’ಕಾಂಗ್ರೆಸ್​ ಪಕ್ಷ ಭಯೋತ್ಪಾದನೆಯ ತಾಯಿ’- ವಿವಾದ ಸೃಷ್ಟಿಸಿದ ಸಿಎಂ ಯೋಗಿ ಆದಿತ್ಯನಾಥ್​

ನಾಗರಿಕರ ಕಷ್ಟಗಳಿಗೆ ನಾವು ಸ್ಪಂದಿಸುತ್ತೇವೆ. ಶ್ರೀರಾಮನ ಭವ್ಯ ದೇಗುಲ ನಿರ್ಮಾಣಕ್ಕೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಹೇಳಿದ್ದಾರೆ.

’ಕಾಂಗ್ರೆಸ್​ ಪಕ್ಷ ಭಯೋತ್ಪಾದನೆಯ ತಾಯಿ’- ವಿವಾದ ಸೃಷ್ಟಿಸಿದ ಸಿಎಂ ಯೋಗಿ ಆದಿತ್ಯನಾಥ್​
ಯೋಗಿ ಆದಿತ್ಯನಾಥ್​
Follow us
TV9 Web
| Updated By: Lakshmi Hegde

Updated on:Sep 13, 2021 | 10:50 AM

ಕುಶಿನಗರ್​: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath)​ ಅವರು ಕಾಂಗ್ರೆಸ್​ ವಿರುದ್ಧ ಮಾಡಿದ ಗಂಭೀರ ಆರೋಪವೊಂದು ಇದೀಗ ವಿವಾದಕ್ಕೆ ಗುರಿಯಾಗಿದೆ. ಇಂದು ಕುಶಿನಗರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ಯಾರು ದೇಶಕ್ಕೆ ನೋವು ಕೊಡುತ್ತಾರೋ ಅವರನ್ನು ಸಹಿಸಿಕೊಳ್ಳುವುದಿಲ್ಲ ಎಂದು ಹೇಳಿದರು. ಆದರೆ ಅದಕ್ಕೂ ಮೊದಲು ‘ಕಾಂಗ್ರೆಸ್​ ಪಕ್ಷ ಭಯೋತ್ಪಾದನೆಯ ತಾಯಿ’ ಎಂದು ಯೋಗಿ ಆದಿತ್ಯನಾಥ್​ ಹೇಳಿದ ಮಾತೀಗ ದೊಡ್ಡ ವಿವಾದ ಸೃಷ್ಟಿಸಿದೆ.

ಕಾಂಗ್ರೆಸ್​​ ಉಗ್ರವಾದದ ತಾಯಿ..ಅಷ್ಟೇ ಅಲ್ಲ ಹಲವು ಮಾಫಿಯಾಗಳಿಗೆ ಆಶ್ರಯವನ್ನು ಕೊಟ್ಟಿದೆ. ಶ್ರೀರಾಮನ ಮೇಲಿನ ನಂಬಿಕೆಯನ್ನೇ ಆ ಪಕ್ಷ ಅವಮಾನಿಸಿದೆ. ಅದಕ್ಕೆ ವಿರುದ್ಧವಾಗಿ ಬಿಜೆಪಿ ಇದೆ. ನಾಗರಿಕರ ಕಷ್ಟಗಳಿಗೆ ನಾವು ಸ್ಪಂದಿಸುತ್ತೇವೆ. ಶ್ರೀರಾಮನ ಭವ್ಯ ದೇಗುಲ ನಿರ್ಮಾಣಕ್ಕೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ ಮತ್ತು ಈ ಮಾಫಿಯಾಗಳನ್ನೆಲ್ಲ ಹತ್ತಿಕ್ಕಿ, ಅವರು ಯಾವ ಸ್ಥಳಕ್ಕೆ ಹೋಗಬೇಕೋ ಅಲ್ಲಿಗೇ ಕಳಿಸುತ್ತೇವೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಈ ಹಿಂದೆ ಎಸ್​ಪಿ, ಬಿಎಸ್​ಪಿ ಮತ್ತು ಕಾಂಗ್ರೆಸ್​ ಸರ್ಕಾರಗಳು ಇದ್ದಾಗ ಅವು ಕೊಟ್ಟಿದ್ದೇನು? ಬರೀ ಕಾಯಿಲೆಗಳು, ನಿರುದ್ಯೋಗ, ಮಾಫಿಯಾ ರಾಜ್ಯ ಮತ್ತು ಭ್ರಷ್ಟಾಚಾರಗಳನ್ನೇ ಕೊಟ್ಟಿದ್ದಾರೆ. 2017ಕ್ಕಿಂತಲೂ ಮೊದಲು ಎಲ್ಲರಿಗೂ ರೇಶನ್​ ಸಿಗುತ್ತಿತ್ತಾ?  ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಆಡಳಿತದಲ್ಲಿ ಓಲೈಕೆ ರಾಜಕಾರಣಕ್ಕೆ ಅವಕಾಶವೇ ಇಲ್ಲ. ಹಿಂದೆ ಯಾರು ಅಬ್ಬಾ ಜಾನ್​ ಎನ್ನುತ್ತಿದ್ದರೋ (ಓಲೈಕೆ ರಾಜಕಾರಣ ಮಾಡುತ್ತಿದ್ದರೋ) ಅವರಿಗೆ ಮಾತ್ರ ರೇಶನ್​ ಸಿಗುತ್ತಿತ್ತು. ಬಡವರ ರೇಶನ್​​ ಎಲ್ಲ ಅವರೇ ನುಂಗುತ್ತಿದ್ದರು ಎಂದು ಯೋಗಿ ವಾಗ್ದಾಳಿ ನಡೆಸಿದ್ದಾರೆ. ಈ ರಾಜ್ಯದ ಜನರು, ತಾಲಿಬಾನಿಗಳ ಪರ ಇರುವವರನ್ನು, ವಂಶ ರಾಜಕಾರಣವನ್ನು, ಜಾತಿ ಆಧಾರಿತವಾಗಿ ಇರುವವರನ್ನು ತಿರಸ್ಕರಿಸಬೇಕು ಎಂದೂ ಹೇಳಿದ್ದಾರೆ.

ನೆಹರೂ ಅವರಿಗೆ ರಾಮನಲ್ಲಿ ನಂಬಿಕೆ ಇರಲಿಲ್ಲ.. ರಾಮನ ಭಕ್ತರಿಗೆ ಅವಮಾನ ಮಾಡುವವರನ್ನು ಜನರು ಒಪ್ಪಿಕೊಳ್ಳಲೇಬಾರು. ಚೇಳು ಎಲ್ಲಿದ್ದರೂ ಅದು ಕಚ್ಚುತ್ತದೆ ಎಂಬುದನ್ನು ಸದಾ ನೆನಪಿಟ್ಟುಕೊಳ್ಳಬೇಕು. ನಮ್ಮ ಪ್ರಧಾನಮಂತ್ರಿಯವರು ದೇಶದಲ್ಲಿದ್ದ ಅನಿಷ್ಟ ಪದ್ಧತಿ ತ್ರಿವಳಿ ತಲಾಖ್​​ನ್ನು ರದ್ದುಗೊಳಿಸಿದರು. ಅದೇ ಸಮಾಜವಾದಿ ಪಕ್ಷದ ನಾಯಕರು, ತಾಲಿಬಾನ್​ ಆಡಳಿತ ಬೆಂಬಲಿಸಿ ಹೇಳಿಕೆ ನೀಡುತ್ತಾರೆ. 2012ರಲ್ಲಿ ಅಂದಿದ್ದ ಎಸ್​ಪಿ ಸರ್ಕಾರ ಭಯೋತ್ಪಾದಕರ ವಿರುದ್ಧ ಇದ್ದ ಪ್ರಕರಣಗಳನ್ನೆಲ್ಲ ಹಿಂಪಡೆದಿದೆ ಎಂದು ಯೋಗಿ ಆದಿತ್ಯನಾಥ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಅಷ್ಟೇ ಅಲ್ಲ, ನೆಹರೂ ಅವರಿಗೆ ಶ್ರೀರಾಮನಲ್ಲಿ ನಂಬಿಕೆ ಇರಲಿಲ್ಲ. ಇಂದಿರಾಗಾಂಧಿಯವರು ಸಾಧು-ಸಂತರ ಮೇಲೆಯೇ ಗುಂಡಿನ ದಾಳಿ ನಡೆಯುವಂತೆ ಮಾಡಿದರು. ಸೋನಿಯಾ ಗಾಂಧಿಯವರು ರಾಮ ಇದ್ದಾನೆ ಎಂಬುದನ್ನೇ ಒಪ್ಪಲಿಲ್ಲ ಎಂದು ಹೇಳಿದರು.

ಇದನ್ನೂ ಓದಿ: Virat Kohli: ಆರ್​ಸಿಬಿ ತಂಡ ಸೇರಿಕೊಂಡ ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್

ರಸ್ತೆಯಲ್ಲಿ ಮಹಿಳೆಯ ಕೈಹಿಡಿದು ಎಳೆದಾಡಿದ ಜೆಡಿಎಸ್ ಮುಖಂಡ ಅರೆಸ್ಟ್, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಪೊಲೀಸರು

Published On - 10:36 am, Mon, 13 September 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ