AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಸಂಸದ ಸ್ಥಾನದಿಂದ ಅನರ್ಹರಾದ ರಾಹುಲ್ ಗಾಂಧಿ, ಮುಂದೇನು?

ರಾಹುಲ್ ಗಾಂಧಿ ಅವರನ್ನು ಮಾರ್ಚ್ 23, 2023 ರಿಂದ ಆರ್ಟಿಕಲ್ 102(1)(ಇ) ನ ನಿಬಂಧನೆಗಳ ಪ್ರಕಾರ ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಭಾರತದ ಸಂವಿಧಾನವು 1951 ರ ಜನಪ್ರತಿನಿಧಿ ಕಾಯಿದೆಯ ಸೆಕ್ಷನ್ 8 ರೊಂದಿಗೆ ಹೇಳಿರುವಂತೆ ಈ ಕ್ರಮವನ್ನು ಜಾರಿಗೊಳಿಸಲಾಗಿದೆ ಎಂದು ಲೋಕಸಭೆಯ ಕಾರ್ಯದರ್ಶಿ ಇಂದು ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ.

Rahul Gandhi: ಸಂಸದ ಸ್ಥಾನದಿಂದ ಅನರ್ಹರಾದ ರಾಹುಲ್ ಗಾಂಧಿ, ಮುಂದೇನು?
ರಾಹುಲ್ ಗಾಂಧಿ
Follow us
ರಶ್ಮಿ ಕಲ್ಲಕಟ್ಟ
|

Updated on:Mar 24, 2023 | 3:21 PM

ದೆಹಲಿ: ಗುಜರಾತ್‌ನ ನ್ಯಾಯಾಲಯವು 2019ರ ಮಾನನಷ್ಟ ಮೊಕದ್ದಮೆಯಲ್ಲಿ (2019 defamation case) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ (Rahul Gandhi) ಶಿಕ್ಷೆ ವಿಧಿಸಿರುವುದರಿಂದ ಅವರು ಇಂದು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹರಾಗಿದ್ದಾರೆ. ಶಿಕ್ಷೆ ವಿಧಿಸಿದ ನಂತರ ರಾಹುಲ್ ಗಾಂಧಿ ಅವರಿಗೆ ಜಾಮೀನು ನೀಡಲಾಗಿದ್ದು ಮೇಲ್ಮನವಿ ಸಲ್ಲಿಸಲು ಅವರ ಶಿಕ್ಷೆಯನ್ನು 30 ದಿನಗಳವರೆಗೆ ಅಮಾನತುಗೊಳಿಸಲಾಗಿತ್ತು. 1951ರ ಜನಪ್ರತಿನಿಧಿ ಕಾಯಿದೆಯ ಸೆಕ್ಷನ್ 8(3) ಹೇಳುವಂತೆ ಸಂಸತ್ತಿನ ಸದಸ್ಯರು ಯಾವುದೇ ಅಪರಾಧಕ್ಕೆ ತಪ್ಪಿತಸ್ಥರೆಂದು ಮತ್ತು ಕನಿಷ್ಠ ಎರಡು ವರ್ಷಗಳವರೆಗೆ ಶಿಕ್ಷೆಗೆ ಗುರಿಯಾದ ಕ್ಷಣ, ಅವರು ಅನರ್ಹರಾಗುತ್ತಾರೆ. ತಜ್ಞರ ಪ್ರಕಾರ, ಸೂರತ್ ನ್ಯಾಯಾಲಯದ ಆದೇಶದ ಆಧಾರದ ಮೇಲೆ, ಲೋಕಸಭಾ ಸಚಿವಾಲಯವು ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿದರೆ ಅವರ ಕ್ಷೇತ್ರವನ್ನು ಖಾಲಿ ಎಂದು ಘೋಷಿಸಬಹುದು. ನಂತರ ಚುನಾವಣಾ ಆಯೋಗವು ಆ ಸ್ಥಾನಕ್ಕೆ ವಿಶೇಷ ಚುನಾವಣೆಯನ್ನು ಘೋಷಿಸುತ್ತದೆ.

ರಾಹುಲ್ ಗಾಂಧಿ ಅವರನ್ನು ಮಾರ್ಚ್ 23, 2023 ರಿಂದ ಆರ್ಟಿಕಲ್ 102(1)(ಇ) ನ ನಿಬಂಧನೆಗಳ ಪ್ರಕಾರ ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಭಾರತದ ಸಂವಿಧಾನವು 1951 ರ ಜನಪ್ರತಿನಿಧಿ ಕಾಯಿದೆಯ ಸೆಕ್ಷನ್ 8 ರೊಂದಿಗೆ ಹೇಳಿರುವಂತೆ ಈ ಕ್ರಮವನ್ನು ಜಾರಿಗೊಳಿಸಲಾಗಿದೆ ಎಂದು ಲೋಕಸಭೆಯ ಕಾರ್ಯದರ್ಶಿ ಇಂದು ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ.

ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರು ಗುರುವಾರ ದೋಷಿ ಎಂದು ಸಾಬೀತಾಗಿದೆ. ಹೀಗಿರುವಾಗ ಅನರ್ಹತೆಯು ಶಿಕ್ಷೆಯ ದಿನಾಂಕದಿಂದ ಜಾರಿಗೆ ಬರುತ್ತದೆ. ಆದಾಗ್ಯೂ, ರಾಹುಲ್ ಗಾಂಧಿಯವರು ಸದಸ್ಯರಾಗಿರುವ ಸಂಸತ್ತಿನ ಕೆಳಮನೆಯ ಸಚಿವಾಲಯವು ಅಂಗೀಕರಿಸಿದರೆ ಮಾತ್ರ ಔಪಚಾರಿಕ ಅನರ್ಹತೆ ಆಗುತ್ತದೆ.

ನ್ಯಾಯಾಲಯ ಶಿಕ್ಷೆಯನ್ನು ಮಾತ್ರ ಅಮಾನತುಗೊಳಿಸಿದರೆ, ಅದು ಸಾಕಾಗುವುದಿಲ್ಲ. ಅಮಾನತು ತಡೆ ನೀಡಬೇಕು. ಶಿಕ್ಷೆಗೆ ತಡೆ ನೀಡಿದರೆ ಮಾತ್ರ ಅವರು (ಗಾಂಧಿ) ಸಂಸತ್ ಸದಸ್ಯರಾಗಿ ಉಳಿಯಬಹುದು ಎಂದು ಕಾಂಗ್ರೆಸ್ ಪಕ್ಷದ ಮಾಜಿ ಸದಸ್ಯರೂ, ಖ್ಯಾತ ವಕೀಲರೂ ಆಗಿರುವ ಕಪಿಲ್ ಸಿಬಲ್ ಹೇಳಿದ್ದಾರೆ.

ಇದನ್ನೂ ಓದಿ: Rahul Gandhi: ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹ

 ರಾಹುಲ್ ಗಾಂಧಿ ಚುನಾವಣೆಗೆ ಸ್ಪರ್ಧಿಸಬಹುದೇ?

ಚುನಾವಣೆಗೆ ಮುನ್ನ ಉನ್ನತ ನ್ಯಾಯಾಲಯವು ತನ್ನ ಅಪರಾಧವನ್ನು ಅಮಾನತುಗೊಳಿಸದಿದ್ದರೆ ಅಥವಾ ರದ್ದುಗೊಳಿಸದಿದ್ದರೆ 2024 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ರಾಹುಲ್ ಗಾಂಧಿಗೆ ಸಾಧ್ಯವಿಲ್ಲ. ಶಿಕ್ಷೆಗೊಳಗಾದ ಶಾಸಕರು ತಮ್ಮ ಜೈಲು ಶಿಕ್ಷೆ ಮುಗಿದ ನಂತರ ಆರು ವರ್ಷಗಳವರೆಗೆ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಕಾನೂನು  ಹೇಳುತ್ತದೆ.

2013ರಿಂದ ಅನರ್ಹಗೊಂಡ ಶಾಸಕ, ಸಂಸದರು

2013 ರಿಂದ, ಅನೇಕ ಸಂಸದರು/ಶಾಸಕರು ತಮ್ಮ ಅಪರಾಧ ಸಾಬೀತಾದ ತಕ್ಷಣ ಅನರ್ಹರಾಗಿದ್ದಾರೆ. ಇವರು ಎರಡು ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಲಾಲು ಪ್ರಸಾದ್ ಯಾದವ್, ಆಗಿನ ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ, ರಾಜ್ಯಸಭಾ ಸಂಸದ ರಶೀದ್ ಮಸೂದ್, ಶಾಸಕರಾದ ಅಜಂ ಖಾನ್ ಮತ್ತು ಅಬ್ದುಲ್ಲಾ ಅಜಂ ಖಾನ್, ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಈ ಪಟ್ಟಿಯಲ್ಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:07 pm, Fri, 24 March 23

ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್