ಕಾಂಗ್ರೆಸ್ ಸಂಸ್ಥಾಪನಾ ದಿನ: ಡಿಸೆಂಬರ್ 28ರಂದು ನಾಗ್ಪುರದಲ್ಲಿ ಮಹಾ ರ‍್ಯಾಲಿ
Congress Foundation Day: ಕಾಂಗ್ರೆಸ್ ಸಂಸ್ಥಾಪನಾ ದಿನದಂದು ನಾಗ್ಪುರದಲ್ಲಿ ಮೆಗಾ ರ‍್ಯಾಲಿ ನಡೆಯಲಿದೆ. ಡಿಸೆಂಬರ್ 28 ರಂದು ನಡೆಯುವ ಈ ಬೃಹತ್ ಸಮಾವೇಶದಲ್ಲಿ 10 ಲಕ್ಷ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಈ ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ಪಾಲ್ಗೊಳ್ಳಲಿದ್ದಾರೆ.
ಕಾಂಗ್ರೆಸ್ ಸಂಸ್ಥಾಪನಾ ದಿನ(Congress Foundation Day)ದಂದು ನಾಗ್ಪುರದಲ್ಲಿ ಮೆಗಾ ರ‍್ಯಾಲಿ ನಡೆಯಲಿದೆ. ಡಿಸೆಂಬರ್ 28 ರಂದು ನಡೆಯುವ ಈ ಬೃಹತ್ ಸಮಾವೇಶದಲ್ಲಿ 10 ಲಕ್ಷ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಈ ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ಪಾಲ್ಗೊಳ್ಳಲಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಮಹಾರಾಷ್ಟ್ರ ಕಾಂಗ್ರೆಸ್ ಮುಖಂಡರೊಂದಿಗಿನ ಸಭೆಯಲ್ಲಿ ಈ ಮಾಹಿತಿ ನೀಡಿದ್ದಾರೆ. ಜನರು ಕಾಂಗ್ರೆಸ್ ಜೊತೆಗಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.
ಪಕ್ಷದ ಮತಗಳ ಪ್ರಮಾಣ ಹೆಚ್ಚುತ್ತಿದೆ. ರಾಜ್ಯ ಚುನಾವಣಾ ಫಲಿತಾಂಶದಿಂದ ಇದು ತಿಳಿಯುತ್ತದೆ ಎಂದು ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ ಇನ್ನು ಮೂರು ತಿಂಗಳಷ್ಟೇ ಬಾಕಿ ಇದೆ, ಈ ರ‍್ಯಾಲಿಯನ್ನು ಚುನಾವಣಾ ರ‍್ಯಾಲಿ ಎಂದು ಪರಿಗಣಿಸಲಾಗಿದೆ. ಡಿಸೆಂಬರ್ 28 ಕಾಂಗ್ರೆಸ್ ನ 139ನೇ ಸಂಸ್ಥಾಪನಾ ದಿನವಾಗಿರುತ್ತದೆ. ಈ ದಿನದಿಂದ ಪಕ್ಷವು 2024 ರ ಲೋಕಸಭೆ ಚುನಾವಣೆಗೆ ತನ್ನ ಪ್ರಚಾರವನ್ನು ಪ್ರಾರಂಭಿಸಲಿದೆ.
ಮತ್ತಷ್ಟು ಓದಿ: ತೆಲಂಗಾಣದ ಬಹುತೇಕ ಶಾಸಕರು ಕೋಟ್ಯಾಧೀಶ್ವರರು, ಕ್ರಿಮಿನಲ್ ಪ್ರಕರಣಗಳೂ ಧಾರಾಳ, 40 ಶಾಸಕರು ಪಿಯುಸಿ ವರೆಗೂ ಓದಿದ್ದಾರೆ!
ಮಹಾರಾಷ್ಟ್ರವು 48 ಲೋಕಸಭಾ ಸ್ಥಾನಗಳನ್ನು ಹೊಂದಿದೆ ಮತ್ತು ಸ್ಥಾನಗಳ ಸಂಖ್ಯೆಯಲ್ಲಿ ಉತ್ತರ ಪ್ರದೇಶದ ನಂತರ ಎರಡನೇ ದೊಡ್ಡ ರಾಜ್ಯವಾಗಿದೆ. ಕಳೆದ ತಿಂಗಳು ನಡೆದ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ ಕಾಂಗ್ರೆಸ್‌ನ ಭರವಸೆ ಮಹಾರಾಷ್ಟ್ರದ ಮೇಲೆ ನಿಂತಿದೆ. ರಾಹುಲ್ ಗಾಂಧಿ ಎರಡನೇ ಹಂತದ ಭಾರತ್ ಜೋಡೋ ಯಾತ್ರೆ ಆರಂಭಿಸಬಹುದು ಎಂದೂ ಹೇಳಲಾಗುತ್ತಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ