ನಿಮಗೆ ಗಾಯವಾಗಿಲ್ಲ ತಾನೇ?; ಸ್ಕೂಟರ್​​ನಿಂದ ಬಿದ್ದ ವ್ಯಕ್ತಿಯ ಬಳಿ ಹೋಗಿ ವಿಚಾರಿಸಿದ ರಾಹುಲ್ ಗಾಂಧಿ

|

Updated on: Aug 09, 2023 | 4:52 PM

ನಿಮಗೆ ಗಾಯಗಳೇನೂ ಆಗಿಲ್ಲ ತಾನೇ ಎಂದು ರಾಹುಲ್ ಹೇಳುವುದನ್ನು ಕೇಳಬಹುದು. ಸ್ಕೂಟರ್ ಡ್ರೈವರ್‌ಗೆ ರಾಹುಲ್ ಅಂಗರಕ್ಷಕರು ನೆಲದ ಮೇಲೆ ಬಿದ್ದ ವಸ್ತುಗಳನ್ನು ಎತ್ತಿ ಕೊಡುತ್ತಿರುವುದು ವಿಡಿಯೊದಲ್ಲಿ ಕಾಣಿಸುತ್ತದೆ. ಇದಾದ ನಂತರ ಇಬ್ಬರು ಜನರೊಂದಿಗೆ ಸ್ವಲ್ಪ ಹೊತ್ತು ಮಾತನಾಡಿದ ರಾಹುಲ್ ಅವರ ಕೈಕುಲುಕಿ ಅಲ್ಲಿಂದ ಹೊರಟಿದ್ದಾರೆ. ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಚರ್ಚೆಯ ಮೇಲೆ ಭಾಷಣ ಮಾಡಲು ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ನಿಮಗೆ ಗಾಯವಾಗಿಲ್ಲ ತಾನೇ?; ಸ್ಕೂಟರ್​​ನಿಂದ ಬಿದ್ದ ವ್ಯಕ್ತಿಯ ಬಳಿ ಹೋಗಿ ವಿಚಾರಿಸಿದ ರಾಹುಲ್ ಗಾಂಧಿ
ರಾಹುಲ್ ಗಾಂಧಿ
Follow us on

ದೆಹಲಿ ಆಗಸ್ಟ್ 09: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಬುಧವಾರ ಸಂಸತ್​​ಗೆ (Parliament) ಬರುತ್ತಿದ್ದಾಗ, ರಸ್ತೆ ಮಧ್ಯೆ ಸ್ಕೂಟರ್‌ನಿಂದ ಬಿದ್ದ ವ್ಯಕ್ತಿ ಬಳಿ ಬಂದು ನಿಮಗೆ ಗಾಯವಾಗಿಲ್ಲ ತಾನೇ? ಎಂದು ವಿಚಾರಿಸುತ್ತಿರುವ ವಿಡಿಯೊವೊಂದನ್ನು ಕಾಂಗ್ರೆಸ್ (Congress) ಪಕ್ಷ ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್​​ನಲ್ಲಿ ಪೋಸ್ಟ್ ಮಾಡಿದೆ. ರಾಹುಲ್ ಗಾಂಧಿ ಕುಳಿತಿದ್ದ ಕಾರು ಮುಂದೆ ಸಾಗುತ್ತಿದೆ. ಆ ಹೊತ್ತಲ್ಲೇ ರಸ್ತೆಯಲ್ಲಿ ಸ್ಕೂಟರ್ ಚಲಾಯಿಸುತ್ತಿದ್ದ ವ್ಯಕ್ತಿ ರಸ್ತೆಯಲ್ಲಿ ಬಿದ್ದಿದ್ದಾರೆ. ಸ್ಕೂಟರ್ ಹಿಂದೆ ಕಾರೊಂದು ನಿಂತಿದ್ದು, ಇಬ್ಬರು ಚಾಲಕರು ಸ್ಥಳದಲ್ಲಿಯೇ ಇದ್ದರು. ಸಣ್ಣ ಅಪಘಾತಕ್ಕೆ ಒಳಗಾದವರು ಎಂದು ಹೇಳಲಾದ ಇಬ್ಬರು ಪರಸ್ಪರ ಮಾತುಗಳನ್ನು ವಿನಿಮಯ ಮಾಡಿಕೊಳ್ಳುತ್ತಿರುವಾಗ ಎಲ್ಲವೂ ಸರಿಯಾಗಿದೆಯೇ ಎಂದು ನೋಡಲು ಗಾಂಧಿ ಮತ್ತು ಅವರ ಹಲವಾರು ಅಂಗರಕ್ಷಕರು ಸ್ಥಳಕ್ಕೆ ಧಾವಿಸುತ್ತಿರುವುದು ವಿಡಿಯೊದಲ್ಲಿದೆ.

ನಿಮಗೆ ಗಾಯಗಳೇನೂ ಆಗಿಲ್ಲ ತಾನೇ ಎಂದು ರಾಹುಲ್ ಹೇಳುವುದನ್ನು ಕೇಳಬಹುದು. ಸ್ಕೂಟರ್ ಡ್ರೈವರ್‌ಗೆ ರಾಹುಲ್ ಅಂಗರಕ್ಷಕರು ನೆಲದ ಮೇಲೆ ಬಿದ್ದ ವಸ್ತುಗಳನ್ನು ಎತ್ತಿ ಕೊಡುತ್ತಿರುವುದು ವಿಡಿಯೊದಲ್ಲಿ ಕಾಣಿಸುತ್ತದೆ.


ಇದಾದ ನಂತರ ಇಬ್ಬರು ಜನರೊಂದಿಗೆ ಸ್ವಲ್ಪ ಹೊತ್ತು ಮಾತನಾಡಿದ ರಾಹುಲ್ ಅವರ ಕೈಕುಲುಕಿ ಅಲ್ಲಿಂದ ಹೊರಟಿದ್ದಾರೆ.
ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಚರ್ಚೆಯ ಮೇಲೆ ಭಾಷಣ ಮಾಡಲು ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಇದನ್ನೂ ಓದಿ:ಸಂಸತ್​​ನಲ್ಲಿ ರಾಹುಲ್ ಗಾಂಧಿಯಿಂದ ‘ಫ್ಲೈಯಿಂಗ್ ಕಿಸ್’: ಆಕ್ಷೇಪ ವ್ಯಕ್ತಪಡಿಸಿದ ಸ್ಮೃತಿ ಇರಾನಿ, ಸ್ಪೀಕರ್​​ಗೆ ದೂರು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ಸೋಮವಾರ ಮರುಸ್ಥಾಪಿಸಿದ್ದರಿಂದ ಅವರು ಈಗ ಮತ್ತೆ ಸಂಸತ್ ಕಲಾಪದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಲೋಕಸಭೆಯಲ್ಲಿ ರಾಹುಲ್ ಭಾಷಣ

ಬಿಜೆಪಿಯನ್ನು ಟೀಕಿಸುವ ಮೂಲಕ ಭಾಷಣ ಆರಂಭಿಸಿದ ರಾಹುಲ್  ಗಾಂಧಿ ಬಿಜೆಪಿಯವರು ಇಂದು ಭಯಪಡುವ ಅಗತ್ಯವಿಲ್ಲ, ನನ್ನ ಭಾಷಣವು ಅದಾನಿ ವಿಷಯದ ಬಗ್ಗೆ ಅಲ್ಲ ಎಂದು ಹೇಳಿದ್ದಾರೆ . ಭಾರತ್ ಜೋಡೋ ಯಾತ್ರೆ ಬಗ್ಗೆ ಮಾತನಾಡಿದ ಅವರು ಯಾತ್ರೆ ಇನ್ನೂ ಮುಗಿದಿಲ್ಲ, ಅದು ಇನ್ನೂ ಚಾಲನೆಯಲ್ಲಿದೆ. ನೀವು ಯಾತ್ರೆಯನ್ನು (ಭಾರತ್ ಜೋಡೋ ಯಾತ್ರೆ) ಏಕೆ ಪ್ರಾರಂಭಿಸಿದ್ದೀರಿ ಎಂದು ಜನರು ನನ್ನನ್ನು ಕೇಳುತ್ತಿದ್ದರು. ನಾನು ಯಾಕೆ ಯಾತ್ರೆ ಆರಂಭಿಸಿದೆ ಎಂಬುದು ನನಗೇ ಗೊತ್ತಿಲ್ಲ. ಆದರೆ ಆ ಪ್ರಯಾಣದಲ್ಲಿ  ಜನರ  ನೋವು, ಸಂಕಟ, ಸಮಸ್ಯೆಗಳು ನನ್ನದೇ ಸಮಸ್ಯೆಗಳಾದವು. ಯಾತ್ರೆಯ ವೇಳೆ ನನ್ನಲ್ಲಿದ್ದ ಅಹಂಕಾರದ ಭಾವನೆ ಮಾಯವಾಯಿತು.

ನಾನು ಯಾತ್ರೆ ಪ್ರಾರಂಭಿಸಿದಾಗ, ನಾನು ಪ್ರತಿದಿನ 10 ಕಿಮೀ ಓಡಲು ಸಾಧ್ಯವಾದರೆ 25 ಕಿಮೀ ನಡೆಯುವುದು ದೊಡ್ಡ ವಿಷಯವಲ್ಲ ಎಂದು ಅಂದುಕೊಂಡಿದ್ದೆ. ಇಂದು ನಾನು ಅದನ್ನು ನೋಡಿದಾಗ -ಅದು ದುರಹಂಕಾರವಾಗಿತ್ತು ಎಂಬುದು ಅರ್ಥವಾಗಿದೆ. ಆಗ ನನ್ನ ಹೃದಯದಲ್ಲಿ ದುರಹಂಕಾರವಿತ್ತು .ಆದರೆ ಭಾರತವು ದುರಹಂಕಾರವನ್ನು ಅಳಿಸಿಬಿಡುತ್ತದೆ, ಒಂದು ಸೆಕೆಂಡಿನಲ್ಲಿ ಅದು ಅಳಿಸಿಹಾಕುತ್ತದೆ. ಯಾತ್ರೆಯ 2-3 ದಿನಗಳಲ್ಲಿ ಮೊಣಕಾಲು ನೋಯಲಾರಂಭಿಸಿತು, ಅದು ಹಳೆಯ ಗಾಯವಾಗಿತ್ತು. ಮೊದಲ ದಿನಗಳಲ್ಲಿ ತೋಳ ಇರುವೆ ಆಗಿ ಬಿಟ್ಟಿತು.. ಜೋ ಹಿಂದೂಸ್ತಾನ್ ಕೋ ಅಹಂಕಾರ್ ಸೆ ದೇಖ್ನೆ ನಿಕ್ಲಾ ಥಾ, ವೋ ಪೂರಾ ಕಾ ಪೂರಾ ಅಹಂಕಾರ್ ಗಯಾಬ್ ಹೋ ಗಯಾ.. (ಅಹಂಕಾರದಿಂದ  ದೇಶವನ್ನು ಸುತ್ತಲು ಹೋಗಿದ್ದವನ ಎಲ್ಲ ಅಹಂಕಾರ ಇಳಿದು ಹೋಯ್ತು).

‘ಭಾರತ ಜನರ ಧ್ವನಿ. ಈ ಧ್ವನಿಗಳನ್ನು ಆಲಿಸಲು, ನಾವು ನಮ್ಮ ಆಸೆಗಳನ್ನು ತ್ಯಾಗ ಮಾಡಬೇಕು. ನಮ್ಮ ಅಹಂ ಮತ್ತು ದ್ವೇಷವನ್ನು ಬಿಟ್ಟುಬಿಡಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:49 pm, Wed, 9 August 23