ಮುಸ್ಲಿಂ ಲೀಗ್ ಅನ್ನು ಜಾತ್ಯಾತೀತ ಪಕ್ಷ ಎಂದ ರಾಹುಲ್ ಗಾಂಧಿ; ಇದು ಅತ್ಯಂತ ದುರದೃಷ್ಟಕರ ಎಂದು ಬಿಜೆಪಿ ಟೀಕೆ

ರಿಜಿಜು ಅವರ ಮಾತುಗಳನ್ನು ಬೆಂಬಲಿಸಿದ ಬಿಜೆಪಿಯ ವಕ್ತಾರ ಮತ್ತು ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ, ವಯನಾಡ್‌ನಲ್ಲಿ ಸ್ವೀಕಾರಾರ್ಹವಾಗಿ ಉಳಿಯವುದಕ್ಕಾಗಿರುವ ಒತ್ತಡವೇ ಕಾಂಗ್ರೆಸ್ ನಾಯಕ ಮುಸ್ಲಿಂ ಲೀಗ್ ಅನ್ನು "ಜಾತ್ಯತೀತ ಪಕ್ಷ" ಎಂದು ಕರೆಯುವಂತೆ ಮಾಡಿದೆ ಎಂದು ಹೇಳಿದ್ದಾರೆ.

ಮುಸ್ಲಿಂ ಲೀಗ್ ಅನ್ನು ಜಾತ್ಯಾತೀತ ಪಕ್ಷ ಎಂದ ರಾಹುಲ್ ಗಾಂಧಿ; ಇದು ಅತ್ಯಂತ ದುರದೃಷ್ಟಕರ ಎಂದು ಬಿಜೆಪಿ ಟೀಕೆ
ರಾಹುಲ್ ಗಾಂಧಿ
Follow us
|

Updated on:Jun 02, 2023 | 6:15 PM

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಗುರುವಾರ ‘ಇಂಡಿಯನ್ ಯೂನಿಯನ್ ಆಫ್ ಮುಸ್ಲಿಂ ಲೀಗ್’ (IUML) ಅನ್ನು “ಜಾತ್ಯತೀತ” ಪಕ್ಷ ಎಂದು ಹೇಳಿದ್ದಾರೆ. ವಾಷಿಂಗ್ಟನ್‌ನ ನ್ಯಾಷನಲ್ ಪ್ರೆಸ್ ಕ್ಲಬ್‌ನಲ್ಲಿ ಪತ್ರಕರ್ತರೊಂದಿಗಿನ ಸಂವಾದದಲ್ಲಿ ರಾಹುಲ್ ಗಾಂಧಿಯವರಲ್ಲಿ, ಕೇರಳದ ‘ಇಂಡಿಯನ್ ಯೂನಿಯನ್ ಆಫ್ ಮುಸ್ಲಿಂ ಲೀಗ್’ ನೊಂದಿಗೆ ಕಾಂಗ್ರೆಸ್ ಮೈತ್ರಿ ಬಗ್ಗೆ ಕೇಳಲಾಗಿತ್ತು. ಇದಕ್ಕೆ ಉತ್ತರಿಸಿದ ರಾಹುಲ್ ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಪಕ್ಷ (secular) ಎಂದು ಹೇಳಿದ್ದಾರೆ. ಈ ಹೇಳಿಕೆ ಟೀಕೆಗೆ ಗುರಿಯಾಗಿದ್ದು, ಬಿಜೆಪಿ ರಾಹುಲ್​​ನ್ನು ತರಾಟೆಗೆ ತೆಗೆದುಕೊಂಡಿದೆ.

ರಾಹುಲ್ ಗಾಂಧಿ ಹೇಳಿಕೆಯನ್ನು ಅತ್ಯಂತ ದುರದೃಷ್ಟಕರ ಎಂದು ಹೇಳಿದ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಕಿರಣ್ ರಿಜಿಜು ಜಿನ್ನಾರ ಮುಸ್ಲಿಂ ಲೀಗ್ ಜಾತ್ಯತೀತ ಪಕ್ಷವೇ? ಧಾರ್ಮಿಕ ನೆಲೆಯಲ್ಲಿ ಭಾರತದ ವಿಭಜನೆಗೆ ಕಾರಣವಾದ ಪಕ್ಷವು ಜಾತ್ಯತೀತ ಪಕ್ಷವಾಗಿದ್ದು, ಮುಸ್ಲಿಂ ಲೀಗ್ ಅನ್ನು ಬೆಂಬಲಿಸುವ ವ್ಯಕ್ತಿಯನ್ನು ಇನ್ನೂ ಕೆಲವು ಜನರು ಸೆಕ್ಯುಲರ್ ಎಂದು ಪರಿಗಣಿಸುತ್ತಿರುವುದು ಅತ್ಯಂತ ದುರದೃಷ್ಟಕರ ಎಂದಿದ್ದಾರೆ.

ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್, ಇದು ತುಂಬಾ ದುಃಖಕರ. ವಿದೇಶಿ ನೆಲದಲ್ಲಿ ರಾಷ್ಟ್ರವನ್ನು ಅವಮಾನಿಸುವುದನ್ನು ಭಾರತದ ಜನರು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ರಿಜಿಜು ಅವರ ಮಾತುಗಳನ್ನು ಬೆಂಬಲಿಸಿದ ಬಿಜೆಪಿಯ ವಕ್ತಾರ ಮತ್ತು ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ, ವಯನಾಡ್‌ನಲ್ಲಿ ಸ್ವೀಕಾರಾರ್ಹವಾಗಿ ಉಳಿಯವುದಕ್ಕಾಗಿರುವ ಒತ್ತಡವೇ ಕಾಂಗ್ರೆಸ್ ನಾಯಕ ಮುಸ್ಲಿಂ ಲೀಗ್ ಅನ್ನು “ಜಾತ್ಯತೀತ ಪಕ್ಷ” ಎಂದು ಕರೆಯುವಂತೆ ಮಾಡಿದೆ ಎಂದು ಹೇಳಿದ್ದಾರೆ.

ಆದರೆ ಜಿನ್ನಾ ಅವರ ಮುಸ್ಲಿಂ ಲೀಗ್ ಮತ್ತು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಎರಡು ವಿಭಿನ್ನ ಪಕ್ಷಗಳು ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಗಮನಸೆಳೆದಿದ್ದಾರೆ. ಮಾಳವಿಯಾ ಅವರ ಟ್ವೀಟ್ ಅನ್ನು ಉಲ್ಲೇಖಿಸಿದ ಖೇರಾ, ನೀವು ಅನಕ್ಷರಸ್ಥರೇ? ಕೇರಳ ಮುಸ್ಲಿಂ ಲೀಗ್ ಮತ್ತು ಜಿನ್ನಾ ಮುಸ್ಲಿಂ ಲೀಗ್ ನಡುವಿನ ವ್ಯತ್ಯಾಸ ನಿಮಗೆ ತಿಳಿದಿದೆಯೇ? ನಿಮ್ಮ ಪೂರ್ವಜರು ಮೈತ್ರಿ ಮಾಡಿಕೊಂಡದ್ದು ಜಿನ್ನಾರ ಮುಸ್ಲಿಂ ಲೀಗ್. ಇನ್ನೊಂದು ಮುಸ್ಲಿಂ ಲೀಗ್ ಜೊತೆಗೆ ಬಿಜೆಪಿ ಮೈತ್ರಿ ಮಾಡಿಕೊಂಡಿತ್ತು ಎಂದಿದ್ದಾರೆ.

ಇದನ್ನೂ ಓದಿ2024ರ ಚುನಾವಣೆಯಲ್ಲಿ ವಿಪಕ್ಷಗಳು ಬಿಜೆಪಿಯನ್ನು ಸೋಲಿಸಲಿವೆ:ಅಮೆರಿಕದಲ್ಲಿ ರಾಹುಲ್ ಗಾಂಧಿ

ಖೇರಾ ಅವರಂತೆಯೇ, ಹಲವಾರು ಕಾಂಗ್ರೆಸ್ ಬೆಂಬಲಿಗರು 2012 ರಲ್ಲಿ ನಾಗ್ಪುರ ಮುನ್ಸಿಪಲ್ ಕಾರ್ಪೊರೇಶನ್‌ನಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಬಿಜೆಪಿ ಐಯುಎಂಎಲ್ ಜತೆ ಮೈತ್ರಿ ಮಾಡಿದರ ಬಗ್ಗೆ 10 ವರ್ಷಗಳ ಹಿಂದಿನ ಸುದ್ದಿ ವರದಿಗಳನ್ನು ಉಲ್ಲೇಖಿಸಿದ್ದಾರೆ. ಮಾಳವಿಯಾ ಅವರನ್ನು ‘ನಕಲಿ ಸುದ್ದಿ ವ್ಯಾಪಾರಿ’ ಎಂದು ಕರೆದ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ಮತ್ತು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳ ಅಧ್ಯಕ್ಷೆ ಸುಪ್ರಿಯಾ ಶ್ರೀನಾಥೆ, ರಾಹುಲ್ ಗಾಂಧಿಯವರ ಯುಎಸ್ ಪ್ರವಾಸದ ಬಗ್ಗೆ ಟ್ರ್ಯಾಕ್ ಮಾಡಲು ನೀವು ಮತ್ತಷ್ಟು ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯಬೇಕಾಗುತ್ತದೆ ಎಂದಿದ್ದಾರೆ.

ಹೇ ನಕಲಿ ಸುದ್ದಿ ವ್ಯಾಪಾರಿ, ನಿದ್ದೆ ಕೆಡಿಸಿರುವುದನ್ನು ನೋಡಲು ಖುಷಿಯಾಗಿದೆ. ಆದರೆ ರಾಹುಲ್ ಗಾಂಧಿಯವರ ಅಮೆರಿಕಾ ಪ್ರವಾಸವನ್ನು ಟ್ರ್ಯಾಕ್ ಮಾಡಲು ಇನ್ನೊಂದಷ್ಟು ದಿನ ನಿದ್ದೆ ಕೆಡಿಸಿಕೊಳ್ಳಿ. ಎಂಥಾ ದುಃಖದ ಬದುಕು ಎಂದಿದ್ದಾರೆ.

ಭಾರತೀಯ ಪ್ರಜಾಪ್ರಭುತ್ವವು ಜಾಗತಿಕ ಒಳಿತಿಗಾಗಿದೆ: ರಾಹುಲ್ ಗಾಂಧಿ

ಭಾರತೀಯ ಪ್ರಜಾಪ್ರಭುತ್ವವು “ಜಾಗತಿಕ ಒಳಿತಿಗಾಗಿದೆ” ಎಂದು ಪ್ರತಿಪಾದಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅದರ “ಕುಸಿತವು” ಪ್ರಪಂಚದ ಮೇಲೆ ಪರಿಣಾಮ ಬೀರುತ್ತದೆ ಎಂದಿದ್ದಾರೆ. ಇದು ನಮ್ಮ ಕೆಲಸ, ಇದು ನಮ್ಮ ವ್ಯವಹಾರ, ಮತ್ತು ಭಾರತದಲ್ಲಿ ಪ್ರಜಾಪ್ರಭುತ್ವಕ್ಕಾಗಿ ಹೋರಾಡುವುದು ನಮ್ಮ ಕೆಲಸ. ಇದನ್ನು  ನಾವು ಅರ್ಥಮಾಡಿಕೊಂಡಿದ್ದೇವೆ, ನಾವು ಸ್ವೀಕರಿಸುತ್ತೇವೆ ಮತ್ತು ನಾವು ಮಾಡುತ್ತೇವೆ ಎಂದು ಹೇಳಿದ್ದಾರೆ. ಆದರೆ ನೆನಪಿಡಬೇಕಾದ ವಿಷಯವೆಂದರೆ ಭಾರತೀಯ ಪ್ರಜಾಪ್ರಭುತ್ವವು ಜಾಗತಿಕ ಒಳಿತಿಗಾಗಿ ಇರುವುದು. ಏಕೆಂದರೆ ಭಾರತವು ಸಾಕಷ್ಟು ದೊಡ್ಡದಾಗಿದೆ, ಭಾರತದಲ್ಲಿ ಪ್ರಜಾಪ್ರಭುತ್ವದ ಕುಸಿತವು ಪರಿಣಾಮ ಬೀರುತ್ತದೆ. ಪ್ರಪಂಚದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ನೀವು ಭಾರತೀಯ ಪ್ರಜಾಪ್ರಭುತ್ವವನ್ನು ಎಷ್ಟು ಗೌರವಿಸಬೇಕು ಎಂದು ಯೋಚಿಸಬೇಕು. ಆದರೆ ನಮಗೆ, ಇದು ಆಂತರಿಕ ವಿಷಯವಾಗಿದೆ. ಇದು ನಾವು ಬದ್ಧವಾಗಿರುವ ಹೋರಾಟವಾಗಿದೆ, ನಾವು ಗೆಲ್ಲಲಿದ್ದೇವೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:39 pm, Fri, 2 June 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ