ಕೊರೊನಾ ಸಂದರ್ಭದಲ್ಲಿ ಸೆಂಟ್ರಲ್ ವಿಸ್ತಾ ಯೋಜನೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕಾರಿಣಿ ನಿರ್ಣಯ

| Updated By: ganapathi bhat

Updated on: Aug 23, 2021 | 12:40 PM

ಪ್ರಧಾನಿ ವೈಯಕ್ತಿಕ ಚಿಂತನೆ ಬಿಟ್ಟು ದೇಶ ಸೇವೆಗೆ ಬದ್ಧರಾಗಲಿ. ಪ್ರಧಾನಿ ಜಂಬಕ್ಕೆ ರಾಷ್ಟ್ರದ ಸಂಪನ್ಮೂಲ ಬಳಕೆಯಾಗಬಾರದು ಎಂದು ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಕೊರೊನಾ ಸಂದರ್ಭದಲ್ಲಿ ಸೆಂಟ್ರಲ್ ವಿಸ್ತಾ ಯೋಜನೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕಾರಿಣಿ ನಿರ್ಣಯ
ಹೊಸ ಸಂಸತ್​ ಭವನದ ಚಿತ್ರ
Follow us on

ದೆಹಲಿ: ಸೆಂಟ್ರಲ್ ವಿಸ್ತಾ ಯೋಜನೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೆಂಟ್ರಲ್ ವಿಸ್ತಾ ಯೋಜನೆ ಬದಲು ಆ ಹಣವನ್ನು ವೈದ್ಯಕೀಯ ಸೌಲಭ್ಯಕ್ಕೆ ಬಳಕೆ ಮಾಡುವಂತೆ ಕಾಂಗ್ರೆಸ್ ಒತ್ತಾಯಿಸಿದೆ. ಲಸಿಕೆ, ಆಕ್ಸಿಜನ್ ಪೂರೈಕೆಗೆ ಸಂಪನ್ಮೂಲ ಬಳಕೆಯಾಗಬೇಕು. ಕೊರೊನಾ ಬಿಕ್ಕಟ್ಟಿನಲ್ಲಿ ಐಕ್ಯತೆ ತೋರಿಸುವ ಸಮಯ ಇದಾಗಿದೆ. ಇದು ನಿಜವಾಗಬೇಕಾದರೆ ಪ್ರಧಾನಿ ಮೋದಿ ತನ್ನ ತಪ್ಪುಗಳಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ ಎಂದು ಕಾಂಗ್ರೆಸ್ ಹೇಳಿದೆ.

ಪ್ರಧಾನಿ ವೈಯಕ್ತಿಕ ಚಿಂತನೆ ಬಿಟ್ಟು ದೇಶ ಸೇವೆಗೆ ಬದ್ಧರಾಗಲಿ. ಪ್ರಧಾನಿ ಜಂಬಕ್ಕೆ ರಾಷ್ಟ್ರದ ಸಂಪನ್ಮೂಲ ಬಳಕೆಯಾಗಬಾರದು ಎಂದು ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ದೇಶದಲ್ಲಿ ಕೊರೊನಾ 2ನೇ ಅಲೆಯಿಂದ ಬಿಕ್ಕಟ್ಟು ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಸಂಸತ್​ ಅಧಿವೇಶನ ಕರೆಯುವಂತೆ ಲೋಕಸಭೆಯಲ್ಲಿ ಕಾಂಗ್ರೆಸ್​ ನಾಯಕ ಅಧೀರ್​ ರಂಜನ್ ಚೌಧರಿ ಮನವಿ ಸಲ್ಲಿಸಿದ್ದಾರೆ. ಪತ್ರದ ಮೂಲಕ ರಾಷ್ಟ್ರಪತಿಗಳಿಗೆ ಅಧೀರ್​ ರಂಜನ್ ಮನವಿ ಸಲ್ಲಿಸಿದ್ದಾರೆ.

ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ ದಿನಾಂಕ ನಿಗದಿಪಡಿಸಿ ಆಮೇಲೆ ಅದನ್ನು ಮುಂದೂಡಲಾಗಿದೆ. ಕೊವಿಡ್ ಸಾಂಕ್ರಾಮಿಕದ ಹೊತ್ತಲ್ಲಿ ಚುನಾವಣೆ ಬೇಡ ಎಂದು ಕಾಂಗ್ರೆಸ್ ಪಕ್ಷದ ನಾಯಕರು ತೀರ್ಮಾನಿಸಿರುವುದಾಗಿ ಪಕ್ಷದ ಮೂಲಗಳು ಹೇಳಿರುವುದಾಗಿ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಮುಂದೂಡಲ್ಪಟ್ಟಿದ್ದು ಇದು ಮೂರನೇ ಬಾರಿ. ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಜೂನ್ 23ರಂದು ಚುನಾವಣೆ ನಡೆಸುವುದಾಗಿ ತೀರ್ಮಾನಿಸಲಾಗಿತ್ತು. ಆದರೆ ಹಲವಾರು ಸದಸ್ಯರು ಕೊವಿಡ್ ಸಾಂಕ್ರಾಮಿಕದ ನಡುವೆ ಚುನಾವಣೆ ನಡೆಸುವುದು ಬೇಡ ಎಂದು ಹೇಳಿದ ಕಾರಣ, ಚುನಾವಣೆಯನ್ನು ಮುಂದೂಡಲಾಗಿದೆ.

ಇಂದಿನ ಸಭೆಯಲ್ಲಿ, ಪಕ್ಷದ ಹೊಸ ಅಧ್ಯಕ್ಷರ ಚುನಾವಣಾ ಪ್ರಕ್ರಿಯೆಯ ಕುರಿತು ಚರ್ಚೆ ನಡೆಸಲಾಯಿತು. ಆದರೆ ಹಿರಿಯ ನಾಯಕರಾದ ಅಶೋಕ್ ಗೆಹ್ಲೋಟ್, ಜಿಎನ್ ಆಜಾದ್, ಆನಂದ್ ಶರ್ಮಾ ಅವರು ಕೊವಿಡ್ರ ಕಾರಣದಿಂದಾಗಿ ಈ ಸಮಯದಲ್ಲಿ ಚುನಾವಣೆಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊವಿಡ್ ನಿಭಾಯಿಸಲು ನರೇಂದ್ರ ಮೋದಿಗೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯಿಂದ 6 ಸಲಹೆ

Published On - 7:38 pm, Mon, 10 May 21