Siddaramaiah | ಅಹಿಂದ ಸಮಾವೇಶ: ಸಿದ್ದರಾಮಯ್ಯ ಪ್ರಸ್ತಾಪಕ್ಕೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್

Siddaramaiah: ಅಹಿಂದ ಸಮಾವೇಶಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಹೈಕಮಾಂಡ್​ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಸಿದ್ದರಾಮಯ್ಯ ಪ್ರಸ್ತಾಪಕ್ಕೆ ರಾಹುಲ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ದೆಹಲಿಯಲ್ಲಿ ರಾಹುಲ್ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡಿದ ವೇಳೆ ತಮ್ಮ ಒಪ್ಪಿಗೆ ನೀಡಿದ್ದಾರೆ.

Siddaramaiah | ಅಹಿಂದ ಸಮಾವೇಶ: ಸಿದ್ದರಾಮಯ್ಯ ಪ್ರಸ್ತಾಪಕ್ಕೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್
ರಾಹುಲ್ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ
Follow us
KUSHAL V
|

Updated on:Feb 16, 2021 | 5:12 PM

ದೆಹಲಿ: ಅಹಿಂದ ಸಮಾವೇಶಕ್ಕೆ ಕರ್ನಾಟಕ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಕಾಂಗ್ರೆಸ್​ ಹೈಕಮಾಂಡ್​ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಸಿದ್ದರಾಮಯ್ಯ ಪ್ರಸ್ತಾಪಕ್ಕೆ ರಾಹುಲ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ದೆಹಲಿಯಲ್ಲಿ ರಾಹುಲ್ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡಿದ ವೇಳೆ ತಮ್ಮ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ. 

ಕುರುಬ ಸಮುದಾಯ ಎತ್ತಿಕಟ್ಟುವ ತಂತ್ರ BJP ಮಾಡ್ತಿದೆ. ಮೀಸಲಾತಿ ವಿಚಾರದಲ್ಲಿ ನನ್ನ ವಿರುದ್ಧ ಎತ್ತಿಕಟ್ಟುವ ತಂತ್ರ ನಡೆಯುತ್ತಿದೆ. ಕುರುಬರ ಮತ ಒಡೆಯಲು BJP ಮೀಸಲಾತಿ ಅಸ್ತ್ರ ಬಿಟ್ಟಿದೆ. ಅದಕ್ಕೆ, ಪ್ರತಿತಂತ್ರವಾಗಿ ಅಹಿಂದ ಸಮುದಾಯ ಒಗ್ಗೂಡಿಸಬೇಕು ಎಂದು ರಾಹುಲ್ ಗಾಂಧಿ ಮುಂದೆ ಸಿದ್ದರಾಮಯ್ಯ ಪ್ರಸ್ತಾಪ ಇಟ್ಟಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ರಾಹುಲ್​ ಗಾಂಧಿ ಪಕ್ಷಕ್ಕೆ ಒಳಿತಾಗುವ ಯಾವುದೇ ರೀತಿ ಸಮಾವೇಶ ಮಾಡಿ ಎಂದು ಹೇಳಿದ್ದಾರೆ. ಜೊತೆಗೆ, ಅಹಿಂದ ಸಮಾವೇಶಕ್ಕೆ ಒಪ್ಪಿಗೆ ನೀಡಿದ್ದಾರೆ.

Published On - 5:04 pm, Tue, 16 February 21