Assam Elections 2021: ಕಾಂಗ್ರೆಸ್ ಟೀ ರಾಜಕಾರಣ ಮಾಡುತ್ತಿದೆ, ಬಿಜೆಪಿ ಚಹಾ ತೋಟದ ಕಾರ್ಮಿಕರ ಕಲ್ಯಾಣಕ್ಕೆ ಬದ್ಧ: ನರೇಂದ್ರ ಮೋದಿ

Modi in Assam: ಅಸ್ಸಾಂನ ಚಹಾ ತೋಟದ ಕಾರ್ಮಿಕರ ಅಭಿವೃದ್ಧಿ ಬಗ್ಗೆ ಮಾತನಾಡಿದ ಮೋದಿ, ಕಾಂಗ್ರೆಸ್ ಚಹಾ ರಾಜಕಾರಣ ಮಾಡಿತ್ತು. ಆದರೆ ಎನ್​ಡಿಎ ಸರ್ಕಾರ ಶಿಕ್ಷಣ, ಕೆಲಸ, ಔಷಧಿಗಳನ್ನು ಚಹಾ ತೋಟದ ಕಾರ್ಮಿಕರಿಗೆ ಒದಗಿಸಿದೆ ಎಂದಿದ್ದಾರೆ

Assam Elections 2021: ಕಾಂಗ್ರೆಸ್ ಟೀ ರಾಜಕಾರಣ ಮಾಡುತ್ತಿದೆ, ಬಿಜೆಪಿ ಚಹಾ ತೋಟದ ಕಾರ್ಮಿಕರ ಕಲ್ಯಾಣಕ್ಕೆ ಬದ್ಧ: ನರೇಂದ್ರ ಮೋದಿ
ಅಸ್ಸಾಂನಲ್ಲಿ ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on: Mar 21, 2021 | 1:40 PM

ಬೋಕಾಖಾತ್: ಅಸ್ಸಾಂನಲ್ಲಿ ಎರಡನೇ ಬಾರಿ ಎನ್​ಡಿಎ ಸರ್ಕಾರ ಅಧಿಕಾರಕ್ಕೇರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾನುವಾರ ಬೋಕಾಖಾತ್​ನಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮವನ್ನುದ್ದೇಶಿ ಮಾತನಾಡಿದ ಮೋದಿ, ಭಾಷಣವನ್ನು ಅಸ್ಸಾಮೀಸ್ ಭಾಷೆಯಲ್ಲಿ ಆರಂಭಿಸಿದ್ದಾರೆ. ಅಸ್ಸಾಂನಲ್ಲಿ ‘ಡಬಲ್ ಎಂಜಿನ್ ಕೀ ಸರ್ಕಾರ’ ಬರಲಿದೆ. ‘ದೂಸ್ ರೀ ಬಾರ್ ಬಿಜೆಪಿ ಸರ್ಕಾರ’ (ಎರಡನೇ ಬಾರಿ ಬಿಜೆಪಿ ಸರ್ಕಾರ) ಎಂದು ಮೋದಿ ಹೇಳಿದ್ದಾರೆ. ಎನ್​ಡಿಎ ನೇತೃತ್ವದ ಡಬಲ್ ಎಂಜಿನ್ ಸರ್ಕಾರ ಉಚಿತ ಗ್ಯಾಸ್ ಸಿಲಿಂಡರ್, ಎಲ್​ಪಿಜಿ, ವಿದ್ಯುತ್ ಮತ್ತು ಉಚಿತ ಆರೋಗ್ಯ ವ್ಯವಸ್ಥೆಯನ್ನು ರಾಜ್ಯದ ಜನರಿಗೆ ನೀಡಿದೆ. ಈ ಹಿಂದೆ ಇದ್ದ ಕಾಂಗ್ರೆಸ್ ನೇತೃತ್ವದ ಸರ್ಕಾರವು ಖಡ್ಗಮೃಗಗಳನ್ನು ರಕ್ಷಿಸಲು ವಿಫಲವಾಗಿತ್ತು. ಆದರೆ ಎನ್ಡಿಎ ಸರ್ಕಾರ ಖಡ್ಗಮೃಗಗಳನ್ನು ಕಾಪಾಡಿದೆ. ಬ್ರಹ್ಮಪುತ್ರಾ ನದಿಗೆ ಕಟ್ಟಲಾದ ಚತುಷ್ಪಥ ಸೇತುವೆಯು ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸಿದೆ. ರಾಜ್ಯದಲ್ಲಿ ಎನ್ ಡಿಎ ಆಡಳಿತಾವಧಿಯಲ್ಲಿ ಮೌಲಸೌಕರ್ಯಗಳು ಹೆಚ್ಚಿವೆ ಎಂದಿದ್ದಾರೆ ಮೋದಿ.

ಕಾಂಗ್ರೆಸ್ ಸರ್ಕಾರದ ಮೇಲೆ ಹರಿಹಾಯ್ದ ಪ್ರಧಾನಿ ಮೋದಿ, ರಾಜ್ಯದಲ್ಲಿ ತೈಲ ಮತ್ತು ಪೆಟ್ರೊಲಿಯಂ ವಲಯದ ಅಭಿವೃದ್ಧಿಗಾಗಿ ₹40,000 ಕೋಟಿ ಹೂಡಿಕೆ ಮಾಡಲಾಗಿದೆ. ತೈಲ ಸಂಸ್ಕರಣಾ ಘಟಕಗಳಲ್ಲಿ ಉತ್ಪಾದನೆಯ ಪ್ರಮಾಣ ಹೆಚ್ಚಿಸಲು ಡಬಲ್ ಎಂಜಿನ್ ಸರ್ಕಾರ ಹೂಡಿಕೆಯ ಮಹಾಪೂರವೇ ಹರಿದು ಬರುವಂತೆ ಮಾಡಿದೆ. ಈ ಹಿಂದೆ ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಅಸ್ಸಾಂನ್ನು ಕಡೆಗಣಿಸಲಾಗಿತ್ತು, ಇಲ್ಲಿ ಭ್ರಷ್ಟಾಚಾರ ಹೆಚ್ಚಿತ್ತು. ಆದರೆ ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಅಸ್ಸಾಂನ ಅಭಿವೃದ್ಧಿ ಮಾಡಿದೆ. ಕಾಂಗ್ರೆಸ್ ಅಂದರೆ ಗೊಂದಲ. ಕಾಂಗ್ರೆಸ್ ಅಂದರೆ ಬಾಂಬ್, ಬಂದೂಕು ಮತ್ತು ದಿಗ್ಬಂಧನ. ಅಸ್ಸಾಂನ ಜನರು ‘ಲೂಟ್ ಕಾ ಇಂಜಿನ್’ ಕಾಂಗ್ರೆಸ್ ಪಕ್ಷವನ್ನು ದೂರವಿರಿಸಬೇಕಾಗಿದೆ ಎಂದು ಮೋದಿ ಹೇಳಿದ್ದಾರೆ.

ಅಸ್ಸಾಂನ ಚಹಾ ತೋಟದ ಕಾರ್ಮಿಕರ ಅಭಿವೃದ್ಧಿ ಬಗ್ಗೆ ಮಾತನಾಡಿದ ಮೋದಿ, ಕಾಂಗ್ರೆಸ್ ಚಹಾ ರಾಜಕಾರಣ ಮಾಡಿತ್ತು. ಆದರೆ ಎನ್​ಡಿಎ ಸರ್ಕಾರ ಶಿಕ್ಷಣ, ಕೆಲಸ, ಔಷಧಿಗಳನ್ನು ಚಹಾ ತೋಟದ ಕಾರ್ಮಿಕರಿಗೆ ಒದಗಿಸಿದೆ. ಚಹಾ ತೋಟದ ಕಾರ್ಮಿಕರ ಕಲ್ಯಾಣಕ್ಕೆ ಬಿಜೆಪಿ ಸರ್ಕಾರ ಬದ್ಧವಾಗಿದೆ. 2021-2022ರ ಸಾಲಿನ ಕೇಂದ್ರ ಬಜೆಟ್ ನಲ್ಲಿ ಅಸ್ಸಾಂ ಚಹಾ ತೋಟದ ಕಾರ್ಮಿಕರ ಕಲ್ಯಾಣಕ್ಕಾಗಿ ₹1,000ಕೋಟಿಗಿಂತಲೂ ಹೆಚ್ಚು ಹಣ ಮೀಸರಿಲಿಸಿದೆ. ಇಲ್ಲಿನ ಸರ್ಕಾರ ಉದ್ಯೋಗ ಸೃಷ್ಟಿಗಾಗಿ ಕಠಿಣ ಪರಿಶ್ರಮ ನಡೆಸಿದೆ ಎಂದು ಮೋದಿ ಹೇಳಿದ್ದಾರೆ.

ಅಸ್ಸಾಂ ವಿಧಾನಸಭೆ ಚುನಾವಣೆಗಾಗಿ ಮೊದಲ ಹಂತರದ ಚುನಾವಣೆ ಮಾರ್ಚ್ 27ರಂದು ನಡೆಯಿದ್ದು, ಏಪ್ರಿಲ್ 6ರಂದು ಕೊನೆಯ ಹಂತದ ಚುನಾವಣೆ ನಡೆಯಲಿದೆ. ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.

ಮೋದಿಯವರು ಇಂದು ಸಂಜೆ 3.30ಕ್ಕೆ ಪಶ್ಚಿಮ ಬಂಗಾಳದ ಬಂಕುರಾದಲ್ಲಿ ತಿಲಾ ಬೆಡಿಯಾ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ. ಶನಿವಾರ ಪಶ್ಚಿಮಬಂಗಾಳದ ಖರಗ್​ಪುರ್​ನಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮೋದಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ಹಿಂಸಾಚಾರ, ಭ್ರಷ್ಟಾಚಾರ ಮತ್ತು ದುರಾಡಳಿತ ನಡೆಸುತ್ತಿದೆ ಎಂದು ಆರೋಪಿಸಿದ್ದರು. ಟಿಎಂಸಿ ಸರ್ಕಾರದಿಂದ ಬಂಗಾಳದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ ಎಂದು ದೂರಿದ ಮೋದಿ, ಬಿಜೆಪಿ ಸರ್ಕಾರದ ಆತ್ಮನಿರ್ಭರ್ ಭಾರತದ ಉದ್ದೇಶ ಟಿಎಂಸಿ ಸರ್ಕಾರಕ್ಕೆ ನೋವುಂಟು ಮಾಡುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: Assam Assembly Elections 2021: ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿದ ಕಾಂಗ್ರೆಸ್; ಸಿಎಎ ಕಿತ್ತೊಗೆಯುತ್ತೇವೆ ಎಂದು ಭರವಸೆ

Assam Assembly Elections 2021: ಅಸ್ಸಾಂನ ಗೌರವ ಕುಗ್ಗಿಸುವವರಿಗೆ ಮತ ಹಾಕುವಿರೇ?; ಪ್ರಧಾನಿ ಮೋದಿ ಪ್ರಶ್ನೆ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್