Rahul Gandhi Wayanad Visit: ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ಮೊದಲ ಬಾರಿ ಇಂದು ವಯನಾಡ್​​ಗೆ ರಾಹುಲ್ ಗಾಂಧಿ ಭೇಟಿ

ಇಂದು ಮಧ್ಯಾಹ್ನ 2 ಗಂಟೆಗೆ ದೆಹಲಿಯಿಂದ ವಿಮಾನದ ಮೂಲಕ ಕಣ್ಣೂರಿಗೆ ಆಗಮಿಸಲಿರುವ ರಾಹುಲ್ ಗಾಂಧಿ ನಂತರ ಹೆಲಿಕಾಪ್ಟರ್ ಮೂಲಕ ವಯನಾಡಿಗೆ ಹೋಗಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕಲ್ಪಟ್ಟಾದ ಎಸ್‌ಕೆಎಂಜೆ ಶಾಲೆಯಲ್ಲಿ ಹೆಲಿಕಾಪ್ಟರ್​​ನಲ್ಲಿ ಬಂದಿಳಿದ ನಂತರ ರಾಹುಲ್ ಗಾಂಧಿ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ

Rahul Gandhi Wayanad Visit: ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ಮೊದಲ ಬಾರಿ ಇಂದು ವಯನಾಡ್​​ಗೆ ರಾಹುಲ್ ಗಾಂಧಿ ಭೇಟಿ
ರಾಹುಲ್ ಗಾಂಧಿ
Follow us
ರಶ್ಮಿ ಕಲ್ಲಕಟ್ಟ
|

Updated on: Apr 11, 2023 | 7:00 AM

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಇಂದು (ಮಂಗಳವಾರ) ತಮ್ಮ ಹಿಂದಿನ ಕ್ಷೇತ್ರವಾದ ಕೇರಳದ (Kerala) ವಯನಾಡ್‌ಗೆ (Wayanad) ಭೇಟಿ ನೀಡಲಿದ್ದಾರೆ. ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಂಡ ನಂತರ ಮೊದಲ ಬಾರಿಗೆ ಅವರು ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ. ತಮ್ಮ ಭೇಟಿಯ ವೇಳೆ ಅವರು ವಯನಾಡಿನಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದು ರೋಡ್ ಶೋ ನಡೆಸಲಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆಗೆ ದೆಹಲಿಯಿಂದ ವಿಮಾನದ ಮೂಲಕ ಕಣ್ಣೂರಿಗೆ ಆಗಮಿಸಲಿರುವ ರಾಹುಲ್ ಗಾಂಧಿ ನಂತರ ಹೆಲಿಕಾಪ್ಟರ್ ಮೂಲಕ ವಯನಾಡಿಗೆ ಹೋಗಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕಲ್ಪಟ್ಟಾದ ಎಸ್‌ಕೆಎಂಜೆ ಶಾಲೆಯಲ್ಲಿ ಹೆಲಿಕಾಪ್ಟರ್​​ನಲ್ಲಿ ಬಂದಿಳಿದ ನಂತರ ರಾಹುಲ್ ಗಾಂಧಿ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ. 3.30ಕ್ಕೆ ಕಲ್ಪಟ್ಟಾ ಕೈನಾಟ್ಟಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ರಾಹುಲ್ ಮಾತನಾಡಲಿದ್ದಾರೆ. ರೋಡ್‌ಶೋನಲ್ಲಿ ಪಕ್ಷದ ಧ್ವಜದ ಬದಲಿಗೆ ರಾಷ್ಟ್ರಧ್ವಜವನ್ನು ಬಳಸಲಾಗುವುದು.

ಸತ್ಯಮೇವ ಜಯತೇ ಎಂಬ ರೋಡ್ ಶೋಗೆ ರಾಹುಲ್ ಮತ್ತು ಪ್ರಿಯಾಂಕಾ ಆಗಮಿಸಲಿದ್ದಾರೆ. ರೋಡ್ ಶೋ ನಂತರ ನಡೆಯಲಿರುವ ಸಮ್ಮೇಳನದ ಅಂಗವಾಗಿ ಸಾಂಸ್ಕೃತಿಕ ಪ್ರಜಾಸತ್ತಾತ್ಮಕ ಪ್ರತಿಭಟನೆ ಎಂಬ ಇನ್ನೊಂದು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕೇರಳದ ಪ್ರಮುಖ ಸಾಂಸ್ಕೃತಿಕ ಕಾರ್ಯಕರ್ತರು ಇದರಲ್ಲಿ ಭಾಗವಹಿಸಲಿದ್ದಾರೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ನಾಯಕರು ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ರಾಹುಲ್ ಗಾಂಧಿ ಜತೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ಸಂಸದ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಕೆ. ಸುಧಾಕರನ್, ಮುಸ್ಲಿಂ ಲೀಗ್ ರಾಜ್ಯಾಧ್ಯಕ್ಷ ಪಾಣಕ್ಕಾಡ್ ಸಾದಿಖಲಿ ಶಿಹಾಬ್ ತಂಙಳ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ತಾರಿಕ್ ಅನ್ವರ್, ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್, ಪಿ.ಕೆ. ಕುಂಞಾಲಿಕುಟ್ಟಿ, ಪಿ.ಎಂ.ಎ. ಸಲಾಂ, ಶಾಸಕ ಮಾನ್ಸ್ ಜೋಸೆಫ್ , ಸಂಸದ ಎನ್.ಕೆ. ಪ್ರೇಮಚಂದ್ರನ್, ಸಿ.ಪಿ. ಜಾನ್ ಮುಂತಾದ ಮುಖಂಡರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಯುಡಿಎಫ್ ಮುಖಂಡರು ಹೇಳಿದ್ದಾರೆ.

ಇದನ್ನೂ ಓದಿ: Vande Bharat Express: ರಾಜಸ್ಥಾನದ ಮೊದಲ ವಂದೇ ಭಾರತ್​ ರೈಲಿಗೆ ಪ್ರಧಾನಿ ಮೋದಿ ಏ. 12ಕ್ಕೆ ಚಾಲನೆ

2019 ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರನ್ನು ಸೂರತ್ ನ್ಯಾಯಾಲಯ ದೋಷಿ ಎಂದು ಹೇಳಿ ಶಿಕ್ಷೆ ವಿಧಿಸಿದ ನಂತರ ಸಂಸತ್ತಿನ ಕೆಳಮನೆಯಲ್ಲಿ ಸದಸ್ಯತ್ವವನ್ನು ಕಳೆದುಕೊಂಡರು. 2019 ರ ಲೋಕಸಭೆ ಚುನಾವಣೆಗೆ ಮುನ್ನ ಪ್ರಚಾರ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ‘ಮೋದಿ’ ಸರ್ ನೇಮ್ ಹೇಳಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಅವರಿಗೆ ಶಿಕ್ಷೆಯಾಗಿದೆ.  2019 ರ ಏಪ್ರಿಲ್‌ನಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ರ್ಯಾಲಿಯಲ್ಲಿ, ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡ ರಾಹುಲ್, ಎಲ್ಲಾ ಕಳ್ಳರಿಗೂ ಮೋದಿ ಎ ಸರ್​​ನೇಮ್ ಯಾಕಿದೆ ಎಂದು ಕೇಳಿದ್ದರು.

2013ರಲ್ಲಿ ಸುಪ್ರೀಂಕೋರ್ಟ್‌ನ ತೀರ್ಪಿನ ಪ್ರಕಾರ ಮಾರ್ಚ್ 24 ರಂದು ರಾಹುಲ್ ಅವರನ್ನು ಸಂಸದರಾಗಿ ಅನರ್ಹಗೊಳಿಸಲಾಯಿತು. ಈ ತೀರ್ಪಿನ ಪ್ರಕಾರ, ಯಾವುದೇ ಸಂಸದರು ಅಥವಾ ಶಾಸಕರು ತಪ್ಪಿತಸ್ಥರೆಂದು ಸಾಬೀತಾದರೆ ಮತ್ತು ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಗೆ ಶಿಕ್ಷೆಯಾದರೆ ಅವರು ಆ ದಿನದಿಂದಲೇ ಸಂಸದ/ಶಾಸಕ ಸ್ಥಾನದಿಂದ ಅನರ್ಹರಾಗುತ್ತಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ