ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ನಿನ್ನೆ ದೆಹಲಿಯಲ್ಲಿ ರಾಹುಲ್ ಗಾಂಧಿಯನ್ನು ಭೇಟಿಯಾಗಿದ್ದಾರೆ. ಎಐಸಿಸಿ ಉಸ್ತುವಾರಿ ಹರೀಶ್ ಚೌಧರಿ, ಅಲ್ಲಿನ ಸಾರಿಗೆ ಸಚಿವ ಅಮರಿಂದರ್ ಸಿಂಗ್ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಮತ್ತು ನಿನ್ನೆ ಕಾಂಗ್ರೆಸ್ಗೆ ಹೊಸದಾಗಿ ಸೇರ್ಪಡೆಯಾದ ಪಂಜಾಬಿ ಖ್ಯಾತ ಗಾಯಕ ಸಿಧು ಮೂಸೆವಾಲಾ ಕೂಡ ಇದ್ದರು.
ಸಿಧು ಮೂಸೆವಾಲಾ ನಿನ್ನೆ ಚಂಡಿಗಢ್ನಲ್ಲಿ, ಪಂಜಾಬ್ ಸಿಎಂ ಚರಣಜಿತ್ ಸಿಂಗ್ ಛನ್ನಿ ಮತ್ತು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅದಾದ ಬಳಿಕ ದೆಹಲಿಗೆ ತೆರಳಿ ರಾಹುಲ ಗಾಂಧಿಯವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಹಾಜರಿದ್ದ ನವಜೋತ್ ಸಿಂಗ್ ಸಿಧು, ರಾಹುಲ್ ಗಾಂಧಿಯವರೊಂದಿಗೆ ಇರುವ ಫೋಟೋ ಶೇರ್ ಮಾಡಿಕೊಂಡು ವಿತ್ ಭಾಯ್ (ಸಹೋದರನೊಂದಿಗೆ) ಎಂದು ಕ್ಯಾಪ್ಷನ್ ಕೊಟ್ಟಿದ್ದಾರೆ.
With Bhai.. pic.twitter.com/PPovGLF18W
— Navjot Singh Sidhu (@sherryontopp) December 3, 2021
ಹಿಂದಿನ ವಾರ ಕೂಡ ನವಜೋತ್ ಸಿಂಗ್ ಸಿಧು, ಪಂಜಾಬ್ ಸಿಎಂ ಚರಣಜಿತ್ ಸಿಂಘ್ ಛನ್ನಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಸುನಿ ಜಾಖರ್, ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ದರು. ಪಂಜಾಬ್ನಲ್ಲಿ ಕಾಂಗ್ರೆಸ್ ಸರ್ಕಾರವೇ ಇದೆ. ಆದರೆ ಅಲ್ಲಿ ಆಂತರಿಕ ಸಮಸ್ಯೆಗಳು ನೂರೆಂಟಿವೆ. ಇತ್ತೀಚೆಗಷ್ಟೇ ಕ್ಯಾಪ್ಟನ್ ಅಮರಿಂದರ್ ಸಿಂಗ್ರನ್ನು ಬದಲಿಸಿ ಚರಣಜಿತ್ ಸಿಂಗ್ ಛನ್ನಿಯವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದೆ.
ನವಜೋತ್ ಸಿಂಗ್ ಸಿಧು ಕಾಂಗ್ರೆಸ್ನವರೇ ಆದರೂ, 2015ರಲ್ಲಿ ಫರೀದ್ಕೋಟ್ನಲ್ಲಿ ಸಿಖ್ಖರ ಗುರುನಾನಕ ಗ್ರಂಥವನ್ನು ಅಪವಿತ್ರಗೊಳಿಸಿದ ಮತ್ತು ಅದನ್ನು ಪ್ರತಿಭಟಿಸಿದವರ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಸಂತ್ರಸ್ತರಾದವರಿಗೆ ನ್ಯಾಯ ಬೇಕೆಂದು ಪಂಜಾಭ್ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಹಾಗೇ, ಮಾದಕ ದ್ರವ್ಯ ಸಾಗಣೆ ಕುರಿತಾದ ವರದಿಯನ್ನು ಸ್ಪೆಶಲ್ ಟಾಸ್ಕ್ ಫೋರ್ಸ್ ಬಹಿರಂಗ ಗೊಳಿಸದೆ ಇದ್ದರೆ ಆಮರಣಾಂತ ಉಪವಾಸ ಮಾಡುವುದಾಗಿಯೂ ಕಾಂಗ್ರೆಸ್ಗೆ ಬೆದರಿಸಿದ್ದಾರೆ.
ಇದನ್ನೂ ಓದಿ: Karnataka Dam Water Level: ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Published On - 7:44 am, Sat, 4 December 21