AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ ಸರ್ಕಾರ ಆರೋಪಿಗಳಿಗೆ ಸಹಾಯ ಮಾಡಲು ಬಯಸುತ್ತದೆ: ಅಧೀರ್ ರಂಜನ್ ಚೌಧರಿ ವಾಗ್ದಾಳಿ

ಕಳೆದ ಶುಕ್ರವಾರ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ತೀವ್ರ ಗಾಯದ ಗುರುತುಗಳೊಂದಿಗೆ ಪತ್ತೆಯಾದ ಸ್ನಾತಕೋತ್ತರ ತರಬೇತಿ ವೈದ್ಯೆಯ ಅಮಾನುಷ ಅತ್ಯಾಚಾರ ಮತ್ತು ಹತ್ಯೆಯ ಕುರಿತು ಕಲ್ಕತ್ತಾ ಹೈಕೋರ್ಟ್ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಗೆ ಆದೇಶಿಸಿದೆ

ಪಶ್ಚಿಮ ಬಂಗಾಳ ಸರ್ಕಾರ ಆರೋಪಿಗಳಿಗೆ ಸಹಾಯ ಮಾಡಲು ಬಯಸುತ್ತದೆ: ಅಧೀರ್ ರಂಜನ್ ಚೌಧರಿ ವಾಗ್ದಾಳಿ
ಅಧೀರ್ ರಂಜನ್ ಚೌಧರಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Aug 13, 2024 | 8:52 PM

Share

ದೆಹಲಿ ಆಗಸ್ಟ್ 13: ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ (Adhir Ranjan Chowdhury) ಅವರು ಮಂಗಳವಾರ ಕೋಲ್ಕತ್ತಾದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಿರ್ವಹಣೆಯ ಬಗ್ಗೆ ಪಶ್ಚಿಮ ಬಂಗಾಳದ (West Bengal) ಮಮತಾ ಬ್ಯಾನರ್ಜಿ (Mamata Banerjee) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಇದು ಖಂಡನೀಯ. ರಾಜ್ಯ ಸರಕಾರ ಕ್ರಮ ಕೈಗೊಳ್ಳಬೇಕಾದರೂ ಸಂದಿಗ್ಧ ಸ್ಥಿತಿಯಲ್ಲಿದೆ. ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ರಾಜ್ಯ ಸರ್ಕಾರವು ಸಮರ್ಥವಾಗಿಲ್ಲ ಮತ್ತು ಆರೋಪಿಗಳಿಗೆ ಸಹಾಯ ಮಾಡುವ ಉದ್ದೇಶವನ್ನು ತೋರುತ್ತಿದೆ ಎಂದು ಮಾಜಿ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಕಳೆದ ಶುಕ್ರವಾರ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ತೀವ್ರ ಗಾಯದ ಗುರುತುಗಳೊಂದಿಗೆ ಪತ್ತೆಯಾದ ಸ್ನಾತಕೋತ್ತರ ತರಬೇತಿ ವೈದ್ಯೆಯ ಅಮಾನುಷ ಅತ್ಯಾಚಾರ ಮತ್ತು ಹತ್ಯೆಯ ಕುರಿತು ಕಲ್ಕತ್ತಾ ಹೈಕೋರ್ಟ್ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಗೆ ಆದೇಶಿಸಿದೆ. ಈ ಭೀಕರ ಘಟನೆಗೆ ಸಂಬಂಧಿಸಿದಂತೆ ಸಂಜಯ್ ರಾಯ್ ಎಂಬ ನಾಗರಿಕ ಸ್ವಯಂಸೇವಕನನ್ನು ಪೊಲೀಸರು ಬಂಧಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಶಿವಜ್ಞಾನಂ ನೇತೃತ್ವದ ವಿಭಾಗೀಯ ಪೀಠವು ಕಳೆದ ಐದು ದಿನಗಳಲ್ಲಿ ಪೊಲೀಸರು ತನಿಖೆಯಲ್ಲಿ ಯಾವುದೇ ಮಹತ್ವದ ಪ್ರಗತಿಯನ್ನು ಸಾಧಿಸಿಲ್ಲ ಎಂದು ಗಮನಿಸಿದ ನಂತರ ಈ ಆದೇಶವನ್ನು ನೀಡಿತು.  ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಕಾಲೇಜಿನ ಅಂದಿನ ಪ್ರಾಂಶುಪಾಲ ಡಾ.ಸಂದೀಪ್ ಘೋಷ್ ಅವರನ್ನು ಮೊದಲು ಪ್ರಶ್ನಿಸಬೇಕಿತ್ತು ಎಂದು ಹೈಕೋರ್ಟ್ ಗಮನಿಸಿದೆ. ಮಹಿಳಾ ವೈದ್ಯರ ಸಾವಿಗೆ ನೈತಿಕ ಹೊಣೆ ಹೊತ್ತು ಘೋಷ್ ಸೋಮವಾರ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: 111 ಕಿಲೋಮೀಟರ್ ಕನ್ವರ್ ಮಾರ್ಗ ನಿರ್ಮಾಣಕ್ಕಾಗಿ 1 ಲಕ್ಷ ಮರ ಕಡಿಯಲಾಗಿತ್ತೇ?

ಮಮತಾ ರಾಜೀನಾಮೆಗೆ ಬಿಜೆಪಿ ಆಗ್ರಹ

ಹೈಕೋರ್ಟ್ ತೀರ್ಪನ್ನು ಶ್ಲಾಘಿಸಿದ ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಬ್ಯಾನರ್ಜಿ ರಾಜೀನಾಮೆಗೆ ಒತ್ತಾಯಿಸಿದರು. “ನಾವು ಆರೋಗ್ಯ ಸಚಿವರು ಮತ್ತು ಮುಖ್ಯಮಂತ್ರಿಯವರ ರಾಜೀನಾಮೆಯನ್ನು ಬಯಸುತ್ತೇವೆ. ಕೋಲ್ಕತ್ತಾ ಸಿಪಿ ವಿನೀತ್ ಗೋಯಲ್, ಸಿಎಂ ಅವರ ಆಪ್ತ ವೈದ್ಯ ಡಾ ಎಸ್ಪಿ ದಾಸ್ ಮತ್ತು ಡಾ ಸಂದೀಪ್ ಘೋಷ್ (ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲರು) ಅವರನ್ನು ಬಂಧಿಸಬೇಕೆಂದು ನಾವು ಬಯಸುತ್ತೇವೆ. ಅವರು ಈ ನರಮೇಧದ ಮುಖ್ಯ ವಾಸ್ತುಶಿಲ್ಪಿಗಳು. ಇದೊಂದು ಕ್ರೂರ ಕೊಲೆ ಮತ್ತು ಸಾಮೂಹಿಕ ಅತ್ಯಾಚಾರ,” ಎಂದು ಸುವೇಂದು ಅಧಿಕಾರಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ