ಸೋನಿಯಾ ಗಾಂಧಿಯನ್ನು ಯಾರೂ ದುರ್ಬಲಗೊಳಿಸಲು ಸಾಧ್ಯವಿಲ್ಲ; ಕಪಿಲ್ ಸಿಬಲ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಕಪಿಲ್ ಸಿಬಲ್ ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಪಕ್ಷವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಸೋನಿಯಾ ಗಾಂಧಿಯನ್ನಾಗಲಿ ಅಥವಾ ಕಾಂಗ್ರೆಸ್​ ಪಕ್ಷವನ್ನಾಗಲಿ ದುರ್ಬಲಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಸೋನಿಯಾ ಗಾಂಧಿಯನ್ನು ಯಾರೂ ದುರ್ಬಲಗೊಳಿಸಲು ಸಾಧ್ಯವಿಲ್ಲ; ಕಪಿಲ್ ಸಿಬಲ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
ಸೋನಿಯಾ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Mar 16, 2022 | 2:49 PM

ನವದೆಹಲಿ: ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಕಪಿಲ್ ಸಿಬಲ್ (Kapil Sibal) ಅವರು “ಗಾಂಧಿಗಳು ಕಾಂಗ್ರೆಸ್​ನ ನಾಯಕತ್ವದ ಪಾತ್ರದಿಂದ ಹಿಂದೆ ಸರಿಯಬೇಕು” ಎಂಬ ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆಯಿಂದಾಗಿ ಕಾಂಗ್ರೆಸ್ ನಾಯಕರ ಕೋಪಕ್ಕೆ ಗುರಿಯಾಗಿದ್ದಾರೆ. ಗಾಂಧಿ ಕುಟುಂಬದ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿರುವ ಕಪಿಲ್ ಸಿಬಲ್ ವಿರುದ್ಧ ವಾಗ್ದಾಳಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಕಪಿಲ್ ಸಿಬಲ್ ಉತ್ತಮ ವಕೀಲರಾಗಿರಬಹುದು ಆದರೆ ಅವರು ಕಾಂಗ್ರೆಸ್ ಪಕ್ಷದ ಉತ್ತಮ ನಾಯಕರಲ್ಲ ಎಂದು ಕಿಡಿ ಕಾರಿದ್ದಾರೆ.

ಕಪಿಲ್ ಸಿಬಲ್ ಕಾಂಗ್ರೆಸ್‌ಗಾಗಿ ಕೆಲಸ ಮಾಡಲು ಯಾವುದೇ ಹಳ್ಳಿಗೆ ಹೋಗಿಲ್ಲ. ಇದೀಗ ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಪಕ್ಷವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಸೋನಿಯಾ ಗಾಂಧಿಯನ್ನಾಗಲಿ ಅಥವಾ ಹಳೆಯ ಪಕ್ಷವಾದ ಕಾಂಗ್ರೆಸ್​ ಪಕ್ಷವನ್ನಾಗಲಿ ದುರ್ಬಲಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಕೂಡ ಕಪಿಲ್ ಸಿಬಲ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಪಿಲ್ ಸಿಬಲ್ ಯುಪಿಎ ಸರ್ಕಾರದಲ್ಲಿ ಸಚಿವರಾಗಿದ್ದಾಗ ಎಲ್ಲವೂ ಚೆನ್ನಾಗಿತ್ತು. ಆದರೆ ಈಗ ಯುಪಿಎ ಅಧಿಕಾರದಿಂದ ಕೆಳಗಿಳಿದಿರುವುದರಿಂದ ಅವರಿಗೆ ಕಾಂಗ್ರೆಸ್​ನಲ್ಲಿ ಹುಳುಕುಗಳೇ ಕಾಣುತ್ತಿದೆ. ಕಾಂಗ್ರೆಸ್​ ಅಧಿಕಾರದಲ್ಲಿ ಇಲ್ಲದ ಕಾರಣದಿಂದ ತಮ್ಮನ್ನು ಉಳಿಸಿಕೊಳ್ಳಲು ಜಿ-23 ನಾಯಕರು ಪ್ರಯತ್ನಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

‘ಎಸಿ ರೂಮಿನಲ್ಲಿ ಕುಳಿತು ಸಂದರ್ಶನ ನೀಡುವುದರಲ್ಲಿ ಅರ್ಥವಿಲ್ಲ’. ಕಪಿಲ್ ಸಿಬಲ್ ಅವರು ಕಾಂಗ್ರೆಸ್ ಬೆಂಬಲವಿಲ್ಲದೆ ಏನನ್ನಾದರೂ ಮಾಡುವ ಮೂಲಕ ಮಾದರಿಯಾಗಬೇಕು. ಅವರ ಸಿದ್ಧಾಂತಕ್ಕಾಗಿ ಸ್ವಂತವಾಗಿ ಹೋರಾಡಬೇಕು. ಕೇವಲ ಎಸಿ ರೂಮಿನಲ್ಲಿ ಕುಳಿತು ಸಂದರ್ಶನ ನೀಡುವುದರಲ್ಲಿ ಅರ್ಥವಿಲ್ಲ ಎಂದು ಕಾಂಗ್ರೆಸ್ ನಾಯಕರು ಕಪಿಲ್ ಸಿಬಲ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಹೀನಾಯಕವಾಗಿ ಸೋತು, ಮುಖಭಂಗ ಅನುಭವಿಸಿತ್ತು. ಇದರ ಬೆನ್ನಲ್ಲೇ ಇಂದು ಕಪಿಲ್ ಸಿಬಲ್ ಅವರ ನಿವಾಸದಲ್ಲಿ ಜಿ-23 ನಾಯಕರ ಸಭೆ ನಡೆಯಲಿದೆ.

ಗಾಂಧಿಗಳು ಕಾಂಗ್ರೆಸ್ ನಾಯಕತ್ವದಿಂದ ದೂರ ಉಳಿಯುವ ಸಮಯ ಬಂದಿದೆ. ಈಗಿನ ನಾಯಕರು ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲು ಬೇರೆಯವರಿಗೆ ಅವಕಾಶ ನೀಡಬೇಕು ಎಂದು ಕಪಿಲ್ ಸಿಬಲ್ ಮಂಗಳವಾರ ಹೇಳಿದ್ದರು. 2014ರ ಚುನಾವಣಾ ಸೋಲಿನ ನಂತರ ಕಾಂಗ್ರೆಸ್ ಕೆಲವು ಸಂದರ್ಭಗಳಲ್ಲಿ ಹೊರತುಪಡಿಸಿ ನಿರಂತರವಾಗಿ ಚುನಾವಣೆಯಲ್ಲಿ ಸೋತಿದೆ. ಸೋನಿಯಾ ಗಾಂಧಿ ನೆಪಮಾತ್ರಕ್ಕೆ ಕಾಂಗ್ರೆಸ್ ಅಧ್ಯಕ್ಷರಾದರೂ ಎಲ್ಲ ನಿರ್ಧಾರಗಳನ್ನೂ ರಾಹುಲ್ ಗಾಂಧಿಯೇ ತೆಗೆದುಕೊಳ್ಳುತ್ತಾರೆ ಎಂದು ಕಪಿಲ್ ಸಿಬಲ್ ಸಂದರ್ಶನವೊಂದರಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ಕಪಿಲ್ ಸಿಬಲ್​​ಗೆ ಕಾಂಗ್ರೆಸ್​​ನ ಎಬಿಸಿ ಗೊತ್ತಿಲ್ಲ: ಪಕ್ಷವನ್ನು ಟೀಕಿಸಿದ್ದಕ್ಕೆ ವಾಗ್ದಾಳಿ ನಡೆಸಿದ ಅಶೋಕ್ ಗೆಹ್ಲೋಟ್

ಗಾಂಧಿಗಳು ನಾಯಕತ್ವದಿಂದ ಇಳಿದು ಬೇರೆಯವರಿಗೆ ಅವಕಾಶ ಕೊಡುವ ಸಮಯ ಬಂದಿದೆ; ಕಪಿಲ್ ಸಿಬಲ್ ಟೀಕೆ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್