ಕಳವಳ ವ್ಯಕ್ತಪಡಿಸಿ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಗೃಹ ಸಚಿವ ಅಮಿತ್​ ಶಾಗೆ ಪತ್ರಬರೆದಿದ್ದಾರೆ. ರಾಜ್ಯಸಭೆಯ ವಿರೋಧಪಕ್ಷ ನಾಯಕರೂ ಆಗಿರುವ ಖರ್ಗೆ ಮಂಗಳವಾರ ರಾತ್ರಿ ಬರೆದ ಪತ್ರವು ಕಾಂಗ್ರೆಸ್​ ನಾಯಕನ ಸುರಕ್ಷತೆಯ ಬಗ್ಗೆ ಮೂಡಿರುವ ಕಳವಳವನ್ನು ಎತ್ತಿ ಹೇಳಿದೆ. ಜನವರಿ 22ರಂದು ನಾಗಾಂವ್​ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ಬೆಂಗಾವಲು ಪಡೆಗೆ ಅಡ್ಡಿಪಡಿಸಿದರು ಎಂದು ಪತ್ರದಲ್ಲಿ ಬರೆದಿದ್ದಾರೆ.

ಅಸ್ಸಾಂನಲ್ಲಿ ರಾಹುಲ್ ಗಾಂಧಿ ಭದ್ರತೆ ಬಗ್ಗೆ ಕಳವಳ, ಅಮಿತ್​ ಶಾಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ
ರಾಹುಲ್ ಗಾಂಧಿ
Image Credit source: India TV

Updated on: Jan 24, 2024 | 9:45 AM

ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿ(Rahul Gandhi) ಎದುರಿಸಿರುವ ಭದ್ರತಾ ಲೋಪಗಳ ಬಗ್ಗೆ ಕಳವಳ ವ್ಯಕ್ತಪಡಿಸಿ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಕೇಂದ್ರ ಗೃಹ ಸಚಿವ ಅಮಿತ್​ ಶಾಗೆ ಪತ್ರ ಬರೆದಿದ್ದಾರೆ. ರಾಜ್ಯಸಭೆಯ ವಿರೋಧಪಕ್ಷ ನಾಯಕರೂ ಆಗಿರುವ ಖರ್ಗೆ ಮಂಗಳವಾರ ರಾತ್ರಿ ಬರೆದ ಪತ್ರವು ಕಾಂಗ್ರೆಸ್​ ನಾಯಕನ ಸುರಕ್ಷತೆಯ ಬಗ್ಗೆ ಮೂಡಿರುವ ಕಳವಳವನ್ನು ಎತ್ತಿ ಹೇಳಿದೆ. ಜನವರಿ 22ರಂದು ನಾಗಾಂವ್​ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ಬೆಂಗಾವಲು ಪಡೆಗೆ ಅಡ್ಡಿಪಡಿಸಿದರು ಎಂದು ಪತ್ರದಲ್ಲಿ ಬರೆದಿದ್ದಾರೆ.

ಅಸ್ಸಾಂ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದಾರೆ ಮತ್ತು ಕೆಲವೊಮ್ಮೆ ಕಾರ್ಯಕರ್ತರ ಬೆಂಗಾವಲು ವಾಹನವನ್ನು ಪ್ರವೇಶಿಸಲು ಅವಕಾಶ ಮಾಡಿಕೊಟ್ಟಿದ್ದಾರೆ ಹೀಗಾಗಿ ರಾಹುಲ್ ಗಾಂಧಿ ಭದ್ರತೆಗೆ ಅಪಾಯವಿದೆ ಎಂದಿದ್ದಾರೆ. ಮಂಗಳವಾರ ಗುವಾಹಟಿಯ ಹೊರವಲಯದಲ್ಲಿ ಗಾಂಧಿ ನೇತೃತ್ವದ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆಸಿದ ನಂತರ ಅಮಿತ್​ಶಾ ಗೆ ಪತ್ರ ಬರೆಯಲಾಗಿದೆ.

ಶಾ ಮಧ್ಯಪ್ರವೇಶಿಸಿ ರಾಹುಲ್ ಗಾಂಧಿ ಹಾಗೂ ಯಾತ್ರೆಯಲ್ಲಿ ಭಾಗವಹಿಸುವವರ ಸುರಕ್ಷತೆಯನ್ನು ಖಾತ್ರಿಪಡಿಸುವಂತೆ ಪತ್ರದಲ್ಲಿ ಒತ್ತಾಯಿಸಲಾಗಿದೆ.
ದೈಹಿಕ ಹಾನಿಗೆ ಕಾರಣವಾಗುವ ಯಾವುದೇ ಅಹಿತಕರ ಘಟನೆಗಳನ್ನು ತಡೆಯಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಮತ್ತು ಅಸ್ಸಾಂನ ಪೊಲೀಸ್ ಮಹಾನಿರ್ದೇಶಕರನ್ನು ವಿನಂತಿಸುತ್ತೇನೆ ಎಂದರು.

ಮತ್ತಷ್ಟು ಓದಿ: ಅಸ್ಸಾಂ: ಕಾಂಗ್ರೆಸ್​ ಕಾರ್ಯಕರ್ತರು ಪೊಲೀಸರ ನಡುವೆ ಘರ್ಷಣೆ, ರಾಹುಲ್ ವಿರುದ್ಧ ಪ್ರಕರಣ ದಾಖಲಿಸಿ ಎಂದ ಸಿಎಂ ಹಿಮಂತ ಬಿಸ್ವಾ ಶರ್ಮಾ

ಭಾರತ್ ಜೋಡೋ ನ್ಯಾಯ ಯಾತ್ರೆಯು ಜನವರಿ 14 ರಂದು ಮಣಿಪುರದ ಇಂಫಾಲ್‌ನಿಂದ ಪ್ರಾರಂಭವಾಯಿತು ಮತ್ತು ಮುಂಬೈನಲ್ಲಿ ಕೊನೆಗೊಳ್ಳುವ ಈ ಯಾತ್ರೆ 6,700 ಕಿಲೋಮೀಟರ್‌ಗಳನ್ನು ಕ್ರಮಿಸಲು ಸಿದ್ಧವಾಗಿದೆ, ಸಮಾಜದ ದುರ್ಬಲ ವರ್ಗಗಳನ್ನು ಒಗ್ಗೂಡಿಸುವುದರೊಂದಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಸಮಸ್ಯೆಗಳನ್ನು ಪರಿಹರಿಸುವ ಗುರಿಯನ್ನು ಹೊಂದಿದೆ.

ಕಾರ್ಮಿಕ ಕಾನೂನುಗಳ ನಿರ್ವಹಣೆ ಮತ್ತು ವಿರೋಧ ಪಕ್ಷದ ವ್ಯಕ್ತಿಗಳ ವಿರುದ್ಧ ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗ ಸೇರಿದಂತೆ ನರೇಂದ್ರ ಮೋದಿ ಸರ್ಕಾರದ ಜನವಿರೋಧಿ ನೀತಿಗಳು ಎಂದು ವಿವರಿಸಲು ಕಾಂಗ್ರೆಸ್ ಯಾತ್ರೆಯನ್ನು ವೇದಿಕೆಯಾಗಿ ಇರಿಸಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us