Rajasthan Politics: ಸಚಿನ್ ಪೈಲಟ್ ಪಕ್ಷ ಬಿಡುವುದು ನಮಗ್ಯಾರಿಗೂ ಇಷ್ಟವಿಲ್ಲ: ಕೆಸಿ ವೇಣುಗೋಪಾಲ್
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಗುರುವಾರ ತಡ ರಾತ್ರಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್(KC Venugopal) ಅವರು ಗುರುವಾರ ತಡ ರಾತ್ರಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್(Ashok Gehlot) ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ಮಾತುಕತೆಯಲ್ಲಿ ಆಶೋಕ್ ಗೆಹ್ಲೋಟ್ ಹಾಗೂ ಸಚಿನ್ ಪೈಲಟ್ ನಡುವಿನ ಭಿನ್ನಾಭಿಪ್ರಾಯವನ್ನು ದೂರ ಮಾಡುವ ಪ್ರಯತ್ನ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಸಚಿನ್ ಪೈಲಟ್ ಪಕ್ಷ ಬಿಡುವುದು ನಮಗ್ಯಾರಿಗೂ ಇಷ್ಟವಿಲ್ಲ ಎಂದಿದ್ದಾರೆ.
ಗುರುವಾರ ವೇಣುಗೋಪಾಲ್ ಅವರು ಸಚಿವ ಭಜನ್ ಲಾಲ್ ಜಾದವ್ ಅವರ ಮಗಳ ಮದುವೆಯಲ್ಲಿ ಪಾಲ್ಗೊಂಡಿದ್ದರು. ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನವೇ ಒಗ್ಗಟ್ಟು ಪ್ರದರ್ಶಿಸಲು ಕಾಂಗ್ರೆಸ್ ಹೈಕಮಾಂಡ್ ಪ್ರಯತ್ನ ನಡೆಸುತ್ತಿದೆ. ಹೀಗಿರುವಾಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸೂಚನೆ ಮೇರೆಗೆ ಕೆಸಿ ವೇಣುಗೋಪಾಲ್ ರಾಜಸ್ಥಾನಕ್ಕೆ ತೆರಳಿದ್ದಾರೆ.
ಮತ್ತಷ್ಟು ಓದಿ: Rajasthan Politics: ರಾಜಸ್ಥಾನ ಕಾಂಗ್ರೆಸ್ ಆಂತರಿಕ ಕಲಹ: ಪಕ್ಷದಿಂದ ಹಾರಲು ಸಜ್ಜಾಗುತ್ತಿರುವ ಪೈಲಟ್
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗೆ 1 ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು. ಜೈಪುರಕ್ಕೆ ಬರುವುದಕ್ಕೂ ಮುನ್ನ ಸಚಿನ್ ಪೈಲಟ್ ಜತೆ ಕೂಡ ಮಾತುಕತೆ ನಡೆಸಿದ್ದರು. ಸಚಿನ್ ಪೈಲಟ್ ಅವರು ಸಮನ್ವಯದ ಸೂತ್ರವನ್ನು ಜಾರಿಗೆ ತರುವಂತೆ ಕೇಳಿಕೊಂಡಿದ್ದಾರೆ.
ರಾಜಸ್ಥಾನ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಅವರ ಮುಂದಿನ ರಾಜಕೀಯ ನಡೆಯ ಮೇಲೆ ಎಲ್ಲರ ಚಿತ್ತವಿದೆ. ಕಾಂಗ್ರೆಸ್ನಲ್ಲಿಯೇ ಉಳಿಯುತ್ತಾರೋ ಅಥವಾ ಬಿಜೆಪಿ ಜತೆಗೆ ಕೈಜೋಡಿಸುತ್ತಾರೋ ಅಥವಾ ಏಕಾಂಗಿಯಾಗಿ ಹೊಸ ಪಕ್ಷವನ್ನು ಆರಂಭಿಸುತ್ತಾರೋ ಎನ್ನುವ ಚರ್ಚೆ ರಾಜಸ್ಥಾನ ರಾಜಕೀಯದಲ್ಲಿ ಭಾರಿ ಪ್ರಮಾಣದಲ್ಲಿ ನಡೆಯುತ್ತಿದೆ.
ರಾಜಸ್ಥಾನ ಮುಖ್ಯಮಮತ್ರಿ ಅಶೋಕ್ ಗೆಹ್ಲೋಟ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ನಡುವಿನ ಆಂತರಿಕ ಕಲಹ ಮೂರ್ನಾಲ್ಕು ವರ್ಷಗಳಿಂದ ನಡೆಯುತ್ತಲೇ ಇದೆ. ಇದು ಈಗ ತಾರಕಕ್ಕೇರಿದ್ದು, ಮಲ್ಲಿಕಾರ್ಜುನ ಖರ್ಗೆಯ ಸಂಧಾನದ ಬಳಿಕವೂ ಸಚಿನ್ ಪೈಲಟ್ ಸಮಾಧಾನಗೊಂಡಿಲ್ಲ ಎನ್ನಲಾಗುತ್ತಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ