ಕಾಂಗ್ರೆಸ್ ಸದಾ ಅಂಬೇಡ್ಕರ್ ಅವರನ್ನು ಅವಮಾನಿಸಿದೆ; ಸಿಎಂ ಯೋಗಿ ಆದಿತ್ಯನಾಥ್ ವಾಗ್ದಾಳಿ

ಇಂದು ಸುದ್ದಿಗೋಷ್ಠಿ ನಡೆಸಿದ ಸಿಎಂ ಯೋಗಿ ಆದಿತ್ಯನಾಥ್ ಅವರು ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್ ವಿರುದ್ಧ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ನೆಹರೂ ಸರ್ಕಾರದ ವಿರುದ್ಧ ಆರೋಪ ಮಾಡಿದಾಗ ಅವರಿಗೆ ಸದನದಲ್ಲಿ ಮಾತನಾಡಲು ಬಿಡಲಿಲ್ಲ ಎಂದು ಸಿಎಂ ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ.

ಕಾಂಗ್ರೆಸ್ ಸದಾ ಅಂಬೇಡ್ಕರ್ ಅವರನ್ನು ಅವಮಾನಿಸಿದೆ; ಸಿಎಂ ಯೋಗಿ ಆದಿತ್ಯನಾಥ್ ವಾಗ್ದಾಳಿ
Cm Yogi Adityanath
Follow us
ಸುಷ್ಮಾ ಚಕ್ರೆ
|

Updated on: Dec 24, 2024 | 5:00 PM

ನವದೆಹಲಿ: ಬಾಬಾ ಸಾಹೇಬ್ ಡಾ. ಬಿ.ಆರ್​. ಅಂಬೇಡ್ಕರ್ ಕುರಿತಾದ ವಿವಾದಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸಿಎಂ ಡಾ. ಬಿ.ಆರ್​. ಅಂಬೇಡ್ಕರ್ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಬಿ.ಆರ್ ಅಂಬೇಡ್ಕರ್ ಅವರಿಗೆ ಅಗೌರವ ತೋರುತ್ತಿದೆ, ದಲಿತ ಮತ್ತು ಹಿಂದುಳಿದ ಸಮುದಾಯಗಳನ್ನು ನಿರ್ಲಕ್ಷಿಸಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟೀಕಿಸಿದ್ದಾರೆ. ಅಂಬೇಡ್ಕರ್ ಅವರ ಚುನಾವಣಾ ಸೋಲಿಗೆ ಕಾಂಗ್ರೆಸ್ ಸಂಚು ರೂಪಿಸಿತ್ತು. ಅವರ ಗೌರವಾರ್ಥ ಸ್ಮಾರಕಗಳನ್ನು ಸ್ಥಾಪಿಸಲು ಕಾಮಗ್ರೆಸ್ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಆದರೆ, ಬಿಜೆಪಿ ಸದಾ ಅಂಬೇಡ್ಕರ್ ತತ್ವಗಳನ್ನು ಗೌರವಿಸಿದೆ. ಅಂಬೇಡ್ಕರ್ ಅವರ ಜೀವನಕ್ಕೆ ಸಂಬಂಧಿಸಿದ ಐದು ಮಹತ್ವದ ತಾಣಗಳಾದ ‘ಪಂಚತೀರ್ಥ’ವನ್ನು ಅಭಿವೃದ್ಧಿಪಡಿಸುವುದು ಸೇರಿದಂತೆ ಅಂಬೇಡ್ಕರ್ ಅವರ ಪರಂಪರೆಯನ್ನು ಗೌರವಿಸಲು ಬಿಜೆಪಿ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್ ವಿವಾದ; ಅಮಿತ್ ಶಾ ವಿರುದ್ಧ ಸಂಸತ್​ನಲ್ಲಿ ವಿಶೇಷ ಹಕ್ಕು ನೋಟಿಸ್ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

ತುರ್ತು ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಸಂವಿಧಾನದಲ್ಲಿ ತಿದ್ದುಪಡಿ ಮಾಡಿತು. ಜಾತ್ಯತೀತ ಮತ್ತು ಸಮಾಜವಾದಿ ಪದಗಳನ್ನು ಸೇರಿಸಿತು. ಇದು ಅಂಬೇಡ್ಕರ್ ಅವರ ಮೂಲ ದೃಷ್ಟಿಯ ಭಾಗವಲ್ಲ ಎಂದು ಸಿಎಂ ಯೋಗಿ ಆದಿತ್ಯನಾಥ್ ವಾದಿಸಿದ್ದಾರೆ. ಇದಲ್ಲದೆ, ದಲಿತರು ಮತ್ತು ಅಂಚಿನಲ್ಲಿರುವ ಸಮುದಾಯಗಳನ್ನು ಮೇಲಕ್ಕೆತ್ತಲು ಬಿಜೆಪಿ ಸತತವಾಗಿ ಕೆಲಸ ಮಾಡಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

‘‘ಕಾಂಗ್ರೆಸ್ ಮತ್ತಿತರ ವಿರೋಧ ಪಕ್ಷಗಳು ಕಾಲಕಾಲಕ್ಕೆ ಬಾಬಾ ಸಾಹೇಬರಿಗೆ ಮಾಡುತ್ತಿರುವ ಅಸಂವಿಧಾನಿಕ ಮತ್ತು ಅನೈತಿಕ ಅವಮಾನವನ್ನು ಎತ್ತಿ ಹಿಡಿಯುವುದು ಈ ಪತ್ರಿಕಾಗೋಷ್ಠಿಯ ಉದ್ದೇಶವಾಗಿದ್ದು, ದೇಶದ ಸ್ವಾತಂತ್ರ್ಯ ಮತ್ತು ಸಂವಿಧಾನ ರಚನೆ ಸಂದರ್ಭದಲ್ಲಿ ಬಾಬಾ ಸಾಹೇಬರು ಪ್ರಮುಖ ಪಾತ್ರ ವಹಿಸಿದ್ದರು. ಬಿಜೆಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಗೌರವದ ಭಾವನೆಯನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್ ವಿವಾದದ ಕುರಿತು ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷಗಳಿಂದ ಸ್ವಾರ್ಥ ರಾಜಕಾರಣ; ಮಾಯಾವತಿ ವಾಗ್ದಾಳಿ

ಭಾರತದ ಸ್ವಾತಂತ್ರ್ಯ ಹೋರಾಟ, ಸಂವಿಧಾನ ರಚನೆ ಮತ್ತು ಸ್ವತಂತ್ರ ಭಾರತವನ್ನು ರೂಪಿಸುವಲ್ಲಿ ಅಂಬೇಡ್ಕರ್ ಅವರ ಮಹತ್ವದ ಕೊಡುಗೆಗಳನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಒತ್ತಿ ಹೇಳಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಹಾಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅಂಬೇಡ್ಕರ್ ಅವರಿಗೆ ಸಂಪೂರ್ಣ ಗೌರವ ದೊರೆತಿದೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ