ಹಿಮಾಚಲದಲ್ಲಿ ಅಡ್ಡಮತದಾನದಿಂದ ಬಿಜೆಪಿಗೆ ಗೆಲುವು, ಕಾಂಗ್ರೆಸ್​ಗೆ ಆತಂಕ, ಅವಿಶ್ವಾಸ ನಿರ್ಣಯ ಮಂಡನೆ ಸಾಧ್ಯತೆ

68 ಸದಸ್ಯ ಬಲದ ವಿಧಾನಸಭೆಯಲ್ಲಿ ಕೇವಲ 25 ಶಾಸಕರನ್ನು ಹೊಂದಿದ್ದರೂ ಹಿಮಾಚಲ ಪ್ರದೇಶದ ಏಕೈಕ ರಾಜ್ಯಸಭಾ ಕ್ಷೇತ್ರದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗೆ ಜಯ ತಂದುಕೊಟ್ಟಿದೆ. ಕಾಂಗ್ರೆಸ್​ ಶಾಸಕರ ಅಡ್ಡ ಮತದಾನದಿಂದ ಬಿಜೆಪಿ ಗೆಲುವು ಸಾಧಿಸಿರುವುದಕ್ಕೆ ಸುಖು ಸರ್ಕಾರದ ವಿರುದ್ಧ ಅವರಿಗಿರುವ ಅಸಮಾಧಾನವೇ ಕಾರಣ ಎನ್ನಲಾಗಿದೆ.

ಹಿಮಾಚಲದಲ್ಲಿ ಅಡ್ಡಮತದಾನದಿಂದ ಬಿಜೆಪಿಗೆ ಗೆಲುವು, ಕಾಂಗ್ರೆಸ್​ಗೆ ಆತಂಕ, ಅವಿಶ್ವಾಸ ನಿರ್ಣಯ ಮಂಡನೆ ಸಾಧ್ಯತೆ
Image Credit source: Newsclick
Follow us
|

Updated on:Feb 28, 2024 | 10:36 AM

ಭಾರಿ ಬಹುಮತ ಪಡೆದು ಮೂರು ರಾಜ್ಯಗಳಲ್ಲಿ ಗೆದ್ದಿ ಬೀಗಿದ್ದ ಕಾಂಗ್ರೆಸ್(Congress)​ ಒಂದು ರಾಜ್ಯದಲ್ಲಿ ಅರಿವಿಲ್ಲದಂತೆ ಕುಸಿದುಬಿದ್ದಿದೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್​ ಶಾಸಕರು ಅಡ್ಡ ಮತದಾನ ಮಾಡಿದ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶ(Himachal Pradesh)ದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. 68 ಸದಸ್ಯ ಬಲದ ವಿಧಾನಸಭೆಯಲ್ಲಿ 25 ಶಾಸಕರನ್ನು ಹೊಂದಿದ್ದರೂ ಹಿಮಾಚಲ ಪ್ರದೇಶದ ಏಕೈಕ ರಾಜ್ಯಸಭಾ ಕ್ಷೇತ್ರದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗೆ ಗೆಲುವು ತಂದುಕೊಡುವಲ್ಲಿ ಜಯ ಸಾಧಿಸಿದೆ.

ಬಿಜೆಪಿಗೆ ಮತ ಚಲಾಯಿಸಿದ ಆರು ಶಾಸಕರು ಮುಖ್ಯಮಂತ್ರಿ ಸುಖ್ವಿಂದರ್​ ಸಿಂಗ್ ಸುಖು ಅವರ ಆಡಳಿತದ ಬಗ್ಗೆ ಅಸಮಾಧಾನ ಹೊಂದಿದ್ದಾರೆ. ಅವರೊಂದಿಗೆ ಮಾತುಕತೆ ನಡೆಸುವಂತೆ ಹಿರಿಯ ನಾಯಕ ಭೂಪಿಂದರ್ ಸಿಂಗ್ ಹೂಡಾ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಮಲ್ಲಿಕಾರ್ಜುನ ಖರ್ಗೆ ನಿಯೋಜಿಸಿದ್ದಾರೆ.

ಹಿಮಾಚಲಪ್ರದೇಶದಲ್ಲಿ 68 ಸದಸ್ಯ ಬಲದ ಪೈಕಿ 40 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದ ಆಡಳಿತಾರೂಢ ಕಾಂಗ್ರೆಸ್​ ಪಕ್ಷವು ಮೂರು ಪಕ್ಷೇತರ ಶಾಸಕರ ಬಲವನ್ನೂ ಹೊಂದಿತ್ತು. ಆದರೆ ಕಾಂಗ್ರೆಸ್​ ಪಕ್ಷದ ಆರು ಶಾಸಕರು ಹಾಗೂ ಮೂರು ಮಂದಿ ಪಕ್ಷೇತರ ಶಾಸಕರು ಅಡ್ಡ ಮತದಾನ ಮಾಡಿರುವುದರಿಂದ ಕಾಂಗ್ರೆಸ್​ ಪಕ್ಷದ ಅಧಿಕೃತ ಅಭ್ಯರ್ಥಿ ಅಭಿಷೇಕ್​ ಸಿಂಘ್ವಿ ಸೋಲು ಅನುಭವಿಸಿದ್ದಾರೆ.

ಮತ್ತಷ್ಟು ಓದಿ: ಹಿಮಾಚಲದತ್ತ ಡಿಕೆ ಶಿವಕುಮಾರ್: ಪಕ್ಷದ ಹಿತವೇ ಮುಖ್ಯವಾದರೆ ಡಿಸಿಎಂ ಹುದ್ದೆಗೆ ರಾಜೀನಾಮೆ ನೀಡಲಿ, ಅಶೋಕ್ ಆಗ್ರಹ

ಕಾಂಗ್ರೆಸ್​ ಅಭ್ಯರ್ಥಿ ಮನುಸಿಂಘ್ವಿ ಮತ್ತು ಬಿಜೆಪಿಯ ಹರ್ಷ ಮಹಾಜನ್ ನಡುವೆ ಪೈಪೋಟಿ ಎದುರಾಗಿತ್ತು. ಇಬ್ಬರೂ 34-34 ಮತ ಗಳಿಸಿದ್ದರು. ಹೀಗಾಗಿ ವಿಜೇತರನ್ನು ಘೋಷಿಸಲು ಚೀಟಿ ಎತ್ತಲಾಯಿತು, ಮಹಾಜನ್​ಗೆ ಅದೃಷ್ಟ ಒಲಿಯಿತು. ಕಾಂಗ್ರೆಸ್‌ನ ಪ್ರತಿಷ್ಠೆಗೆ ಹೊಡೆತಕ್ಕಿಂತ ನಷ್ಟವು ತುಂಬಾ ದೊಡ್ಡದಾಗಿದೆ.ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ವಾರಗಳು ಬಾಕಿಯಿರುವುದು ಕಾಂಗ್ರೆಸ್‌ನ ಆತಂಕವನ್ನು ಹೆಚ್ಚಿಸಿದೆ.

ಬಿಜೆಪಿಯು ಗುರುವಾರ ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯ ಸರಕಾರ ಇದೀಗ ಅಲ್ಪ ಸಂಖ್ಯಾತವಾಗಿದೆ, ಸರಕಾರದಲ್ಲಿ ಬೇಲಿ ಹಾಕುವವರು ಈ ಕಡೆ ಬರಲು ಸಿದ್ಧರಿದ್ದಾರೆ, ಸರ್ಕಾರದ ಬಗ್ಗೆ ಅಸಮಾಧಾನವಿದೆ. ಕಾಂಗ್ರೆಸ್ ಬಹುಮತ ಪಡೆದು ಆಡಳಿತ ಮಾಡುತ್ತಿರುವ ಮೂರು ರಾಜ್ಯಗಳಲ್ಲಿ ಹಿಮಾಚಲ ಪ್ರದೇಶ ಕೂಡ ಒಂದಾಗಿತ್ತು.

ಎಸ್​ಟಿ ಸೋಮಶೇಖರ್ ಅಡ್ಡಮತದಾನ ರಾಜ್ಯಸಭಾ ಚುನಾವಣೆಯಲ್ಲಿ ಯಶವಂತಪುರ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ ಅಡ್ಡಮತದಾನ ಮಾಡಿದ್ದಾರೆ. ಶಿವರಾಮ ಹೆಬ್ಬಾರ್ ಗೈರಾಗಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:21 am, Wed, 28 February 24

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!