AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮಗೆ ನಕ್ಸಲರು ಎಂದಿದ್ದಾರೆ’; ದಿಮಾಗಿ ನಕ್ಸಲ್ ಹೇಳಿಕೆ ವಿರುದ್ಧ ಪ್ರಧಾನಿ ಮೋದಿಗೆ ಮತ್ತೆ ಚರ್ಚೆಯ ಸವಾಲೆಸೆದ ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮುಖಾಮುಖಿ ಚರ್ಚೆ ನಡೆಸುವ ತಮ್ಮ ಬಹಿರಂಗ ಸವಾಲನ್ನು ಪುನರುಚ್ಚರಿಸಿದ್ದಾರೆ. ವಿಪಕ್ಷ ನಾಯಕರನ್ನು "ದಿಮಾಗಿ ನಕ್ಸಲರು" ಎಂದು ಪ್ರಧಾನಿ ಮೋದಿ ಟೀಕಿಸಿದ್ದರು. ನಿನ್ನೆ ಸಿಆರ್‌ಪಿಎಫ್ ಜವಾನರನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಬಂದೂಕು ಹಿಡಿದ ಮಾವೋವಾದಿಗಳನ್ನು ನಿರ್ಮೂಲನೆ ಮಾಡಲಾಗಿದ್ದರೂ ನಕ್ಸಲ್ ಬೆದರಿಕೆ ಸಂಪೂರ್ಣವಾಗಿ ಮುಗಿದಿಲ್ಲ ಎಂದು ಎಚ್ಚರಿಸಿದ್ದರು. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಸವಾಲೆಸೆದಿದ್ದಾರೆ.

‘ನಮಗೆ ನಕ್ಸಲರು ಎಂದಿದ್ದಾರೆ’; ದಿಮಾಗಿ ನಕ್ಸಲ್ ಹೇಳಿಕೆ ವಿರುದ್ಧ ಪ್ರಧಾನಿ ಮೋದಿಗೆ ಮತ್ತೆ ಚರ್ಚೆಯ ಸವಾಲೆಸೆದ ರಾಹುಲ್ ಗಾಂಧಿ
ರಾಹುಲ್ ಗಾಂಧಿImage Credit source: PTI
ಸುಷ್ಮಾ ಚಕ್ರೆ
|

Updated on:Nov 09, 2026 | 8:17 PM

Share

ನವದೆಹಲಿ, ನವೆಂಬರ್ 9: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸಾರ್ವಜನಿಕವಾಗಿ ಮುಖಾಮುಖಿ ಚರ್ಚೆ ನಡೆಸಲು ಮತ್ತೆ ಆಹ್ವಾನಿಸಿದ್ದಾರೆ. ವಿಪಕ್ಷ ನಾಯಕರನ್ನು “ದಿಮಾಗಿ ನಕ್ಸಲರು” (ವೈಚಾರಿಕ ನಕ್ಸಲರು) ಎಂದು ಪ್ರಧಾನಿ ಮೋದಿ ವಿಮರ್ಶಿಸಿದ ಬೆನ್ನಲ್ಲೇ ಈ ರಾಜಕೀಯ ವಾಗ್ದಾಳಿ ತೀವ್ರಗೊಂಡಿದೆ. ರಾಜಕೀಯ ಪಕ್ಷಗಳು ಸೇರಿದಂತೆ ಹಲವು ಸಂಸ್ಥೆಗಳಿಗೆ “ದಿಮಾಗಿ ನಕ್ಸಲರು” ಎಂದು ಕರೆಯುವ ಮೂಲಕ, ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ವಿರುದ್ಧ ಜನರನ್ನು ಎತ್ತಿಕಟ್ಟುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ್ದರು.

ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯ ಕರನ್‌ಪುರದಲ್ಲಿರುವ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಕ್ಯಾಂಪ್‌ನಲ್ಲಿ ಪ್ರಧಾನಿ ಮೋದಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿ ನೀಡಿದ್ದ ಭಾಷಣವನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ‘ಎಕ್ಸ್’ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ:

ಇದನ್ನೂ ಓದಿ: ಸಂಸತ್‌ನಲ್ಲಿ ಅಮಿತ್ ಶಾ ವೀಡಿಯೊ ತಿರುಚಲಾಗಿದೆ: ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ!

“ಆತ್ಮೀಯ ಸಿಆರ್‌ಪಿಎಫ್ ಯೋಧರೇ, ನಿಮ್ಮ ಮುಖಗಳೇ ಎಲ್ಲವನ್ನೂ ಹೇಳುತ್ತಿದ್ದವು. ಪ್ರಧಾನಿಯವರ ಸುಳ್ಳುಗಳನ್ನು ನೀವು ನಂಬಲಿಲ್ಲ. ಅವರು ನಮ್ಮನ್ನು ನಕ್ಸಲರು ಎಂದು ಕರೆದಿದ್ದಾರೆ. ಅದಕ್ಕೆ ನಾನು ಸವಾಲು ಹಾಕುತ್ತಿದ್ದೇನೆ. ಯಾರು ದೇಶವಿರೋಧಿ ಮತ್ತು ಯಾರನ್ನು ವಿದೇಶಿ ಶಕ್ತಿಗಳು ನಿಯಂತ್ರಿಸುತ್ತಿವೆ ಎಂಬ ವಿಷಯದ ಮೇಲೆ ಪ್ರಧಾನಿ ಮೋದಿ ನನ್ನೊಂದಿಗೆ ಚರ್ಚೆಗೆ ಬರಲಿ. ಯಾವುದೇ ಸಮಯ, ಯಾವುದೇ ಸ್ಥಳ ನಿಗದಿಪಡಿಸಲಿ. ಈ ಚರ್ಚೆಯ ನಂತರ ಪ್ರಧಾನಿಗೆ ಯಾವುದೇ ಒಬ್ಬ ಯೋಧನ ಮುಂದೆ ನಿಲ್ಲುವ ಧೈರ್ಯವಿರುವುದಿಲ್ಲ ಎಂಬುದು ನನ್ನ ಗ್ಯಾರಂಟಿ.” ಎಂದು ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

‘ದಿಮಾಗಿ ನಕ್ಸಲರ’ ಕುರಿತು ಪ್ರಧಾನಿ ಮೋದಿ ಹೇಳಿದ್ದೇನು?:

ಭಾನುವಾರ ಸಿಆರ್‌ಪಿಎಫ್ ಜವಾನರನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಸಶಸ್ತ್ರ ನಕ್ಸಲೀಯರನ್ನು ನಿರ್ಮೂಲನೆ ಮಾಡಲಾಗಿದ್ದರೂ ನಕ್ಸಲ್ ಬೆದರಿಕೆ ಸಂಪೂರ್ಣವಾಗಿ ಮುಗಿದಿಲ್ಲ ಎಂದು ಎಚ್ಚರಿಸಿದ್ದರು. “ಯಶಸ್ಸಿನ ನಡುವೆಯೂ ನಾವು ಒಂದು ವಿಷಯ ನೆನಪಿಡಬೇಕು. ಬಂದೂಕು ಹಿಡಿದ ನಕ್ಸಲೀಯರು ಕಾಡಿನಿಂದ ಕಣ್ಮರೆಯಾಗಿದ್ದಾರೆ. ಆದರೆ ‘ದಿಮಾಗಿ ನಕ್ಸಲರು’ ಹಲವು ಸಂಸ್ಥೆಗಳ ನಿಯಂತ್ರಣವನ್ನು ತಮ್ಮ ಕೈಗೆ ತೆಗೆದುಕೊಂಡಿದ್ದಾರೆ.” ಎಂದಿದ್ದರು.

ಇದನ್ನೂ ಓದಿ: ರಾಹುಲ್ ಗಾಂಧಿಯ ರ‍್ಯಾಲಿಗೆ ಬಾರದೆ ಚಿಕ್ಕಪ್ಪನ ಅಂತ್ಯಕ್ರಿಯೆಗೆ ತೆರಳಿದ್ದ ಯೂತ್ ಕಾಂಗ್ರೆಸ್ ನಾಯಕ ಅಮಾನತು!

ಮಾರ್ಚ್ 31ರಂದು ಕೇಂದ್ರ ಸರ್ಕಾರವು ದೇಶವನ್ನು ನಕ್ಸಲ್ ಮುಕ್ತಗೊಳಿಸಲಾಗಿದೆ ಎಂದು ಘೋಷಿಸಿತ್ತು. ಪ್ರಧಾನಿ ಮೋದಿ ಅವರು ಆಗಸ್ಟ್‌ನಲ್ಲಿ ಸ್ವಾತಂತ್ರ್ಯ ದಿನೋತ್ಸವದ ಭಾಷಣದಲ್ಲೂ ಈ “ದಿಮಾಗಿ ನಕ್ಸಲರ” ಬಗ್ಗೆ ಉಲ್ಲೇಖಿಸಿದ್ದರು. ಬಂದೂಕು ಹಿಡಿದ ನಕ್ಸಲಿಸಂ ಅಂತ್ಯಗೊಂಡಿದ್ದರೂ, ಅದರ ವೈಚಾರಿಕ ಬೆಂಬಲಿಗರು ಸಮಾಜದಲ್ಲಿ ಹಿಂಸೆ ಮತ್ತು ಅರಾಜಕತೆ ಹರಡಲು ಸೂಕ್ತ ಅವಕಾಶಕ್ಕಾಗಿ ಕಾಯುತ್ತಿದ್ದಾರೆ ಎಂದು ಪ್ರಧಾನಿ ಎಚ್ಚರಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:16 pm, Mon, 9 November 26

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಸಿದ್ದರಾಮಯ್ಯರೊಂದಿಗೆ ಡಿಕೆಶಿ ಚರ್ಚೆ: ಕೆಲ ವಿಚಾರ ತಿಳಿಸಿದ್ದೇನೆ; ಸಿಎಂ
ಸಿದ್ದರಾಮಯ್ಯರೊಂದಿಗೆ ಡಿಕೆಶಿ ಚರ್ಚೆ: ಕೆಲ ವಿಚಾರ ತಿಳಿಸಿದ್ದೇನೆ; ಸಿಎಂ
ಇಡೀ ರಾಜ್ಯದ ಮಹಿಳೆಯರಿಗಿದೆ 'ಉಚಿತ ಬಸ್', ನಮಗೇಕಿಲ್ಲ?
ಇಡೀ ರಾಜ್ಯದ ಮಹಿಳೆಯರಿಗಿದೆ 'ಉಚಿತ ಬಸ್', ನಮಗೇಕಿಲ್ಲ?
ರಸ್ತೆ ಗುಂಡಿಗಳ ಕಾಟ: ಖುದ್ದು ಗುಂಡಿ ಮುಚ್ಚಿದ ಸಂಚಾರಿ ಪೊಲೀಸರು
ರಸ್ತೆ ಗುಂಡಿಗಳ ಕಾಟ: ಖುದ್ದು ಗುಂಡಿ ಮುಚ್ಚಿದ ಸಂಚಾರಿ ಪೊಲೀಸರು
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ಸ್ಪರ್ಧಿಗಳಿಗೆ ಹೊರಗಿನ ವಿಷಯ ರಿವೀಲ್ ಮಾಡಿದ ಮಂಜು; ಇಡೀ ಮನೆ ಅಲ್ಲೋಲ ಕಲ್ಲೋಲ
ಸ್ಪರ್ಧಿಗಳಿಗೆ ಹೊರಗಿನ ವಿಷಯ ರಿವೀಲ್ ಮಾಡಿದ ಮಂಜು; ಇಡೀ ಮನೆ ಅಲ್ಲೋಲ ಕಲ್ಲೋಲ
ಮಂಡ್ಯದ ಚಿನಕುರಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ; ಭಸ್ಮವಾದ ಮೂರು ಅಂಗಡಿಗಳು
ಮಂಡ್ಯದ ಚಿನಕುರಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ; ಭಸ್ಮವಾದ ಮೂರು ಅಂಗಡಿಗಳು
ನವೆಂಬರ್ 13ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ನವೆಂಬರ್ 13ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ಶಾಸಕ ಜನಾರ್ದನ ರೆಡ್ಡಿಗೆ ಶಾಕ್​​ ಕೊಟ್ಟ ಬಳ್ಳಾರಿ ಜಿಲ್ಲಾಡಳಿತ
ಶಾಸಕ ಜನಾರ್ದನ ರೆಡ್ಡಿಗೆ ಶಾಕ್​​ ಕೊಟ್ಟ ಬಳ್ಳಾರಿ ಜಿಲ್ಲಾಡಳಿತ
ಹಾಸನಾಂಬೆಯ ದರ್ಶನ ಪಡೆದ ಪ್ರಿಯಾ; ಅತ್ತೆ ಸಂಪ್ರದಾಯ ಮುಂದುವರಿಸಿದ ಸೊಸೆ
ಹಾಸನಾಂಬೆಯ ದರ್ಶನ ಪಡೆದ ಪ್ರಿಯಾ; ಅತ್ತೆ ಸಂಪ್ರದಾಯ ಮುಂದುವರಿಸಿದ ಸೊಸೆ