ಮಾನಹಾನಿ ಪ್ರಕರಣ: ಹೇಳಿಕೆ ದಾಖಲಿಸಲು ಗುಜರಾತಿನ ನ್ಯಾಯಾಲಯಕ್ಕೆ  ಹಾಜರಾದ ರಾಹುಲ್ ಗಾಂಧಿ

Rahul Gandhi: ರಾಹುಲ್ ಗಾಂಧಿ ಅವರು ಏಪ್ರಿಲ್ 13, 2019 ರಂದು ಕರ್ನಾಟಕದ ಕೋಲಾರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ  ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ... ಇವರೆಲ್ಲರ ಸರ್​ನೇಮ್ ಮೋದಿ. ಎಲ್ಲಾ ಕಳ್ಳರಿಗೂ ಮೋದಿ ಸರ್​ನೇಮ್ ಹೇಗೆ ಬಂತು  ಎಂದು  ಹೇಳಿದ್ದರು.

ಮಾನಹಾನಿ ಪ್ರಕರಣ: ಹೇಳಿಕೆ ದಾಖಲಿಸಲು ಗುಜರಾತಿನ ನ್ಯಾಯಾಲಯಕ್ಕೆ  ಹಾಜರಾದ ರಾಹುಲ್ ಗಾಂಧಿ
ರಾಹುಲ್ ಗಾಂಧಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 24, 2021 | 12:41 PM

ದೆಹಲಿ: ಮೋದಿ ‘ಸರ್​ನೇಮ್’  ಕುರಿತು ಬಿಜೆಪಿ ಶಾಸಕರೊಬ್ಬರು ಸಲ್ಲಿಸಿದ ಕ್ರಿಮಿನಲ್ ಮಾನಹಾನಿ ಮೊಕದ್ದಮೆಗೆ ಸಂಬಂಧಿಸಿಂತೆ ಹೇಳಿಕೆ ದಾಖಲಿಸಲು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಗುಜರಾತ್‌ನ ಸೂರತ್‌ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.ಸೂರತ್‌ನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಎ.ಎನ್.ಡೇವ್ ಅವರು ರಾಹುಲ್ ಗಾಂಧಿ ಅವರಿಗೆ ಒಂದು ವಾರದ ಹಿಂದೆ ಸೂರತ್‌ನ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಸಲ್ಲಿಸಿದ್ದ ಪ್ರಕರಣದಲ್ಲಿ ಅಂತಿಮ ಹೇಳಿಕೆ ದಾಖಲಿಸುವಂತೆ ನಿರ್ದೇಶನ ನೀಡಿದ್ದರು.

ನ್ಯಾಯಾಲಯಕ್ಕೆ ಹಾಜರಾಗುವ ಮುಂಚೆ ರಾಹುಲ್ ಗಾಂಧಿ “ಅಸ್ತಿತ್ವದ ಸಂಪೂರ್ಣ ರಹಸ್ಯವೆಂದರೆ ಭಯ ಇಲ್ಲದೇ ಇರುವುದು ಎಂದು ಟ್ವೀಟ್  ಮಾಡಿದ್ದಾರೆ.

2019 ರ ಏಪ್ರಿಲ್‌ನಲ್ಲಿ ಪೂರ್ಣೇಶ್ ಮೋದಿಯವರ ದೂರು ಸಲ್ಲಿಸಿದ್ದು ಇದರ ಪ್ರಕಾರ ಕಾಂಗ್ರೆಸ್ ಸಂಸದ ರಾಹುಲ್ ಚುನಾವಣೆಗೆ ಮುನ್ನ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ  “ಇಡೀ ಮೋದಿ ಸಮುದಾಯವನ್ನು ದೂಷಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ಅವರು ಏಪ್ರಿಲ್ 13, 2019 ರಂದು ಕರ್ನಾಟಕದ ಕೋಲಾರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ  ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ … ಇವರೆಲ್ಲರ ಸರ್​ನೇಮ್ ಮೋದಿ. ಎಲ್ಲಾ ಕಳ್ಳರಿಗೂ ಮೋದಿ ಸರ್​ನೇಮ್ ಹೇಗೆ ಬಂತು  ಎಂದು  ಹೇಳಿದ್ದರು.

ಆ ಸಮಯದಲ್ಲಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ಸೋಲಿನ ನಂತರ ಅವರು ಮೇ ತಿಂಗಳಲ್ಲಿ ಅಧ್ಯಕ್ಷ  ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು

ನೀರವ್ ಮೋದಿ ಮತ್ತು ಲಲಿತ್ ಮೋದಿ ಪರಾರಿಯಾಗಿದ್ದು, ಸಾಲ ವಂಚನೆ ಮತ್ತು ಆರ್ಥಿಕ ಅಕ್ರಮಗಳ ಬಗ್ಗೆ ತನಿಖೆ ನಡೆಸುತ್ತಿರುವಾಗ ಇವರಿಬ್ಬರು ಭಾರತದಿಂದ ಪರಾರಿಯಾಗಿದ್ದಾರೆ.

ರಾಹುಲ್ ಗಾಂಧಿ 2019 ಅಕ್ಟೋಬರ್ ತಿಂಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗಿದ್ದು  “ತಪ್ಪಿತಸ್ಥ ಅಲ್ಲ ” ಎಂದು ಹೇಳಿದ್ದರು. ಕಾಂಗ್ರೆಸ್ ಇದನ್ನು “ಸುಳ್ಳು ಮಾನಹಾನಿ ಪ್ರಕರಣ” ಎಂದು ಕರೆದಿದೆ.

ಇದನ್ನೂ ಓದಿ:  ರಾಜ್ಯ ಕಾಂಗ್ರೆಸ್​ನಲ್ಲಿ ತಾರಕಕ್ಕೇರಿದ ಸಿಎಂ ಗಲಾಟೆ; ಖಡಕ್ ಸೂಚನೆ ನೀಡಲು ರಾಹುಲ್​ಗೆ ಹಿರಿಯ ನಾಯಕರ ಒತ್ತಾಯ

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು