ಕೊವಿಡ್ ನಿಭಾಯಿಸಲು ನರೇಂದ್ರ ಮೋದಿಗೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯಿಂದ 6 ಸಲಹೆ

Mallikarjun Kharge: ಎಲ್ಲರಿಗೂ ಉಚಿತ ಲಸಿಕೆ ಖಾತ್ರಿಪಡಿಸಿಕೊಳ್ಳಲು ಕೇಂದ್ರ ಬಜೆಟ್‌ನಲ್ಲಿ ನಿಗದಿಪಡಿಸಿದ ರೂ 35,000 ಕೋಟಿಗಳನ್ನು ಬಳಸಿ. ಲಸಿಕೆಗಳ ಉತ್ಪಾದನೆಯನ್ನು ಹೆಚ್ಚಿಸಲು ಕಡ್ಡಾಯ ಪರವಾನಗಿ ನೀಡಿ ಎಂದು ಖರ್ಗೆ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಕೊವಿಡ್ ನಿಭಾಯಿಸಲು ನರೇಂದ್ರ ಮೋದಿಗೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯಿಂದ 6 ಸಲಹೆ
ಮಲ್ಲಿಕಾರ್ಜುನ ಖರ್ಗೆ
Follow us
ರಶ್ಮಿ ಕಲ್ಲಕಟ್ಟ
|

Updated on:May 09, 2021 | 7:10 PM

ದೆಹಲಿ: ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರಿಗೆ ಪತ್ರ ಬರೆದಿದ್ದು ಕೊವಿಡ್ 19 ಸಾಂಕ್ರಾಮಿಕ ನಿಭಾಯಿಸಲು ಆರು ಸಲಹೆಗಳನ್ನು ನೀಡಿದ್ದಾರೆ. ರಾಜ್ಯಸಭೆಯ ಪ್ರತಿಪಕ್ಷದ ನಾಯಕರಾಗಿರುವ ಖರ್ಗೆ, ಸಂಸತ್ತಿನ ಸ್ಥಾಯಿ ಸಮಿತಿಗಳ ಸರ್ವಪಕ್ಷ ಸಭೆ ಮತ್ತು ವರ್ಚುವಲ್ ಸಭೆ ಕರೆಯುವಂತೆ ಪ್ರಧಾನಿ ಮೋದಿ ಅವರಿಗೆ ಸಲಹೆ ನೀಡಿದ್ದಾರೆ.

ಎಲ್ಲರಿಗೂ ಉಚಿತ ಲಸಿಕೆ ಖಾತ್ರಿಪಡಿಸಿಕೊಳ್ಳಲು ಕೇಂದ್ರ ಬಜೆಟ್‌ನಲ್ಲಿ ನಿಗದಿಪಡಿಸಿದ ರೂ35,000 ಕೋಟಿಗಳನ್ನು ಬಳಸಿ. ಲಸಿಕೆಗಳ ಉತ್ಪಾದನೆಯನ್ನು ಹೆಚ್ಚಿಸಲು ಕಡ್ಡಾಯ ಪರವಾನಗಿ ನೀಡಿ ಎಂದು ಖರ್ಗೆ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯ (MNREGA) ವ್ಯಾಪ್ತಿಯನ್ನು 200 ದಿನಗಳವರೆಗೆ ವಿಸ್ತರಿಸಲು ಖರ್ಗೆ ಸಲಹೆ ನೀಡಿದ್ದಾರೆ.

ಪರಿಹಾರ ಸಾಮಗ್ರಿಗಳ ವಿತರಣೆಯನ್ನು ಚುರುಕುಗೊಳಿಸಿ ಮತ್ತು ಅದನ್ನು ಎಲ್ಲಿಗೆ ರವಾನಿಸಲಾಗಿದೆ ಎಂಬುದನ್ನು ಪೂರ್ವಭಾವಿಯಾಗಿ ಬಹಿರಂಗಪಡಿಸಿ. ಒಮ್ಮತದಿಂದ ಮತ್ತು ಸಮಗ್ರವಾಗಿ ಆಡಳಿತ ನಡೆಸುವ ಮೂಲಕ ನಮ್ಮ ಸಾಮೂಹಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಿ ಎಂದು ಕಾಂಗ್ರೆಸ್ ನಾಯಕ ಪ್ರಧಾನಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಕಾರ್ಯಕ್ಷಮತೆಯನ್ನು ಪರಿಶೀಲಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆ ನಡೆಸುವ ಒಂದು ದಿನ ಮೊದಲು ಈ ಪತ್ರವನ್ನು ಖರ್ಗೆ ಬರೆದಿದ್ದಾರೆ . ಕಾಂಗ್ರೆಸ್ ಸಭೆಯಲ್ಲಿ ದೇಶದ ಕೊವಿಡ್-19 ಪರಿಸ್ಥಿತಿಯ ಬಗ್ಗೆಯೂ ಚರ್ಚಿಸಲಾಗುವುದು ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ದೇಶದಲ್ಲಿ ಕೊವಿಡ್​ 19 ಎರಡನೇ ಅಲೆ  ನಿಯಂತ್ರಣಕ್ಕೆ  ಮೀರಿದ್ದು  ಭಾನುವಾರ  4 ಲಕ್ಷಕ್ಕೂ ಅಧಿಕ ಕೊರೊನಾ ಸೋಂಕಿನ ಕೇಸ್​ ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ 24 ಗಂಟೆಯಲ್ಲಿ 4,03,738 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಬರೋಬ್ಬರಿ 4,092 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯ 2,22,96,414 ಆಗಿದ್ದು, ಅದರಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 37,36,648ಕ್ಕೆ ಏರಿಕೆಯಾಗಿದೆ. ಹಾಗೇ ಸಾವಿನ ಸಂಖ್ಯೆ 2,42,362ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇನ್ನು ಕಳೆದ 24 ಗಂಟೆಗಳಲ್ಲಿ 3,86,444 ಮಂದಿ ಸೋಂಕಿನಿಂದ ಚೇತರಿಸಿಕೊಂಡು, ಡಿಸ್​​ಚಾರ್ಜ್ ಆಗಿದ್ದಾರೆ. ಅಲ್ಲಿಗೆ ಡಿಸ್​ಚಾರ್ಜ್​ ಆದವರ ಒಟ್ಟು ಸಂಖ್ಯೆ 1,83,17,404ಕ್ಕೆ ತಲುಪಿದೆ. ಮೇ 8ರವರೆಗೆ ಒಟ್ಟು 30,22,75,471 ಜನರಿಗೆ ಕೊರೊನಾ ತಪಾಸಣೆ ಮಾಡಲಾಗಿದೆ ಎಂದು ಐಸಿಎಂಆರ್​ (ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ) ಮಾಹಿತಿ ನೀಡಿದೆ.

ಇದನ್ನೂ ಓದಿ: Coronavirus: ಗಾಳಿಯ ಮೂಲಕ ಕೊವಿಡ್-19 ಹರಡುವುದು ಹೇಗೆ? ತಜ್ಞರು ಏನಂತಾರೆ?

ಕೊರೊನಾದಿಂದ ಮಾಜಿ ರಾಜ್ಯಸಭಾ ಸದಸ್ಯ ಕೆ ಬಿ ಶಾಣಪ್ಪ ನಿಧನ

(Congress leader Mallikarjun Kharge offers 6 suggestions to PM Narendra Modi to tackle Covid 19)

Published On - 6:41 pm, Sun, 9 May 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್