Rahul Gandhi America Visit: 10 ದಿನಗಳ ಕಾಲ ಅಮೆರಿಕ ಪ್ರವಾಸಕ್ಕೆ ಹೊರಟು ನಿಂತ ರಾಹುಲ್ ಗಾಂಧಿ
ಕಾಂಗ್ರೆಸ್ ಪಕ್ಷದ ಅಧಿನಾಯಕ, ವಯನಾಡಿನ ಮಾಜಿ ಸಂಸದ ರಾಹುಲ್ ಗಾಂಧಿ ಅವರು10 ದಿನಗಳ ಕಾಲ ಅಮೆರಿಕ ಪ್ರವಾಸಕ್ಕೆ ಹೊರಟು ನಿಂತಿದ್ದಾರೆ.
ಇತ್ತ ಕರ್ನಾಟಕದ ಮಂದಿ 135 ಸೀಟುಗಳ ಭರ್ಜರಿ ಕೊಡುಗೆ ಕೊಟ್ಟಿರುವಾಗ ಅದನ್ನು ಸೆಲಬರೇಟ್ ಮಾಡಲು ಎಂಬಂತೆ ಕಾಂಗ್ರೆಸ್ ಪಕ್ಷದ ಅಧಿನಾಯಕ, ವಯನಾಡಿನ ಮಾಜಿ ಸಂಸದ ರಾಹುಲ್ ಗಾಂಧಿ ಅವರು10 ದಿನಗಳ ಕಾಲ ಅಮೆರಿಕ ಪ್ರವಾಸಕ್ಕೆ ಹೊರಟು ನಿಂತಿದ್ದಾರೆ. ಮೇ 31ರಂದು ಹೊರಟು ಸುಮಾರು 10 ದಿನಗಳ ಕಾಲ ವಿವಿಧ ನಗರಗಳಿಗೆ ರಾಹುಲ್ ಭೇಟಿ ನೀಡಲಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಭೇಟಿಗೂ ಮುನ್ನವೇ ರಾಹುಲ್ ಪ್ರವಾಸದ ಬಗ್ಗೆ ಎಲ್ಲೆಡೆ ಕುತೂಹಲ ಮೂಡಿದೆ. ಸಂಸತ್ ಸದಸ್ಯತ್ವ ರದ್ದಾದ ಬಳಿಕ ರಾಹುಲ್ ಅವರ ಮೊದಲ ವಿದೇಶ ಪ್ರವಾಸ ಇದಾಗಿದೆ.
ಆದರೆ, ಈ ಪ್ರವಾಸದ ಭಾಗವಾಗಿ ಅವರು ಜೂನ್ 4 ರಂದು ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾದ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ. ಈ ರ್ಯಾಲಿಯಲ್ಲಿ ಸುಮಾರು 5 ಸಾವಿರ ಅನಿವಾಸಿ ಭಾರತೀಯರು ಭಾಗವಹಿಸುವ ನಿರೀಕ್ಷೆಯಿದೆ. ಈ ಭೇಟಿಯ ವೇಳೆ ರಾಹುಲ್ ಗಾಂಧಿ ಅವರು ರಾಜಕೀಯ ನಾಯಕರು, ಉದ್ಯಮಿಗಳು ಮತ್ತು ಉದ್ಯಮ ದಿಗ್ಗಜರನ್ನು ಭೇಟಿ ಮಾಡಲಿದ್ದಾರೆ.
ಇನ್ನೊಂದೆಡೆ ಪ್ರಧಾನಿ ನರೇಂದ್ರ ಮೋದಿ ಮುಂದಿನ ತಿಂಗಳು ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ. ಜೂನ್ 22 ರಂದು ಯುಎಸ್ ಅಧ್ಯಕ್ಷ ಜೋ ಬಿಡೆನ್ ಅವರು ಪ್ರಧಾನ ಮಂತ್ರಿಯ ಗೌರವಾರ್ಥ ಭೋಜನವನ್ನು ಆಯೋಜಿಸಲಿದ್ದಾರೆ. ಈ ಭೇಟಿಗಳು ಉಭಯ ದೇಶಗಳ ನಡುವಿನ ಸಂಬಂಧವನ್ನು ಬಲಪಡಿಸುತ್ತದೆ ಎಂದು ಶ್ವೇತಭವನವು ಈಗಾಗಲೇ ಘೋಷಿಸಿದೆ.
ಕಳೆದ ಮಾರ್ಚ್ ನಲ್ಲಿ ಬ್ರಿಟನ್ ಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಲಂಡನ್ ನ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲಿ ಅವರ ಹೇಳಿಕೆಗಳು ಭಾರತದಲ್ಲಿ ಭಾರೀ ರಾಜಕೀಯ ಕೋಲಾಹಲವನ್ನು ಸೃಷ್ಟಿಸಿದ್ದ ವು. ಸಂಸತ್ತಿನಲ್ಲಿ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಸದಸ್ಯರು ಒತ್ತಾಯಿಸಿದ್ದು ಗೊತ್ತೇ ಇದೆ. ಈ ಕ್ರಮದಲ್ಲಿ ರಾಹುಲ್ ಗಾಂಧಿ ಅವರ ಅಮೆರಿಕ ಭೇಟಿ, ಅಲ್ಲಿ ಭಾಗವಹಿಸುವ ಕಾರ್ಯಕ್ರಮಗಳೆಲ್ಲ ಭಾರತದಲ್ಲಿ ಕುತೂಹಲ ಮೂಡಿಸಿವೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 5:44 pm, Tue, 16 May 23