ಎಸ್​ಐಆರ್ ವಿವಾದ; ಬಿಹಾರ, ಪಶ್ಚಿಮ ಬಂಗಾಳದಲ್ಲಿ ಒಂದೇ ಒಂದು ಆಕ್ಷೇಪಣೆ ಸಲ್ಲಿಸದ ಕಾಂಗ್ರೆಸ್!

ಎಸ್​ಐಆರ್ ಪ್ರಕ್ರಿಯೆಯ ವೇಳೆ ಸಾಮಾನ್ಯವಾಗಿ ಸಾರ್ವಜನಿಕರಿಗೆ ಮತ್ತು ರಾಜಕೀಯ ಗುಂಪುಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿರುತ್ತದೆ. ಮತದಾರರ ಪಟ್ಟಿಯಿಂದ ತಮ್ಮ ಹೆಸರು ಬಿಟ್ಟುಹೋಗಿದ್ದರೆ ಅವರು ಆಕ್ಷೇಪಣೆ ಸಲ್ಲಿಸಿ, ಸೂಕ್ತ ದಾಖಲೆಗಳನ್ನು ನೀಡಿ ತಮ್ಮ ಹೆಸರನ್ನು ಮರುಸೇರ್ಪಡೆ ಮಾಡಬಹುದು. ಆದರೆ, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಲಕ್ಷಾಂತರ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಆರೋಪ ಮಾಡಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಆ ಎರಡೂ ರಾಜ್ಯಗಳಲ್ಲಿ ಒಂದೇ ಒಂದು ಆಕ್ಷೇಪಣಾ ಅರ್ಜಿಯನ್ನೂ ಸಲ್ಲಿಸಿಲ್ಲ. ಈ ಅಂಕಿ-ಅಂಶವನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದೆ.

ಎಸ್​ಐಆರ್ ವಿವಾದ; ಬಿಹಾರ, ಪಶ್ಚಿಮ ಬಂಗಾಳದಲ್ಲಿ ಒಂದೇ ಒಂದು ಆಕ್ಷೇಪಣೆ ಸಲ್ಲಿಸದ ಕಾಂಗ್ರೆಸ್!
ರಾಹುಲ್ ಗಾಂಧಿ- ಮಲ್ಲಿಕಾರ್ಜುನ ಖರ್ಗೆ
Image Credit source: PTI

Updated on: Oct 13, 2026 | 5:10 PM

ನವದೆಹಲಿ, ಅಕ್ಟೋಬರ್ 13: ಭಾರತೀಯ ಚುನಾವಣಾ ಆಯೋಗವು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕೈಗೊಂಡಿದ್ದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್​ಐಆರ್) ಪ್ರಕ್ರಿಯೆಯ ಅವಧಿಯಲ್ಲಿ, ಹೆಸರು ಸೇರ್ಪಡೆ ಅಥವಾ ತೆಗೆದುಹಾಕುವಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷವು ಒಂದೇ ಒಂದು ಅರ್ಜಿಯನ್ನು ಸಲ್ಲಿಸಿಲ್ಲ ಎಂಬ ಪ್ರಮುಖ ಮಾಹಿತಿ ಬೆಳಕಿಗೆ ಬಂದಿದೆ.

ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಹಾಗೂ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಒಕ್ಕೂಟವು ದೇಶಾದ್ಯಂತ ತೀವ್ರ ಪ್ರತಿಭಟನೆ ನಡೆಸುತ್ತಿರುವ ಹಾಗೂ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ಬೆನ್ನಲ್ಲೇ ಈ ಅಂಕಿ-ಅಂಶ ಹೊರಬಿದ್ದಿರುವುದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

Huecmn1b0aafpec

ಇದನ್ನೂ ಓದಿ: ‘ರಾಜಕೀಯ ಅವಕಾಶವಾದಿತನಕ್ಕೆ ಮತ್ತೊಂದು ಹೆಸರೇ ರಾಹುಲ್ ಗಾಂಧಿ’; ಬಿಜೆಪಿ ನಾಯಕ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ

ಚುನಾವಣಾ ಆಯೋಗದ ನಿಯಮಗಳ ಪ್ರಕಾರ, ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗಿದ್ದರೆ ಅಥವಾ ನಕಲಿ ಹೆಸರುಗಳು ಸೇರ್ಪಡೆಯಾಗಿದ್ದರೆ ರಾಜಕೀಯ ಪಕ್ಷಗಳು ತಮ್ಮ ಬೂತ್ ಮಟ್ಟದ ಏಜೆಂಟರ ಮೂಲಕ ಆಕ್ಷೇಪಣೆ ಸಲ್ಲಿಸಲು ಅವಕಾಶವಿರುತ್ತದೆ. ಆದರೆ, ಬಿಹಾರ ಮತ್ತು ಪಶ್ಚಿಮ ಬಂಗಾಳ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಯಾವುದೇ ಹಕ್ಕು ಅಥವಾ ದೂರುಗಳನ್ನು ಅಧಿಕೃತವಾಗಿ ದಾಖಲಿಸಿಲ್ಲ.

Huecmg0aeaaqomh

ಬಿಜೆಪಿ ವಾಗ್ದಾಳಿ:

ಈ ಅಂಕಿ-ಅಂಶಗಳನ್ನು ಉಲ್ಲೇಖಿಸಿ ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. “ಒಂದೆಡೆ ಚುನಾವಣಾ ವ್ಯವಸ್ಥೆ ಹಾಗೂ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಪಪ್ರಚಾರ ಮಾಡುತ್ತ ಬೀದಿಗಿಳಿದು ಪ್ರತಿಭಟಿಸುವ ಕಾಂಗ್ರೆಸ್, ಆಯೋಗವು ಕಾನೂನುಬದ್ಧವಾಗಿ ನೀಡಿದ ಅವಕಾಶವನ್ನು ಬಳಸಿಕೊಂಡು ಒಂದೇ ಒಂದು ಆಕ್ಷೇಪಣೆಯನ್ನೂ ಸಲ್ಲಿಸಿಲ್ಲ. ಇದು ಅವರ ಇಬ್ಬಂದಿ ನೀತಿ ಮತ್ತು ಜವಾಬ್ದಾರಿರಹಿತ ನಡವಳಿಕೆಯನ್ನು ಎತ್ತಿಹಿಡಿಯುತ್ತದೆ” ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಇದನ್ನೂ ಓದಿ: ‘ಪ್ರಜಾಪ್ರಭುತ್ವದ ಕಗ್ಗೊಲೆ, ಕೇಂದ್ರದ್ದು ಸರ್ವಾಧಿಕಾರಿ ಧೋರಣೆ’: ದೆಹಲಿಯಲ್ಲಿ ಬಿಜೆಪಿ ವಿರುದ್ಧ ಅಬ್ಬರಿಸಿದ ರಾಜ್ಯ ಕಾಂಗ್ರೆಸ್​​ ನಾಯಕರು

ಬಿಹಾರ ಮತ್ತು ಪಶ್ಚಿಮ ಬಂಗಾಳದಂತಹ ಪ್ರಮುಖ ರಾಜ್ಯಗಳಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಅತ್ಯಂತ ನಿರ್ಣಾಯಕವಾಗಿದ್ದು, ಅಲ್ಲಿ ಕಾಂಗ್ರೆಸ್ ಯಾವುದೇ ಅಧಿಕೃತ ಅರ್ಜಿ ಸಲ್ಲಿಸದೇ ಇರುವುದು ಹಾಗೂ ಹೊರಗಡೆ ಪ್ರತಿಭಟನೆ ನಡೆಸುತ್ತಿರುವುದು ಪ್ರಸ್ತುತ ರಾಜಕೀಯ ವಾಗ್ದಾಳಿಗೆ ಪ್ರಮುಖ ಅಸ್ತ್ರವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
Loading...
Unable to load recommendations.
Follow Us