ದೆಹಲಿ ಜನವರಿ 11: ಜನವರಿ 22 ರಂದು ನಡೆಯಲಿರುವ ರಾಮ ಮಂದಿರದ (Ram mandir) ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ನಿರಾಕರಿಸಿದ ಕಾಂಗ್ರೆಸ್ (Congress) ಪಕ್ಷವನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ತರಾಟೆಗೆ ತೆಗೆದುಕೊಂಡರು. ಕಾಂಗ್ರೆಸ್ ತನ್ನ ಪಾಪಗಳನ್ನು ಕಡಿಮೆ ಮಾಡಿಕೊಳ್ಳುವ ಸುವರ್ಣಾವಕಾಶವನ್ನು ಕಳೆದುಕೊಂಡಿದೆ ಎಂದ ಅವರು ಕಾಂಗ್ರೆಸ್ ಆಹ್ವಾನಕ್ಕೆ ಅರ್ಹರಲ್ಲ ಎಂದಿದ್ದಾರೆ.
ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ತಮ್ಮ ನಾಯಕತ್ವದ ಆಹ್ವಾನವನ್ನು ನೀಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ವಿಎಚ್‌ಪಿ ತನ್ನ ಪಾಪವನ್ನು ಕಡಿಮೆ ಮಾಡಲು ಸುವರ್ಣಾವಕಾಶವನ್ನು ನೀಡಿದೆ. ಆದಾಗ್ಯೂ, ಮೊದಲಿನಿಂದಲೂ ರಾಮಮಂದಿರದ ವಿರುದ್ಧ ತಮ್ಮ ಅಭಿಪ್ರಾಯಗಳಿಗಾಗಿ ಅವರು ಅಂತಹ ಆಹ್ವಾನಕ್ಕೆ ಅರ್ಹರಲ್ಲ ಎಂದಿದ್ದಾರೆ ಶರ್ಮಾ.
ಕಾಂಗ್ರೆಸ್ ರಾಮಮಂದಿರ ಉದ್ಘಾಟನೆಯನ್ನು “ಆರ್‌ಎಸ್‌ಎಸ್/ಬಿಜೆಪಿ ಕಾರ್ಯಕ್ರಮ” ಎಂದು ಕರೆದಿದ್ದು, ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಈ ಕಾರ್ಯಕ್ರಮವನ್ನು ಚುನಾವಣಾ ಲಾಭಕ್ಕಾಗಿ ರಾಜಕೀಯ ಯೋಜನೆಯಾಗಿ ಮಾಡಿಕೊಂಡಿದೆ ಎಂದು ಹೇಳಿದೆ.
ಧರ್ಮವು ವೈಯಕ್ತಿಕ ವಿಷಯವಾಗಿದೆ. ಆದರೆ ಆರೆಸ್ಸೆಸ್/ಬಿಜೆಪಿ ಬಹಳ ಹಿಂದಿನಿಂದಲೂ ಅಯೋಧ್ಯೆಯಲ್ಲಿ ಮಂದಿರದ ರಾಜಕೀಯ ಯೋಜನೆಯನ್ನು ಮಾಡಿದೆ. ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರು ಅಪೂರ್ಣ ದೇವಾಲಯದ ಉದ್ಘಾಟನೆಯನ್ನು ಚುನಾವಣಾ ಲಾಭಕ್ಕಾಗಿ ಸ್ಪಷ್ಟವಾಗಿ ಮುಂದಿಡಲಾಗಿದೆ ಎಂದು ಕಾಂಗ್ರೆಸ್ ಆಹ್ವಾನವನ್ನು ತಿರಸ್ಕರಿಸಿತ್ತು.
ಈ ಆಹ್ವಾನವನ್ನು ಸ್ವೀಕರಿಸುವ ಮೂಲಕ, ಅವರು ಹಿಂದೂ ಸಮಾಜಕ್ಕೆ ಸಾಂಕೇತಿಕವಾಗಿ ಕ್ಷಮೆಯಾಚಿಸಬಹುದಾಗಿತ್ತು ಎಂದಿದ್ದಾರೆ ಶರ್ಮಾ,
ಶರ್ಮಾ ಅವರು ಸೋಮನಾಥ ದೇವಾಲಯದ ಪುನರ್ ನಿರ್ಮಾಣದ ವಿಷಯವನ್ನೂ ಪ್ರಸ್ತಾಪಿಸಿದರು.
ಇದನ್ನೂ ಓದಿ: ರಾಮಮಂದಿರ ರಮಾನಂದ ಪಂಥಕ್ಕೆ ಸೇರಿದ್ದು, ಸನ್ಯಾಸಿಗಳು, ಶೈವರು ಅಥವಾ ಶಾಕ್ತರಿಗಲ್ಲ: ಚಂಪತ್ ರಾಯ್
“ಆದಾಗ್ಯೂ, ಪಂಡಿತ್ ನೆಹರು ಸೋಮನಾಥ ದೇಗುಲದಲ್ಲಿ ಮಾಡಿದಂತೆ, ಕಾಂಗ್ರೆಸ್ ನಾಯಕತ್ವವು ರಾಮ ಮಂದಿರದ ವಿಷಯದಲ್ಲಿಯೂ ಮಾಡಿದೆ. ಇತಿಹಾಸವು ಅವರನ್ನು ಹಿಂದೂ ವಿರೋಧಿ ಪಕ್ಷವೆಂದು ನಿರ್ಣಯಿಸುತ್ತಲೇ ಇರುತ್ತದೆ ಎಂದು ಹೇಳಿದ್ದಾರೆ.
ಈಗಾಗಲೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಆಹ್ವಾನವನ್ನು ತಿರಸ್ಕರಿಸಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ