ಇಂದು ಅಮೇಠಿಗೆ ರಾಹುಲ್ ಗಾಂಧಿ ಭೇಟಿ; ಬಿಜೆಪಿ ಓಡಿಸಿ ಎಂಬ ಅಭಿಯಾನದಲ್ಲಿ ಭಾಗಿಯಾಗಿ, ಪಾದಯಾತ್ರೆ ನಡೆಸಲಿರುವ ಕಾಂಗ್ರೆಸ್​ ನಾಯಕ

Rahul Gandhi: ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ಅಮೇಠಿಯಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಅಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಸೋತಿದ್ದಾರೆ. ಅದಾದ ಬಳಿಕ ಈ ಕಡೆ ಬಂದಿರಲಿಲ್ಲ.

ಇಂದು ಅಮೇಠಿಗೆ ರಾಹುಲ್ ಗಾಂಧಿ ಭೇಟಿ; ಬಿಜೆಪಿ ಓಡಿಸಿ ಎಂಬ ಅಭಿಯಾನದಲ್ಲಿ ಭಾಗಿಯಾಗಿ, ಪಾದಯಾತ್ರೆ ನಡೆಸಲಿರುವ ಕಾಂಗ್ರೆಸ್​ ನಾಯಕ
ರಾಹುಲ್​ ಗಾಂಧಿ
Follow us
TV9 Web
| Updated By: Lakshmi Hegde

Updated on:Dec 18, 2021 | 10:26 AM

ದೆಹಲಿ: ಉತ್ತರಪ್ರದೇಶದಲ್ಲಿ 2022ರ ಪ್ರಾರಂಭದಲ್ಲಿಯೇ ವಿಧಾನಸಭೆ ಚುನಾವಣೆ ನಡೆಯಲಿದ್ದು, ಒಂದೆಡೆ ಬಿಜೆಪಿ ಸರ್ಕಾರ ಸಾಲುಸಾಲು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆಯಲ್ಲಿ ತೊಡಗಿದೆ. ಪ್ರಧಾನಿ ಮೋದಿ ಈಗಾಗಲೇ ಹಲವು ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ಇತ್ತೀಚೆಗಷ್ಟೇ ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆ ಮಾಡಿರುವ ಅವರು, ಇಂದು ಮತ್ತೆ ಉತ್ತರಪ್ರದೇಶಕ್ಕೆ ಭೇಟಿ ನೀಡಲಿದ್ದು, ಗಂಗಾ ಎಕ್ಸ್​ಪ್ರೆಸ್​ ವೇ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಹಾಗೇ, ಇನ್ನೊಂದೆಡೆ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ (Congress Leader Rahul Gandhi) ಇಂದು ಅಮೇಠಿಗೆ ತೆರಳಲಿದ್ದಾರೆ.

ರಾಹುಲ್ ಗಾಂಧಿ ಅಮೇಠಿಯಲ್ಲಿ ಇಂದು ಬಿಜೆಪಿಯನ್ನು ಓಡಿಸಿ, ಹಣದುಬ್ಬರ ತೊಲಗಿಸಿ (BJP Bhagao, Mehangai Hatao) ಎಂಬ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಂಗ್ರೆಸ್​​ನಿಂದ ರಾಷ್ಟ್ರಾದ್ಯಂತ ನವೆಂಬರ್​ 14ರಿಂದ ಸಾರ್ವಜನಿಕ ಜಾಗೃತಿ ​ಅಭಿಯಾನ ನಡೆಯುತ್ತಿದ್ದು, ಅದರ ಒಂದು ಭಾಗವಾಗಿ ಈ ರ್ಯಾಲಿ ಇಂದು ಅಮೇಠಿಯಲ್ಲಿ ನಡೆಯುತ್ತಿದೆ.  ಇಂದು ರಾಹುಲ್​ ಗಾಂಧಿ ಜಗದೀಶ್​ಪುರದಿಂದ ಹರಿಮೌವರೆಗೆ ಪಾದಯಾತ್ರೆ ನಡೆಸಲಿದ್ದಾರೆ ಎಂದೂ ಹೇಳಲಾಗಿದೆ. ಈ  ಪಾದಯಾತ್ರೆಯಲ್ಲಿ ಸ್ಥಳೀಯ ಕಾಂಗ್ರೆಸ್​ ನಾಯಕರೂ ಕೂಡ ಪಾಲ್ಗೊಳ್ಳುವರು.

ಅಮೇಠಿಯಲ್ಲಿ ಸೋತಿದ್ದ ರಾಹುಲ್​ ಗಾಂಧಿ ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ಅಮೇಠಿಯಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಅಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಸೋತಿದ್ದಾರೆ. ಅದಾದ ಬಳಿಕ ಈ ಕಡೆ ಬಂದಿರಲಿಲ್ಲ. ಸುಮಾರು ಎರಡೂವರೆ ವರ್ಷದ ಬಳಿಕ ಈಗ ಅಮೇಠಿಗೆ ಕಾಲಿಸುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕೇರಳದ ವಯಾನಾಡಿನಿಂದಲೂ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಅಲ್ಲಿ ಗೆದ್ದು ಸಂಸದರಾಗಿದ್ದಾರೆ.  ಇನ್ನು ಈ ಅಮೇಠಿ ಈ ಹಿಂದಿನ 15 ಲೋಕಸಭಾ ಚುನಾವಣೆಯಲ್ಲೂ ನೆಹರೂ-ಗಾಂಧಿ ಕುಟುಂಬದ ಭದ್ರಕೋಟೆಯೆಂದೇ ಬಿಂಬಿತವಾಗಿತ್ತು. ಆದರೆ 2019ರಲ್ಲಿ ಇದು ಗಾಂಧಿ ಕುಟುಂಬದ ಕೈತಪ್ಪಿತ್ತು. ಇಂದು ರಾಹುಲ್ ಗಾಂಧಿ ಅಲ್ಲಿಗೆ ತೆರಳಲಿದ್ದು, ದಿನಪೂರ್ತಿ ಅಲ್ಲಿಯೇ ಇರಲಿದ್ದಾರೆ. ಹಾಗೇ, ನಾಳೆ ಭಾನುವಾರ ಪ್ರಿಯಾಂಕಾ ಗಾಂಧಿ ಅಮೇಠಿಗೆ ಹೋಗಲಿದ್ದಾರೆ.  2017ರಲ್ಲಿ ಉತ್ತರಪ್ರದೇಶದಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ವಿಜಯ ಸಾಧಿಸಿತ್ತು. ಒಟ್ಟಾರೆ 403 ಕ್ಷೇತ್ರಗಳಲ್ಲಿ 312 ವಿಧಾನಸಭಾ ಕ್ಷೇತ್ರಗಳಲ್ಲಿ ಗೆದ್ದಿತ್ತು. ಸಮಾಜವಾದಿ ಪಕ್ಷ 47, ಬಿಎಸ್​ಪಿ 19 ಸೀಟುಗಳನ್ನು ಗೆದ್ದಿದ್ದರೆ, ಕಾಂಗ್ರೆಸ್ ಕೇವಲ 7 ಕ್ಷೇತ್ರಗಳಲ್ಲಿ ಜಯಭೇರಿ ಸಾಧಿಸಿತ್ತು. ಆದರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹೇಗಾದರೂ ಅಲ್ಲಿ ಅಧಿಕಾರಿ ಹಿಡಿಯಬೇಕು ಎಂಬುದು ಕಾಂಗ್ರೆಸ್​ನ ಪ್ರಯತ್ನವಾಗಿದೆ.

ಇದನ್ನೂ ಓದಿ: ‘ಅಪ್ಪು ಅವರನ್ನು ಬೆಳೆಸಿದ್ದು ನಾವಲ್ಲ, ಅಭಿಮಾನಿಗಳು’: ಪುನೀತ್​ ಬಗ್ಗೆ ಮಧು ಬಂಗಾರಪ್ಪ ಮಾತು

Published On - 9:37 am, Sat, 18 December 21

ಮಿಡಲ್ ಸ್ಟಂಪ್... ಮೊದಲ ಇನಿಂಗ್ಸ್​ನ ಹೀರೋನ ಝೀರೋ ಮಾಡಿದ ಬುಮ್ರಾ
ಮಿಡಲ್ ಸ್ಟಂಪ್... ಮೊದಲ ಇನಿಂಗ್ಸ್​ನ ಹೀರೋನ ಝೀರೋ ಮಾಡಿದ ಬುಮ್ರಾ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್