ಹಿಂದೂಗಳ ನಡುವೆ ಜಗಳ ತರಲು ಕಾಂಗ್ರೆಸ್‌ ಷಡ್ಯಂತ್ರ; ಮೋದಿ ಆರೋಪ

ನಾಗ್ಪುರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಶಿರಡಿ ವಿಮಾನ ನಿಲ್ದಾಣದಲ್ಲಿ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ಮೇಲ್ದರ್ಜೆಗೇರಿಸಲು ಪ್ರಧಾನಿ ಮೋದಿ ಅವರು ಶಂಕುಸ್ಥಾಪನೆ ಮಾಡಿದರು. ಮಹಾರಾಷ್ಟ್ರದ ಇತಿಹಾಸದಲ್ಲಿ ವಿವಿಧ ಪ್ರದೇಶಗಳಲ್ಲಿ ಇಷ್ಟು ವೇಗದಲ್ಲಿ ಮತ್ತು ಇಷ್ಟು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ನಡೆದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದರು. ಹಿಂದಿನ ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಮೋದಿ ವಾಗ್ದಾಳಿ ನಡೆಸಿದರು.

ಹಿಂದೂಗಳ ನಡುವೆ ಜಗಳ ತರಲು ಕಾಂಗ್ರೆಸ್‌ ಷಡ್ಯಂತ್ರ; ಮೋದಿ ಆರೋಪ
ಪ್ರಧಾನಿ ಮೋದಿ
Follow us
ಸುಷ್ಮಾ ಚಕ್ರೆ
|

Updated on:Oct 09, 2024 | 3:14 PM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಮಹಾರಾಷ್ಟ್ರದಲ್ಲಿ 10 ಹೊಸ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಮೋದಿ, ಕಾಂಗ್ರೆಸ್ ಪಕ್ಷವು ಸಮಾಜವನ್ನು ಜಾತಿ ಆಧಾರದ ಮೇಲೆ ವಿಭಜಿಸಲು ಶ್ರಮಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಈ ವೇಳೆ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡ ಪ್ರಧಾನಿ ಮೋದಿ, ಹಿಂದೂಗಳ ನಡುವೆ ಜಗಳವನ್ನು ಪ್ರಚೋದಿಸಲು ಕಾಂಗ್ರೆಸ್ ಯಾವ ಪ್ರಯತ್ನವನ್ನೂ ಬಿಡುವುದಿಲ್ಲ ಎಂದು ಹೇಳಿದರು.

‘ಸರ್ವಜನ್ ಹಿತಯೇ, ಸರ್ವಜನ್ ಸುಖಯೇ’ ಎಂಬ ಸನಾತನ ಪರಿಕಲ್ಪನೆಯನ್ನು ಕಾಂಗ್ರೆಸ್ ವಿಫಲಗೊಳಿಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು. ‘ಕಾಂಗ್ರೆಸ್ ಸಂಪೂರ್ಣವಾಗಿ ಕೋಮುವಾದ ಮತ್ತು ಜಾತಿವಾದಿ ನೆಲೆಯಲ್ಲಿ ಚುನಾವಣೆಗಳನ್ನು ಎದುರಿಸುತ್ತಿದೆ. ಹಿಂದೂ ಸಮಾಜವನ್ನು ವಿಭಜಿಸಿ ಅದನ್ನು ತಮ್ಮ ಗೆಲುವಿನ ಸೂತ್ರವನ್ನಾಗಿಸುವುದು ಕಾಂಗ್ರೆಸ್‌ನ ರಾಜಕೀಯದ ಮೂಲವಾಗಿದೆ. ಕಾಂಗ್ರೆಸ್ ಭಾರತೀಯ ಸಂಪ್ರದಾಯವಾದ ‘ಸರ್ವಜನ ಹಿತಯೇ-ಸರ್ವಜನ ಸುಖಯೇ’ ಅನ್ನು ಹತ್ತಿಕ್ಕುತ್ತಿದೆ. ಸನಾತನ ಸಂಪ್ರದಾಯವನ್ನು ಹತ್ತಿಕ್ಕುತ್ತಿದೆ ಎಂದಿದ್ದಾರೆ”.

ಇಂದು ಮಹಾರಾಷ್ಟ್ರ ಅಭಿವೃದ್ಧಿ ಪಥದಲ್ಲಿ ವೇಗವಾಗಿ ಸಾಗುತ್ತಿದೆ. ಈ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗಾಗಿ ನಾನು ಮಹಾರಾಷ್ಟ್ರದ ಜನರನ್ನು ಅಭಿನಂದಿಸುತ್ತೇನೆ. ಕೆಲವೇ ದಿನಗಳ ಹಿಂದೆ ನಮ್ಮ ಸರ್ಕಾರ ಮರಾಠಿ ಭಾಷೆಗೆ ಗಣ್ಯ ಭಾಷೆಯ ಸ್ಥಾನಮಾನ ನೀಡಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಇದನ್ನೂ ಓದಿ: ವಿಕಸಿತ ಭಾರತದ ಗುರಿ ಸಾಕಾರಗೊಳ್ಳುವವರೆಗೂ ವಿಶ್ರಮಿಸುವುದಿಲ್ಲ; 23 ವರ್ಷಗಳ ಪಯಣ ನೆನಪಿಸಿಕೊಂಡ ಪ್ರಧಾನಿ ಮೋದಿ

ಈ ವೇಳೆ ಪ್ರಧಾನಿ ಮೋದಿ ಕೂಡ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹರಿಯಾಣದಲ್ಲಿ ರೈತರು, ದಲಿತರು ಮತ್ತು ಯುವಕರನ್ನು ದಾರಿ ತಪ್ಪಿಸಲು ಕಾಂಗ್ರೆಸ್ ಎಲ್ಲ ರೀತಿಯ ಪ್ರಯತ್ನ ಮಾಡಿದೆ ಎಂದು ಮೋದಿ ಹೇಳಿದರು. ಆದರೆ, ಸಾರ್ವಜನಿಕರು ಒಟ್ಟಾಗಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಿದರು. ಸಮಾಜದಲ್ಲಿ ಜಾತೀಯತೆ ಮತ್ತು ಕೋಮುವಾದವನ್ನು ಕಾಂಗ್ರೆಸ್ ಉತ್ತೇಜಿಸುತ್ತಿದೆ. ಸಮಾಜವನ್ನು ಒಡೆಯುವುದೇ ಕಾಂಗ್ರೆಸ್‌ನ ಸೂತ್ರವಾಗಿದೆ. ಇಂದು ಕಾಂಗ್ರೆಸ್ ಒಂದು ಜಾತಿಯಿಂದ ಇನ್ನೊಂದು ಜಾತಿಯನ್ನು ಪ್ರತ್ಯೇಕಿಸಲು ಬಯಸುತ್ತಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದರು.

ಇದೇ ವೇಳೆ ಪ್ರಧಾನಿ ಮೋದಿ 10 ವೈದ್ಯಕೀಯ ಕಾಲೇಜುಗಳನ್ನು ಉದ್ಘಾಟಿಸಿದರು. ಮುಂಬೈ, ನಾಸಿಕ್, ಜಲ್ನಾ, ಅಮರಾವತಿ, ಗಡ್ಚಿರೋಲಿ, ಬುಲ್ಧಾನ, ವಾಶಿಮ್, ಭಂಡಾರಾ, ಹಿಂಗೋಲಿ ಮತ್ತು ಅಂಬರನಾಥ್ (ಥಾಣೆ)ಗಳಲ್ಲಿ 10 ವೈದ್ಯಕೀಯ ಕಾಲೇಜುಗಳನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಇದಲ್ಲದೆ, 7,600 ಕೋಟಿ ರೂಪಾಯಿಗಳ ಇತರ ಹಲವಾರು ಯೋಜನೆಗಳಿಗೆ ಮೋದಿ ಶಂಕುಸ್ಥಾಪನೆ ಮಾಡಿದರು.

ಇದನ್ನೂ ಓದಿ: ‘ಹರಿಯಾಣದ ಗೆಲುವು ದೇಶಾದ್ಯಂತ ಪ್ರತಿಧ್ವನಿಸಲಿದೆ’; ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತು

ಪಿಎಂ ನರೇಂದ್ರ ಮೋದಿ ನಾಗ್ಪುರದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲ್ದರ್ಜೆಗೆ ಏರಿಸಲು ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ಮಾಡಿದರು. ಒಟ್ಟು ಅಂದಾಜು ಯೋಜನಾ ವೆಚ್ಚ ಸುಮಾರು 7,000 ಕೋಟಿ ರೂ. ವಿಮಾನ ನಿಲ್ದಾಣ ನವೀಕರಣವು ಉತ್ಪಾದನೆ, ವಾಯುಯಾನ, ಪ್ರವಾಸೋದ್ಯಮ, ಲಾಜಿಸ್ಟಿಕ್ಸ್ ಮತ್ತು ಆರೋಗ್ಯ ರಕ್ಷಣೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಬೆಳವಣಿಗೆಯನ್ನು ಹೆಚ್ಚಿಸುತ್ತದೆ. ನಾಗ್ಪುರ ನಗರ ಮತ್ತು ವಿಶಾಲವಾದ ವಿದರ್ಭ ಪ್ರದೇಶಕ್ಕೆ ಪ್ರಯೋಜನವನ್ನು ನೀಡುತ್ತದೆ.

ಶಿರಡಿ ವಿಮಾನ ನಿಲ್ದಾಣದಲ್ಲಿ 645 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡಕ್ಕೆ ಪ್ರಧಾನಮಂತ್ರಿ ಮೋದಿ ಶಂಕುಸ್ಥಾಪನೆ ಮಾಡಿದರು. ಶಿರಡಿಗೆ ಬರುವ ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯಗಳನ್ನು ಕಲ್ಪಿಸಲು ಈ ಯೋಜನೆ ಸಹಕಾರಿಯಾಗಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:13 pm, Wed, 9 October 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ