ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್​

ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಚುನಾವಣಾ ಪ್ರಚಾರ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯು ಸ್ವಾತಂತ್ರ್ಯದ ಸಮಯದಲ್ಲಿ ಮುಸ್ಲಿಂ ಲೀಗ್‌ನಲ್ಲಿ ಪ್ರಚಲಿತದಲ್ಲಿದ್ದ ಅದೇ ಚಿಂತನೆಯನ್ನು ಪ್ರತಿಬಿಂಬಿಸುತ್ತದೆ. ಕಾಂಗ್ರೆಸ್ ಪ್ರಣಾಳಿಕೆಯು ಸಂಪೂರ್ಣವಾಗಿ ಮುಸ್ಲಿಂ ಲೀಗ್‌ನ ಮುದ್ರೆಯನ್ನು ಹೊಂದಿದೆ. ಈ ಮುಸ್ಲಿಂ ಲೀಗ್ ಪ್ರಣಾಳಿಕೆಯ ಉಳಿದ ಭಾಗಗಳಲ್ಲಿ ಎಡಪಂಥೀಯರು ಸಂಪೂರ್ಣವಾಗಿ ಪ್ರಾಬಲ್ಯ ಸಾಧಿಸಿದ್ದಾರೆ ಎಂದು ಹೇಳಿದ್ದಾರೆ. ಇದೀಗ ಈ ಹೇಳಿಕೆಗೆ ಕೆರಳಿದ ಕಾಂಗ್ರೆಸ್​​ ಚುನಾವಣಾ ಆಯೋಗಕ್ಕೆ ಮೋದಿ ವಿರುದ್ಧ ದೂರು ನೀಡಿದೆ.

ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್​
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on: Apr 08, 2024 | 4:18 PM

ದೆಹಲಿ, ಎ.8: ಪ್ರಧಾನಿ ನರೇಂದ್ರ ಮೋದಿ (Narendra Modi)  ಅವರ ವಿರುದ್ಧ ಕಾಂಗ್ರೆಸ್,​​ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಚುನಾವಣಾ ಪ್ರಚಾರ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯು ಸ್ವಾತಂತ್ರ್ಯದ ಸಮಯದಲ್ಲಿ ಮುಸ್ಲಿಂ ಲೀಗ್‌ನಲ್ಲಿ ಪ್ರಚಲಿತದಲ್ಲಿದ್ದ ಅದೇ ಚಿಂತನೆಯನ್ನು ಪ್ರತಿಬಿಂಬಿಸುತ್ತದೆ. ಕಾಂಗ್ರೆಸ್ ಪ್ರಣಾಳಿಕೆಯು ಸಂಪೂರ್ಣವಾಗಿ ಮುಸ್ಲಿಂ ಲೀಗ್‌ನ ಮುದ್ರೆಯನ್ನು ಹೊಂದಿದೆ. ಈ ಮುಸ್ಲಿಂ ಲೀಗ್ ಪ್ರಣಾಳಿಕೆಯ ಉಳಿದ ಭಾಗಗಳಲ್ಲಿ ಎಡಪಂಥೀಯರು ಸಂಪೂರ್ಣವಾಗಿ ಪ್ರಾಬಲ್ಯ ಸಾಧಿಸಿದ್ದಾರೆ ಎಂದು ಹೇಳಿದ್ದಾರೆ. ಇದೀಗ ಈ ಹೇಳಿಕೆಗೆ ಕೆರಳಿದ ಕಾಂಗ್ರೆಸ್​​ ಚುನಾವಣಾ ಆಯೋಗಕ್ಕೆ ಮೋದಿ ವಿರುದ್ಧ ದೂರು ನೀಡಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಎಕ್ಸ್​​ನಲ್ಲಿ ಈ ಬಗ್ಗೆ ಹೇಳಿದ್ದಾರೆ. ನನ್ನ ಸಹೋದ್ಯೋಗಿಗಳಾದ @salman7khurshid, @Mukul Wasnik, @Pawankhera ಮತ್ತು @gurdeepsappal ಅವರು ಚುನಾವಣಾ ಆಯೋಗವನ್ನು ಭೇಟಿಯಾಗಿ 6 ​​ದೂರುಗಳನ್ನು ನೀಡಿದ್ದಾರೆ. ಎಲ್ಲರಿಗೂ ಸಮಾನವಾದ ವೇದಿಕೆಯನ್ನು ಚುನಾವಣಾ ಆಯೋಗ ನೀಡಬೇಕು. ಆಯೋಗವು ಸಾಂವಿಧಾನಿಕವಾಗಿ ನಡೆದುಕೊಳ್ಳುತ್ತದೆ ಎಂಬ ನಂಬಿಕೆ ಇದೆ. ಇದಕ್ಕಾಗಿ ಎಲ್ಲ ರೀತಿ ಸಹಕಾರವನ್ನು ನಾವು ನೀಡುತ್ತೇವೆ ಎಂದು ಟ್ವೀಟ್​​ ಮಾಡಿದ್ದಾರೆ.

ಇನ್ನು ಈ ಬಗ್ಗೆ ಮಾತನಾಡಿದ ಕಾಂಗ್ರೆಸ್​​ನ ಈ ಹಿರಿಯ ನಾಯಕ ಸಲ್ಮಾನ್ ಖುರ್ಷಿದ್ ಅವರು ” ಪ್ರಧಾನಿ ಮೋದಿ ಅವರ ಈ ಮಾತಿನಿಂದ ನಮಗೆ ಬೇಸರವಾಗಿದೆ. ನಮ್ಮ ಪ್ರಣಾಳಿಕೆಯ ಬಗ್ಗೆ ಅವರು ಹೇಳಿರುವುದು ಸುಳ್ಳು, ನೀವು ಎಲ್ಲಿ ಬೇಕಾದರೂ ನೀವು ನಮ್ಮ ಬಗ್ಗೆ ಮಾತನಾಡಬಹುದು, ಬೇರೆ ಪಕ್ಷದಲ್ಲಿ ಇಂತಹ ವಿಚಾರಗಳು ಇದೆ ಎಂದು ಹೇಳಬಹುದು, ಇದರಿಂದ ನಮ್ಮನ್ನು ವಿಭಜಿಸುವ ಪ್ರಯತ್ನವನ್ನು ನೀವು ಮಾಡಬಹುದು, ಆದರೆ ರಾಷ್ಟ್ರೀಯ ಚಳುವಳಿಯಲ್ಲಿ ಭಾಗವಹಿಸಿದ ನಮ್ಮ ಪಕ್ಷದ ಪ್ರಣಾಳಿಕೆ ಬಗ್ಗೆ ಹೀಗೆ ಹೇಳುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಲೀಗ್‌ ಚಿಂತನೆಗಳನ್ನು ಬಿಂಬಿಸುವ ಕಾಂಗ್ರೆಸ್ ಪ್ರಣಾಳಿಕೆ: ಸಹರಾನ್‌ಪುರದಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಇದು ನಮ್ಮ ಜಾತ್ಯತೀತ ಸಮಾಜದ ಸ್ವಾತಂತ್ರ್ಯವನ್ನು ವಿರೋಧಿಸುವ ಪಕ್ಷಗಳ ಪ್ರಣಾಳಿಕೆಯಂತೆ ತೋರುತ್ತಿದೆ ಎಂದು ಮೋದಿ ಅವರು ಹೇಳಿದ್ದಾರೆ. ಈ ವಿಷಯದಿಂದ ನಾವು ತುಂಬಾ ದುಃಖಿತರಾಗಿದ್ದೇವೆ ಮತ್ತು ಪ್ರಧಾನಿಗೆ ಅಂತಹ ಮಾತನ್ನು ಹೇಳುವ ಹಕ್ಕು ಇಲ್ಲ. ನಾವು ಈ ವಿಷಯವನ್ನು ಚುನಾವಣಾ ಆಯೋಗದ ಮುಂದೆ ಇಟ್ಟಿದ್ದೇವೆ ಮತ್ತು ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳುವಂತೆ ಅವರಿಗೆ ವಿಶೇಷ ಮನವಿ ಮಾಡಿದ್ದೇವೆ ಎಂದು ಮಾಜಿ ಕೇಂದ್ರ ಸಚಿವ ಎಎನ್‌ಐಗೆ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ