ಆರ್​​ಜೆಡಿ ನಾಯಕರನ್ನು ಭೇಟಿ ಮಾಡಿ ಲಾಲು ಪ್ರಸಾದ್ ಯಾದವ್​​ ತಯಾರಿಸಿದ ಮಟನ್ ಊಟ ಸವಿದ ರಾಹುಲ್ ಗಾಂಧಿ

ಲಾಲು ಯಾದವ್ ಅವರು ಬಿಹಾರದಿಂದ ದೇಸಿ ಮಟನ್ ಮತ್ತು ಮಸಾಲೆಗಳನ್ನು ತರಲು ವ್ಯವಸ್ಥೆ ಮಾಡಿದ್ದರು. ಬಿಹಾರದ ವಿಶೇಷ ಶೈಲಿಯಲ್ಲಿ ಮಟನ್ ಅನ್ನು ಹೇಗೆ ಬೇಯಿಸುತ್ತಾರೆ ಎಂಬುದನ್ನು ಅವರು ಕಾಂಗ್ರೆಸ್ ನಾಯಕರಿಗೆ ತೋರಿಸಿದರು ಎಂದು ಮೂಲಗಳು ತಿಳಿಸಿವೆ.

ಆರ್​​ಜೆಡಿ ನಾಯಕರನ್ನು ಭೇಟಿ ಮಾಡಿ ಲಾಲು ಪ್ರಸಾದ್ ಯಾದವ್​​ ತಯಾರಿಸಿದ ಮಟನ್ ಊಟ ಸವಿದ ರಾಹುಲ್ ಗಾಂಧಿ
ಲಾಲು ಪ್ರಸಾದ್ ಯಾದವ್- ರಾಹುಲ್ ಗಾಂಧಿ
Follow us
ರಶ್ಮಿ ಕಲ್ಲಕಟ್ಟ
|

Updated on: Aug 05, 2023 | 3:19 PM

ದೆಹಲಿ ಆಗಸ್ಟ್ 05: “ಮೋದಿ ಉಪನಾಮ” ಮಾನನಷ್ಟ (Modi Surname Case) ಪ್ರಕರಣದಲ್ಲಿ ಶಿಕ್ಷೆಗೆ ಸುಪ್ರೀಂಕೋರ್ಟ್ (Supreme Court) ತಡೆಯಾಜ್ಞೆ ನೀಡಿದ ಕೆಲವೇ ಗಂಟೆಗಳ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಭೋಜನಕೂಟದಲ್ಲಿ ಭೇಟಿಯಾಗಿದ್ದಾರೆ. ರಾಷ್ಟ್ರೀಯ ಜನತಾ ದಳ (RJD) ಮುಖ್ಯಸ್ಥರು ರಾಹುಲ್ ಗಾಂಧಿಗೆ ಪುಷ್ಪಗುಚ್ಛವನ್ನು ನೀಡಿ ಸ್ವಾಗತಿಸಿದ್ದು, ನಂತರ ಮಟನ್ ಊಟ ಸವಿದಿದ್ದಾರೆ. ಲಾಲು ಯಾದವ್ ಅವರೇ ಮಟನ್ ಊಟ ಸಿದ್ಧಪಡಿಸಿದ್ದರು ಎಂಬುದು ವಿಶೇಷ. ಈ ಹಿಂದೆ ಚಾಟ್ ಶೋವೊಂದರಲ್ಲಿ ಲಾಲು ಅವರ ಅಡುಗೆ ಬಗ್ಗೆ ರಾಹುಲ್ ಹೊಗಳಿದ್ದರು.

ವಿಪಕ್ಷಗಳ ಒಕ್ಕೂಟ I.N.D.I.A ರೂಪುಗೊಂಡ ನಂತರ ಆರ್‌ಜೆಡಿ ಸಂಸದೆ ಮಿಸಾ ಭಾರ್ತಿ ಅವರ ದೆಹಲಿ ನಿವಾಸದಲ್ಲಿ ನಡೆದ ಈ ಸಭೆಯು ಮಹತ್ವದ್ದಾಗಿದೆ. ಈ ಸಭೆಯಲ್ಲಿ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಕೂಡಾ ಪಾಲ್ಗೊಂಡಿದ್ದಾರೆ.

ರಾಹುಲ್ ಗಾಂಧಿ ಮತ್ತು ಲಾಲು ಯಾದವ್ ರಾಜಕೀಯದ ಬಗ್ಗೆ ಹೆಚ್ಚು ಚರ್ಚೆ ನಡೆಸಿದ್ದರೂ, ಇಬ್ಬರೂ ಸಣ್ಣ-ಪುಟ್ಟ ಮಾತುಕತೆಯಲ್ಲಿ ಸ್ವಲ್ಪ ಸಮಯ ಕಳೆದಿದ್ದು ತಮ್ಮ ಊಟವನ್ನು ಆನಂದಿಸಿದರು ಎಂದು ಈ ಬಗ್ಗೆ ತಿಳಿದಿರುವ ಜನರು ಹೇಳಿದ್ದಾರೆ ಎಂದು ಎನ್​​ಡಿಟಿವಿ ವರದಿ ಮಾಡಿದೆ.

ಲಾಲು ಯಾದವ್ ಅವರು ಬಿಹಾರದಿಂದ ದೇಸಿ ಮಟನ್ ಮತ್ತು ಮಸಾಲೆಗಳನ್ನು ತರಲು ವ್ಯವಸ್ಥೆ ಮಾಡಿದ್ದರು. ಬಿಹಾರದ ವಿಶೇಷ ಶೈಲಿಯಲ್ಲಿ ಮಟನ್ ಅನ್ನು ಹೇಗೆ ಬೇಯಿಸುತ್ತಾರೆ ಎಂಬುದನ್ನು ಅವರು ಕಾಂಗ್ರೆಸ್ ನಾಯಕರಿಗೆ ತೋರಿಸಿದರು ಎಂದು ಮೂಲಗಳು ತಿಳಿಸಿವೆ.

ಬಿಹಾರದ ಚಂಪಾರಣ್ ಮಟನ್ ತನ್ನ ವಿಶಿಷ್ಟವಾದ ಅಡುಗೆ ಶೈಲಿ ಮತ್ತು ರುಚಿಗೆ ಹೆಸರುವಾಸಿಯಾಗಿದೆ. ರಾಹುಲ್ ಗಾಂಧಿ ಅವರು ಆರ್‌ಜೆಡಿ ಮುಖ್ಯಸ್ಥರ ಆರೋಗ್ಯದ ಬಗ್ಗೆಯೂ ವಿಚಾರಿಸಿದ್ದಾರೆ.

ಇದನ್ನೂ ಓದಿ: ಶಿಕ್ಷೆಗೆ ಸುಪ್ರೀಂ ತಡೆಯಾಜ್ಞೆ: ಸಂಸತ್​​ನ ಮುಂಗಾರು ಅಧಿವೇಶನದಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳಲು ಸಾಧ್ಯವಾಗಬಹುದೇ?

ರಾಹುಲ್ ಗಾಂಧಿಯವರ ಶಿಕ್ಷೆಗೆ ಸುಪ್ರೀಂ ತಡೆಯಾಜ್ಞೆ ನೀಡಿರುವುದರಿಂದ ಅವರಿಗೆ ಸಂಸತ್ತಿಗೆ ಮರಳಬಹುದು. ಲೋಕಸಭೆಯ ಸೆಕ್ರೆಟರಿಯೇಟ್ ಅವರ ಸದಸ್ಯತ್ವವನ್ನು ಮರುಸ್ಥಾಪಿಸಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ? ಮಂಗಳವಾರದಿಂದ ಪ್ರಾರಂಭವಾಗಲಿರುವ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯಲ್ಲಿ ಅವರು ಭಾಗವಹಿಸಲು ಸಾಧ್ಯವಾಗುತ್ತದೆಯೇ ಎಂಬುದು ಈಗ ದೊಡ್ಡ ಪ್ರಶ್ನೆಗಳಾಗಿವೆ.

ಕಾನೂನಾತ್ಮಕವಾಗಿ, ಕಾಂಗ್ರೆಸ್ ನಾಯಕ 2019 ರ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಸೂರತ್ ವಿಚಾರಣಾ ನ್ಯಾಯಾಲಯದ ಮಾರ್ಚ್ ಆದೇಶವನ್ನು ಪ್ರಶ್ನಿಸಿದ್ದಾರೆ, ಇದು ಅವರ ಅನರ್ಹತೆಗೆ ಕಾರಣವಾಯಿತು. ಸೂರತ್‌ನ ಸೆಷನ್ಸ್ ನ್ಯಾಯಾಲಯವು ಆಗಸ್ಟ್ 21 ರಂದು ಅವರನ್ನು ಅಪರಾಧಿ ಮತ್ತು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ತೀರ್ಪಿನ ವಿರುದ್ಧದ ಮೇಲ್ಮನವಿಯನ್ನು ವಿಚಾರಣೆ ನಡೆಸಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ