ಲೋಕಸಭಾ ಚುನಾವಣೆ: ಕೇರಳದಲ್ಲಿ ಎಸ್​ಡಿಪಿಐ ಬೆಂಬಲ ತಿರಸ್ಕರಿಸಿದ ಕಾಂಗ್ರೆಸ್​

ಕೇರಳದಲ್ಲಿ ಎಸ್​ಡಿಪಿಐ ಬೆಂಬಲವನ್ನು ತಿರಸ್ಕರಿಸಲಾಗಿದೆ ಎಂದು ಕಾಂಗ್ರೆಸ್​ ಸ್ಪಷ್ಟಪಡಿಸಿದೆ. ಕೇರಳದ ವಯನಾಡಿನಿಂದ ನಾಮಪತ್ರ ಸಲ್ಲಿಸಿದ ನಂತರ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿವಾದಗಳ ಸುಳಿಯಲ್ಲಿ ಸಿಲುಕಿದ್ದಾರೆ. ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ರಾಜಕೀಯ ವಿಭಾಗವಾದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಂಬಲವನ್ನು ಕಾಂಗ್ರೆಸ್ ಸ್ವೀಕರಿಸಿದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದರು.

ಲೋಕಸಭಾ ಚುನಾವಣೆ: ಕೇರಳದಲ್ಲಿ ಎಸ್​ಡಿಪಿಐ ಬೆಂಬಲ ತಿರಸ್ಕರಿಸಿದ ಕಾಂಗ್ರೆಸ್​
ಸತೀಶನ್
Follow us
ನಯನಾ ರಾಜೀವ್
|

Updated on: Apr 05, 2024 | 8:23 AM

ಕೇರಳದಲ್ಲಿ ಎಸ್​ಡಿಪಿಐ ಬೆಂಬಲವನ್ನು ತಿರಸ್ಕರಿಸಲಾಗಿದೆ ಎಂದು ಕಾಂಗ್ರೆಸ್​ ಸ್ಪಷ್ಟಪಡಿಸಿದೆ. ಕೇರಳದ ವಯನಾಡಿನಿಂದ ನಾಮಪತ್ರ ಸಲ್ಲಿಸಿದ ನಂತರ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿವಾದಗಳ ಸುಳಿಯಲ್ಲಿ ಸಿಲುಕಿದ್ದಾರೆ. ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ರಾಜಕೀಯ ವಿಭಾಗವಾದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಂಬಲವನ್ನು ಕಾಂಗ್ರೆಸ್ ಸ್ವೀಕರಿಸಿದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದರು.

ಆದರೆ, ಈಗ ಕಾಂಗ್ರೆಸ್​ ಎಸ್‌ಡಿಪಿಐ ಬೆಂಬಲವನ್ನು ಸ್ವೀಕರಿಸಿಲ್ಲ ಎಂದು ಸ್ಪಷ್ಟಪಡಿಸಿದೆ. ಕೇರಳದಲ್ಲಿ ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ ನಡೆಯಲಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷವನ್ನು ಬೆಂಬಲಿಸುವುದಾಗಿ ಎಸ್​ಡಿಪಿಐ ಹೇಳಿಕೆ ನೀಡಿದ ಬಳಿಕ ಕಾಂಗ್ರೆಸ್​ ಈ ಹೇಳಿಕೆ ಬಿಡುಗಡೆ ಮಾಡಿದೆ.

ಕಾಂಗ್ರೆಸ್​ ಬಹುಸಂಖ್ಯಾತ ಮತ್ತು ಅಲ್ಪಸಂಖ್ಯಾತ ಕೋಮುವಾದ ಎರಡನ್ನೂ ವಿರೋಧಿಸುತ್ತದೆ. ಎಸ್​ಡಿಪಿಐ ನೀಡಿದ ಬೆಂಬಲವೂ ಅದೇ ರೀತಿಯಲ್ಲಿದೆ. ಯುಡಿಎಫ್ ಅಲ್ಪಸಂಖ್ಯಾತ ಉಗ್ರವಾದ ಮತ್ತು ಬಹುಸಂಖ್ಯಾತ ಉಗ್ರವಾದ ಎರಡಕ್ಕೂ ವಿರುದ್ಧವಾಗಿದೆ. ಅವರ ಬೆಂಬಲವನ್ನು ನಾವು ತೆಗೆದುಕೊಳ್ಳುವುದಿಲ್ಲ. ಆ ನಿಲುವು ಎಸ್‌ಡಿಪಿಐಗೂ ಅನ್ವಯಿಸುತ್ತದೆ.

ಮತ್ತಷ್ಟು ಓದಿ: ‘ಭಾರತ್ ಮಾತಾ ಕೀ ಜೈ’, ‘ಜೈ ಹಿಂದ್’ ಘೋಷಣೆ ಮುಸ್ಲಿಮರ ಕೊಡುಗೆ: ಕೇರಳ ಸಿಎಂ ಪಿಣರಾಯಿ ವಿಜಯನ್

ಎಸ್‌ಡಿಪಿಐ ಬೆಂಬಲ ನೀಡಿದಾಗ ನಾವು ಅದನ್ನು ಸ್ವೀಕರಿಸಲಿಲ್ಲ ಅಥವಾ ಸ್ವಾಗತಿಸಲಿಲ್ಲ. ನಾವು ಈ ವಿಷಯವನ್ನು ಚರ್ಚಿಸಿದ್ದೇವೆ ಮತ್ತು ಅದನ್ನು ತಿರಸ್ಕರಿಸಲು ನಿರ್ಧರಿಸಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಮತ್ತು ಹಿರಿಯ ಕಾಂಗ್ರೆಸ್ ಶಾಸಕ ವಿಡಿ ಸತೀಶನ್ ಹೇಳಿದ್ದಾರೆ.

ಕೇರಳ ರಾಜ್ಯದಲ್ಲಿ 20 ಸಂಸದೀಯ ಕ್ಷೇತ್ರಗಳಿವೆ. ಆಡಳಿತಾರೂಢ ಸಿಪಿಎಂ ನೇತೃತ್ವದ ಎಲ್ ಡಿಎಫ್ ಮೈತ್ರಿಕೂಟ, ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ ಮತ್ತು ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ದೇಶದಲ್ಲಿ ನಿಷೇಧಿತ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜಕೀಯ ಮುಖವೆಂದು ಪರಿಗಣಿಸಲಾದ ಎಸ್‌ಟಿಪಿಐ ಕಾಂಗ್ರೆಸ್‌ಗೆ ಬೆಂಬಲ ನೀಡಿರುವುದನ್ನು ಸಿಪಿಎಂ ಲೇವಡಿ ಮಾಡಿದೆ. ಮತ್ತು ರಾಷ್ಟ್ರಮಟ್ಟದಲ್ಲಿ ಬಿಜೆಪಿ ಕೂಡ ಈ ವಿಷಯವನ್ನು ಕೈಗೆತ್ತಿಕೊಂಡು ಪ್ರಚಾರ ಆರಂಭಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್