ಲಾಲೂ ಪ್ರಸಾದ್ ಯಾದವ್​ ಬೆಂಬಲಕ್ಕೆ ನಿಂತ ಪ್ರಿಯಾಂಕಾ ಗಾಂಧಿ ವಾದ್ರಾ; ಬಿಜೆಪಿ ವಿರುದ್ಧ ವಾಗ್ದಾಳಿ

ಆರ್​ಜೆಡಿ ಮುಖ್ಯಸ್ಥ, ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್​ ಯಾದವ್​ ಅವರು 139.5 ಕೋಟಿ ರೂಪಾಯಿ ಡೊರಾಂಡಾ ಖಜಾನೆ ಪ್ರಕರಣದಲ್ಲೂ ದೋಷಿ ಎಂದು ಇತ್ತೀಚೆಗೆ ಸಿಬಿಐ ವಿಶೇಷ ಕೋರ್ಟ್​ ತೀರ್ಪು ನೀಡಿದೆ.

ಲಾಲೂ ಪ್ರಸಾದ್ ಯಾದವ್​ ಬೆಂಬಲಕ್ಕೆ ನಿಂತ ಪ್ರಿಯಾಂಕಾ ಗಾಂಧಿ ವಾದ್ರಾ; ಬಿಜೆಪಿ ವಿರುದ್ಧ ವಾಗ್ದಾಳಿ
ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಲಾಲೂ ಪ್ರಸಾದ್​ ಯಾದವ್​
Follow us
TV9 Web
| Updated By: Lakshmi Hegde

Updated on: Feb 20, 2022 | 3:55 PM

ಬಹುಕೋಟಿ ಮೇವು ಹಗರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಆರ್​ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ (Lalu Prasad Yadav) ಅವರ ಪರವಾಗಿ ಕಾಂಗ್ರೆಸ್​ ನಾಯಕಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಮಾತನಾಡಿದ್ದಾರೆ. ತನ್ನೆದುರು ತಲೆಬಾಗದವರಿಗೆ ಯಾವುದಾದರೂ ಒಂದು ಮಾರ್ಗದಲ್ಲಿ ಸದಾ ಕಿರುಕುಳ ನೀಡುವುದು ಬಿಜೆಪಿ ರಾಜಕಾರಣದ ಒಂದು ಬಹುಮುಖ್ಯ ಅಂಶ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

ಆರ್​ಜೆಡಿ ಮುಖ್ಯಸ್ಥ, ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್​ ಯಾದವ್​ ಅವರು 139.5 ಕೋಟಿ ರೂಪಾಯಿ ಡೊರಾಂಡಾ ಖಜಾನೆ ಪ್ರಕರಣದಲ್ಲೂ ದೋಷಿ ಎಂದು ಇತ್ತೀಚೆಗೆ ಸಿಬಿಐ ವಿಶೇಷ ಕೋರ್ಟ್​ ತೀರ್ಪು ನೀಡಿದೆ. ಡೊರಾಂಡಾ ಖಜಾನೆಯಿಂದ 139.5 ಕೋಟಿ ಹಣವನ್ನು ಅಕ್ರಮವಾಗಿ ತೆಗೆದ ಇದು, ಮೇವು ಹಗರಣದ ಐದು ಮತ್ತು ಕೊನೇ ಕೇಸ್​ ಆಗಿದೆ. ಮೇವು ಹಗರಣಕ್ಕೆ ಸಂಬಂಧಪಟ್ಟ ಉಳಿದ ನಾಲ್ಕು ಪ್ರಕರಣಗಳಲ್ಲಿ ಲಾಲೂ ಪ್ರಸಾದ್ ಯಾದವ್​ಗೆ ಜೈಲು ಶಿಕ್ಷೆ ಆಗಿದ್ದು, ಸದ್ಯ ಜಾಮೀನು ಮೇಲೆ ಆಚೆ ಬಂದಿದ್ದರು. ಆದರೆ ಇದೀಗ ಐದನೇ ಕೇಸ್​​ನಲ್ಲಿ ದೋಷಿ ಎಂದು ಸಾಬೀತಾಗಿದೆ. ಲಾಲೂ ಪ್ರಸಾದ್ ಯಾದವ್​​ರನ್ನು ಸದ್ಯ ರಿಮ್ಸ್​ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇಷ್ಟಾದ ಬಳಿಕ ಟ್ವೀಟ್ ಮಾಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಇದು ಬಿಜೆಪಿ ರಾಜಕಾರಣ. ಅವರ ಎದುರು ತಲೆಬಾಗದವರಿಗೆ ಕಿರುಕುಳ ನೀಡಲಾಗುತ್ತದೆ. ಅಂಥ ರಾಜಕೀಯದ ಭಾಗವಾಗಿಯೇ ಲಾಲೂ ಪ್ರಸಾದ್ ಯಾದವ್​ ಜಿ ಮೇಲೆ ದಾಳಿ ನಡೆಯುತ್ತಿದೆ. ಅವರಿಗೆ ನ್ಯಾಯ ಸಿಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

ಲಾಲೂ ಪ್ರಸಾದ್ ಯಾದವ್​ಗೆ ಹಿಂದಿನ ಪ್ರಕರಣಗಳಲ್ಲಿ ಜಾಮೀನು ನೀಡಿದ್ದು ಹೈಕೋರ್ಟ್ ಹೊರತು ಸಿಬಿಐ ಕೋರ್ಟ್ ಅಲ್ಲ. 73 ವರ್ಷದ ಲಾಲೂ ಆರೋಗ್ಯ ಕೂಡ ಸರಿಯಿಲ್ಲ. ನಾಳೆ ಫೆ.21ರಂದು ಲಾಲೂ ಪ್ರಸಾದ್ ಯಾದವ್​ಗೆ ಶಿಕ್ಷೆಯ ಪ್ರಮಾಣವನ್ನು ಸಿಬಿಐ ಕೋರ್ಟ್​ ವಿಧಿಸಲಿದೆ.

ಇದನ್ನೂ ಓದಿ: ಡ್ರಗ್ಸ್ ಪಿಡುಗಿನಿಂದ ಮಕ್ಕಳನ್ನು ಕಾಪಾಡುವಂತೆ ಆಗ್ರಹಿಸಿ ಮಹಿಳೆಯರ ಪ್ರತಿಭಟನೆ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ