Rahul Gandhi: ಸೋನಿಯಾ ಗಾಂಧಿ ಇಡಿ ವಿಚಾರಣೆ ಖಂಡಿಸಿ ಪ್ರತಿಭಟನೆ; ದೆಹಲಿಯಲ್ಲಿ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ

ಕಾಂಗ್ರೆಸ್ ಕಾರ್ಯಕರ್ತರ ಜತೆ ಇಡಿ ಕಚೇರಿಯ ಎದುರು ರಸ್ತೆ ಮೇಲೆ ಕುಳಿತು ರಾಹುಲ್ ಗಾಂಧಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.

Rahul Gandhi: ಸೋನಿಯಾ ಗಾಂಧಿ ಇಡಿ ವಿಚಾರಣೆ ಖಂಡಿಸಿ ಪ್ರತಿಭಟನೆ; ದೆಹಲಿಯಲ್ಲಿ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ದೆಹಲಿಯಲ್ಲಿ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
Image Credit source: Hindustan Times
TV9kannada Web Team

| Edited By: Sushma Chakre

Jul 26, 2022 | 1:06 PM

ನವದೆಹಲಿ: ನ್ಯಾಷನಲ್ ಹೆರಾಲ್ಡ್​​ ಪ್ರಕರಣದಲ್ಲಿ (National Herald Case) ಅಕ್ರಮ ಹಣ ವರ್ಗಾವಣೆ ಕೇಸ್​ಗೆ ಸಂಬಂಧಪಟ್ಟಂತೆ ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) 2ನೇ ಬಾರಿ ಇಡಿ ವಿಚಾರಣೆಗೆ ಹಾಜರಾಗಿದ್ದಾರೆ. ಇಡಿ ವಿಚಾರಣೆ ನೆಪದಲ್ಲಿ ಕೇಂದ್ರ ಸರ್ಕಾರದಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ನವದೆಹಲಿಯಲ್ಲಿ ಪ್ರತಿಭಟನಾನಿರತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಜತೆ  ರಸ್ತೆ ಮೇಲೆ ಕುಳಿತು ರಾಹುಲ್ ಗಾಂಧಿ (Rahul Gandhi)  ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.

ದೆಹಲಿಯಲ್ಲಿ ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು ಅವರನ್ನು ಪೊಲೀಸ್ ವಾಹನದಲ್ಲಿ ಕರೆದೊಯ್ದಿದ್ದಾರೆ. ರಾಹುಲ್ ಗಾಂಧಿ ಅವರ ಜೊತೆ ದೀಪೇಂದರ್ ಹೂಡಾ, ಇತರೆ ಕಾಂಗ್ರೆಸ್ ಸಂಸದರು ಮತ್ತು ಕಾರ್ಯಕರ್ತರನ್ನು ಕೂಡ ವಶಕ್ಕೆ ಪಡೆಯಲಾಗಿದೆ.

ನ್ಯಾಷನಲ್ ಹೆರಾಲ್ಡ್ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನ ವಿಚಾರಣೆಗಾಗಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಗೆ ತೆರಳಿದ್ದಾರೆ. ಈ ವೇಳೆ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಕೂಡ ತಾಯಿಯ ಜೊತೆ ತೆರಳಿದ್ದರು. ಕಾಂಗ್ರೆಸ್ ಕಾರ್ಯಕರ್ತರ ಜೊತೆ ರಾಹುಲ್ ಗಾಂಧಿ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: National Herald Case: ಏನಿದು ನ್ಯಾಷನಲ್ ಹೆರಾಲ್ಡ್​ ಕೇಸ್?; ಸೋನಿಯಾ ಗಾಂಧಿಗೂ ಇದಕ್ಕೂ ಏನು ಸಂಬಂಧ?

ನಮಗೆ ಇಲ್ಲಿ ಕುಳಿತುಕೊಳ್ಳಲೂ ಬಿಡುತ್ತಿಲ್ಲ. ಮಾತನಾಡಲು ಬಿಡುತ್ತಿಲ್ಲ. ಭಾರತದ ಸ್ಥಿತಿ ಹೀಗೆ ಆಗಿದೆ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸಂಸದರು ಸಂಸತ್ತಿನ ಆವರಣದಲ್ಲಿರುವ ಗಾಂಧಿ ಪ್ರತಿಮೆಯಿಂದ ವಿಜಯ್ ಚೌಕ್ ಕಡೆಗೆ ಮೆರವಣಿಗೆ ನಡೆಸಿದರು. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಂಜೀತ್ ರಂಜನ್, ಕೆಸಿ ವೇಣುಗೋಪಾಲ್, ಮಾಣಿಕ್ಕಂ ಟ್ಯಾಗೋರ್, ಇಮ್ರಾನ್ ಪ್ರತಾಪಗರ್ಹಿ ಮತ್ತು ಕೆ. ಸುರೇಶ್ ಸೇರಿದಂತೆ ಹಲವರನ್ನು ವಶಕ್ಕೆ ಪಡೆಯಲಾಗಿದೆ.

75 ವರ್ಷದ ಸೋನಿಯಾ ಗಾಂಧಿ ಅವರನ್ನು ಜುಲೈ 21ರಂದು ಮೊದಲ ದಿನ ಇಡಿ ವಿಚಾರಣೆಗೆ ಒಳಪಡಿಸಲಾಗಿತ್ತು. ಈ ಸಂದರ್ಭದಲ್ಲಿ 2 ಗಂಟೆಗಳ ಕಾಲ ಪ್ರಶ್ನಿಸಲಾಯಿತು. ಕಳೆದ ವರ್ಷದ ಕೊನೆಯಲ್ಲಿ ಇಡಿ ಮನಿ ಲಾಂಡರಿಂಗ್ ಕಾಯ್ದೆಯ ಕ್ರಿಮಿನಲ್ ನಿಬಂಧನೆಗಳ ಅಡಿಯಲ್ಲಿ ಹೊಸ ಪ್ರಕರಣವನ್ನು ದಾಖಲಿಸಿದ ನಂತರ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯ ವಿಚಾರಣೆಯ ಪ್ರಕ್ರಿಯೆ ಪ್ರಾರಂಭಿಸಲಾಯಿತು.

ಇದನ್ನೂ ಓದಿ: National Herald Case: ಅಕ್ರಮ ಹಣ ವರ್ಗಾವಣೆ ಪ್ರಕರಣ; ಇಂದು ಇಡಿ ಕಚೇರಿಯಲ್ಲಿ ಸೋನಿಯಾ ಗಾಂಧಿ 2ನೇ ಸುತ್ತಿನ ವಿಚಾರಣೆ

ಸೋನಿಯಾ ಗಾಂಧಿ ಅವರ ಇಡಿ ವಿಚಾರಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಹಿರಿಯ ನಾಯಕರು ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದರು. ಮಹಾತ್ಮಾ ಗಾಂಧಿಯವರ ಸ್ಮಾರಕವಾದ ರಾಜ್ ಘಾಟ್‌ನಲ್ಲಿ ‘ಸತ್ಯಾಗ್ರಹ’ ನಡೆಸಲು ಅನುಮತಿ ನೀಡಬೇಕೆಂಬ ಅವರ ಬೇಡಿಕೆಯನ್ನು ದೆಹಲಿ ಪೊಲೀಸರು ತಿರಸ್ಕರಿಸಿದ್ದರು. ಆ ಪ್ರದೇಶದಲ್ಲಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆಯನ್ನೂ ಜಾರಿಗೊಳಿಸಲಾಗಿತ್ತು.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada