AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರದ ‘ವಂದೇ ಮಾತರಂ’ ನಿಯಮಾವಳಿಗೆ ಕಾಂಗ್ರೆಸ್ ಅಪಸ್ವರ; 2 ಚರಣ ಮಾತ್ರ ಹಾಡಲು ನಿರ್ಧಾರ

ರಾಷ್ಟ್ರೀಯ ಗೀತೆ 'ವಂದೇ ಮಾತರಂ' ಗಾಯನ ಮತ್ತು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ನಿಯಮಾವಳಿಗಳ ಸುತ್ತ ರಾಜಕೀಯ ಗದ್ದಲ ತೀವ್ರಗೊಂಡಿರುವ ನಡುವೆಯೇ, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು (CWC) 1937ರ ತನ್ನ ಹಳೆಯ ನಿಲುವನ್ನು ಪುನರುಚ್ಚರಿಸಿದೆ. ಕಾಂಗ್ರೆಸ್ ಪಕ್ಷದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಸಿಡಬ್ಲ್ಯೂಸಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು ನಡೆದ ಸಿಡಬ್ಲ್ಯೂಸಿ ಸಭೆಯಲ್ಲಿ ಈ ಕುರಿತು ವಿಸ್ತೃತವಾಗಿ ಚರ್ಚಿಸಲಾಗಿದ್ದು, 1937ರಲ್ಲಿ ಪಕ್ಷ ತಳೆದಿದ್ದ ನಿಲುವಿಗೆ ಬದ್ಧವಾಗಿರಲು ಹಲವು ನಾಯಕರು ಸಮ್ಮತಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಸರ್ಕಾರದ 'ವಂದೇ ಮಾತರಂ' ನಿಯಮಾವಳಿಗೆ ಕಾಂಗ್ರೆಸ್ ಅಪಸ್ವರ; 2 ಚರಣ ಮಾತ್ರ ಹಾಡಲು ನಿರ್ಧಾರ
Sonia Gandhi And Mallikarjun KhargeImage Credit source: TV9
ಸುಷ್ಮಾ ಚಕ್ರೆ
|

Updated on: Aug 19, 2026 | 10:01 PM

Share

ನವದೆಹಲಿ, ಆಗಸ್ಟ್ 19: 1937ರಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ತೆಗೆದುಕೊಂಡ ನಿರ್ಧಾರದಂತೆ ಕಾಂಗ್ರೆಸ್ ಪಕ್ಷವು ‘ವಂದೇ ಮಾತರಂ’ (Vande Mataram) ಗೀತೆಯ ಮೊದಲ 2 ಚರಣಗಳನ್ನು (ಸ್ಟಾಂಜಾ) ಮಾತ್ರ ಹಾಡಲಿದೆ ಎಂದು ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಇಂದು ತಿಳಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೆ.ಸಿ. ವೇಣುಗೋಪಾಲ್, “ರಾಷ್ಟ್ರೀಯ ಗೀತೆಯ ಕುರಿತು ಕಾಂಗ್ರೆಸ್‌ನ ನಿಲುವು ಸ್ಪಷ್ಟವಾಗಿದೆ. ಕಾಂಗ್ರೆಸ್ ಪಕ್ಷವು ದಶಕಗಳಷ್ಟು ಹಳೆಯದಾದ ಸಿಡಬ್ಲ್ಯೂಸಿ ನಿರ್ಣಯವನ್ನು ಅನುಸರಿಸಲಿದೆ. ನಮ್ಮ ಪಕ್ಷದಲ್ಲಿ ಕೇವಲ ಎರಡು ಚರಣಗಳನ್ನು ಮಾತ್ರ ಹಾಡಲಾಗುತ್ತದೆ” ಎಂದು ಹೇಳಿದ್ದಾರೆ.

ವಂದೇ ಮಾತರಂ ಮತ್ತು ರಾಷ್ಟ್ರಗೀತೆಗಳು ಕಾಂಗ್ರೆಸ್‌ಗೆ ಭಾವನೆ ಮತ್ತು ಗೌರವದ ವಿಷಯಗಳಾಗಿವೆ. ಆದರೆ ಬಿಜೆಪಿ ಅವುಗಳನ್ನು ರಾಜಕೀಯ ವಿಷಯಗಳಾಗಿ ಬಳಸಿಕೊಳ್ಳುತ್ತಿದೆ ಎಂದು ಕೆ.ಸಿ ವೇಣುಗೋಪಾಲ್ ಆರೋಪಿಸಿದರು.

ಇಂದಿನ ಸಿಡಬ್ಲ್ಯೂಸಿ ಸಭೆಯ ವಿವರಗಳನ್ನು ಹಂಚಿಕೊಂಡ ಕೆಸಿ ವೇಣುಗೋಪಾಲ್, ಇತ್ತೀಚಿನ ವಿದ್ಯಾರ್ಥಿ ಚಳವಳಿಗಳು ಮತ್ತು ಸರ್ಕಾರದ ಪ್ರತಿಕ್ರಿಯೆಯ ಕುರಿತು ಸಮಿತಿಯು ಚರ್ಚಿಸಿದೆ ಎಂದು ಹೇಳಿದರು. ಶಿಕ್ಷಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ವಿರೋಧ ಪಕ್ಷವು ಸಂಸತ್ತಿನಲ್ಲಿ ಸರ್ಕಾರವನ್ನು ಯಶಸ್ವಿಯಾಗಿ ತರಾಟೆಗೆ ತೆಗೆದುಕೊಂಡಿದೆ ಎಂದು ಅವರು ಪ್ರತಿಪಾದಿಸಿದರು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ “ಛತ್ರೋಂ ಕಿ ಗೂಂಜ್” ಅಭಿಯಾನ ಮತ್ತು ಚಳವಳಿಯಲ್ಲಿ ಅವರ ನೇರ ಭಾಗವಹಿಸುವಿಕೆಯು ವಿದ್ಯಾರ್ಥಿಗಳ ಕಳವಳಗಳನ್ನು ಪರಿಹರಿಸಲು ಸರ್ಕಾರದ ಮೇಲೆ ಒತ್ತಡವನ್ನು ಹೇರಿದೆ ಎಂದು ಅವರು ಶ್ಲಾಘಿಸಿದರು.

ಇದನ್ನೂ ಓದಿ: ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್

ರಾಮಮಂದಿರಕ್ಕೆ ಸಂಬಂಧಿಸಿದ ಚಂದಾ ಚೋರಿ (ದೇಣಿಗೆ ಕಳ್ಳತನ) ಆರೋಪದ ಕುರಿತೂ ಸಿಡಬ್ಲ್ಯೂಸಿ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಕೆ.ಸಿ ವೇಣುಗೋಪಾಲ್ ಹೇಳಿದರು. ಜನರನ್ನು ಧ್ರುವೀಕರಿಸಲು ದೇವಾಲಯ ಮತ್ತು ಧರ್ಮವನ್ನು ಬಳಸಿಕೊಂಡವರು ಈಗ ಬಯಲಾಗಿದ್ದಾರೆ ಎಂದು ಅವರು ಆರೋಪಿಸಿದರು.

ಸ್ವಾತಂತ್ರ್ಯ ದಿನಾಚರಣೆಯಂದು ನವದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ವಂದೇ ಮಾತರಂ ಗಾಯನದ ವೇಳೆ ಆ ಗೀತೆಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ದೂರುಗಳು ದಾಖಲಾಗಿರುವ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದೆ. ಆಗಸ್ಟ್ 15ರಂದು ರಾಷ್ಟ್ರೀಯ ಗೀತೆಗೆ ಗೌರವ ಸಲ್ಲಿಸಿಲ್ಲ ಎಂದು ಆರೋಪಿಸಿ ದೆಹಲಿ ಮತ್ತು ಕರ್ನಾಟಕದಲ್ಲಿ ಸೋನಿಯಾ ಗಾಂಧಿ ವಿರುದ್ಧ ದೂರುಗಳು ದಾಖಲಾಗಿವೆ. ದೆಹಲಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಅವರ ನಡವಳಿಕೆಯ ಕುರಿತು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಕೋರಲಾಗಿದೆ.

ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆ ವೇಳೆ ‘ವಂದೇ ಮಾತರಂ’ ಗೀತೆಗೆ ಅವಮಾನಿಸಿದರೇ ಸೋನಿಯಾ ಗಾಂಧಿ?

ಕಾಂಗ್ರೆಸ್ ಸಮರ್ಥನೆ:

ಆದರೆ, 1937ರಲ್ಲಿ ಸಿಡಬ್ಲ್ಯೂಸಿ ಅಂಗೀಕರಿಸಿದ ನಿರ್ಣಯವೇ ತಮ್ಮ ನಿರ್ಧಾರಕ್ಕೆ ಆಧಾರವಾಗಿದೆ ಎಂದು ಕಾಂಗ್ರೆಸ್ ಸಮರ್ಥಿಸಿಕೊಂಡಿದೆ. ರಾಷ್ಟ್ರೀಯ ಸಮಾವೇಶಗಳಲ್ಲಿ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕು ಎಂದು ಅಂದು ನಿರ್ಧರಿಸಲಾಗಿತ್ತು. ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯ ಜನರನ್ನು ಒಳಗೊಂಡ ರಾಷ್ಟ್ರೀಯ ಸಮಾವೇಶಗಳಲ್ಲಿ ಸಂಪೂರ್ಣ ಹಾಡಿನ ಸೂಕ್ತತೆಯ ಬಗ್ಗೆ ನಡೆದ ಸುದೀರ್ಘ ಚರ್ಚೆಯ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು. ‘ವಂದೇ ಮಾತರಂ’ ಅನ್ನು ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ್ದು, ನಂತರ ಅದನ್ನು ಅವರ ‘ಆನಂದಮಠ’ ಕಾದಂಬರಿಯಲ್ಲಿ ಪ್ರಕಟಿಸಲಾಯಿತು. ಮೊದಲ ಎರಡು ಚರಣಗಳು ಮಾತೃಭೂಮಿಯನ್ನು ಪ್ರಶಂಸಿಸಿದರೆ, ನಂತರದ ಭಾಗಗಳು ಧಾರ್ಮಿಕ ಮತ್ತು ಪೌರಾಣಿಕ ಚಿತ್ರಣಗಳನ್ನು ಒಳಗೊಂಡಿವೆ.

ಕಾಂಗ್ರೆಸ್ ಉಲ್ಲೇಖಿಸಿದ ಐತಿಹಾಸಿಕ ದಾಖಲೆಗಳ ಪ್ರಕಾರ, 1937ರಲ್ಲಿ ಈ ವಿಷಯದ ಬಗ್ಗೆ ರವೀಂದ್ರನಾಥ ಟ್ಯಾಗೋರ್ ಅವರ ಸಲಹೆ ಪಡೆಯಲಾಗಿತ್ತು. ಆ ವರ್ಷದ ಅಕ್ಟೋಬರ್‌ನಲ್ಲಿ ಜವಾಹರಲಾಲ್ ನೆಹರೂ ಅವರಿಗೆ ಬರೆದ ಪತ್ರದಲ್ಲಿ ಟ್ಯಾಗೋರ್, ಮೊದಲ ಎರಡು ಚರಣಗಳು ರಾಷ್ಟ್ರೀಯ ಸ್ವರೂಪವನ್ನು ಹೊಂದಿರುವುದರಿಂದ ಅವುಗಳನ್ನು ಪ್ರತ್ಯೇಕವಾಗಿ ಬಳಸಬಹುದು, ಆದರೆ ನಂತರದ ನುಡಿಗಳಲ್ಲಿರುವ ಭಾವನೆಗಳು ಸಮಗ್ರ ರಾಷ್ಟ್ರೀಯ ಸಮಾವೇಶಗಳಿಗೆ ಸೂಕ್ತವಾಗದಿರಬಹುದು ಎಂದು ಸಲಹೆ ನೀಡಿದ್ದರು. ಇದರ ನಂತರ, ಸಾರ್ವಜನಿಕ ಮತ್ತು ರಾಷ್ಟ್ರೀಯ ಸಮಾವೇಶಗಳಲ್ಲಿ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಸಿಡಬ್ಲ್ಯೂಸಿ ಶಿಫಾರಸು ಮಾಡಿತ್ತು. 1937ರ ನಿರ್ಧಾರವು ಸಂಘಟಕರಿಗೆ ‘ವಂದೇ ಮಾತರಂ’ ಜೊತೆಗೆ ಅಥವಾ ಅದರ ಬದಲಿಗೆ ಇತರ ರಾಷ್ಟ್ರೀಯ ಗೀತೆಗಳನ್ನು ಸೇರಿಸಲು ಅವಕಾಶ ನೀಡಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ