AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ದಿನಚರಿ ಪಟ್ಟಿಯಲ್ಲಿ ಏನೇನಿದೆ?- 5 ವಿಷಯಗಳನ್ನು ಪಟ್ಟಿ ಮಾಡಿದ ರಾಹುಲ್ ಗಾಂಧಿ

2021ರಿಂದ ಸ್ಥಿರತೆ ಕಾಯ್ದುಕೊಂಡಿದ್ದ ಪೆಟ್ರೋಲ್​-ಡೀಸೆಲ್​ ದರ ಇದೀಗ ಮತ್ತೆ ಪ್ರತಿದಿನ ಏರಿಕೆಯಾಗುತ್ತಿದೆ. ಪ್ರತಿದಿನ 80 ಪೈಸೆಯಂತೆ ಕಳೆದ 9 ದಿನಗಳಲ್ಲಿ 5.60 ರೂ.ಹೆಚ್ಚಳವಾಗಿದೆ. ಇದು ಸಹಜವಾಗಿಯೇ ಗ್ರಾಹಕರಿಗೆ ಹೊರೆಯಾಗಿ ಪರಿಣಮಿಸಿದೆ.

ಪ್ರಧಾನಿ ನರೇಂದ್ರ ಮೋದಿ ದಿನಚರಿ ಪಟ್ಟಿಯಲ್ಲಿ ಏನೇನಿದೆ?- 5 ವಿಷಯಗಳನ್ನು ಪಟ್ಟಿ ಮಾಡಿದ ರಾಹುಲ್ ಗಾಂಧಿ
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ
TV9 Web
| Updated By: Lakshmi Hegde|

Updated on: Mar 30, 2022 | 5:21 PM

Share

ಸದಾ ಒಂದಿಲ್ಲೊಂದು ಕಾರಣಗಳಿಗೆ ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ವಿರುದ್ಧ ವಾಗ್ದಾಳಿ ನಡೆಸುವ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಇದೀಗ ಇಂಧನ, ಎಲ್​ಪಿಜಿ ಸಿಲಿಂಡರ್​ ಗ್ಯಾಸ್​ ಬೆಲೆ ಏರಿಕೆಯಾಗುತ್ತಿರುವುದರ ವಿರುದ್ಧ ಕಿಡಿ ಕಾರಿದ್ದಾರೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನೇ ಹೊಣೆ ಮಾಡಿರುವ ರಾಹುಲ್​ ಗಾಂಧಿ (Rahul Gandhi), ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ದಿನಚರಿ ಪಟ್ಟಿಯಲ್ಲಿ ಅಂದರೆ ನಿತ್ಯ ಬೆಳಗ್ಗೆ ಎದ್ದ ಬಳಿಕ ಮಾಡಬೇಕಾದ ಕೆಲಸದ ಪಟ್ಟಿಯಲ್ಲಿ ಪೆಟ್ರೋಲ್​, ಡೀಸೆಲ್​ ಗ್ಯಾಸ್​ ಬೆಲೆ ಏರಿಕೆ ಮಾಡುವುದನ್ನೂ ಸೇರಿಸಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ರಾಹುಲ್​ ಗಾಂಧಿ, ಪ್ರಧಾನಿ ನರೇಂದ್ರ ಮೋದಿಯವರ ದಿನಚರಿಯ ಪಟ್ಟಿಯನ್ನು ಬರೆದಿದ್ದಾರೆ. 1)ಪೆಟ್ರೋಲ್​-ಡೀಸೆಲ್ ಬೆಲೆ ಎಷ್ಟು ಏರಿಕೆ ಮಾಡುವುದು. 2) ಜನರ ಖರ್ಚಿನ ಮೇಲಿನ ಚರ್ಚೆ ನಿಲ್ಲಿಸುವುದು ಹೇಗೆ? 3) ನಿರುದ್ಯೋಗಿ ಯುವಕರಿಗೆ ಉದ್ಯೋಗದ ಪೊಳ್ಳು ಕನಸು ತೋರಿಸುವುದು 4) ಇವತ್ತು ಸಾರ್ವಜನಿಕ ವಲಯದ ಯಾವ ಕಂಪನಿಯನ್ನು ಮಾರಾಟ ಮಾಡುವುದು ಎಂಬುದನ್ನು ನೋಡಿ, ಅದನ್ನು ಕಾರ್ಯಗತಗೊಳಿಸುವುದು. 5) ರೈತರನ್ನು ಮತ್ತಷ್ಟು, ಇನ್ನಷ್ಟು ಅಸಹಾಯಕರನ್ನಾಗಿ ಮಾಡುವುದು..ಇವೆಲ್ಲ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿದಿನ ಮಾಡುವ ಪಟ್ಟಿಯಲ್ಲಿ ಸೇರಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಅದಕ್ಕೆ #RozSubahKiBaat (ಪ್ರತಿದಿನ ಬೆಳಗಿನ ಮಾತು) ಎಂಬ ಹ್ಯಾಷ್​ಟ್ಯಾಗ್​ ಕೊಟ್ಟಿದ್ದಾರೆ.

2021ರಿಂದ ಸ್ಥಿರತೆ ಕಾಯ್ದುಕೊಂಡಿದ್ದ ಪೆಟ್ರೋಲ್​-ಡೀಸೆಲ್​ ದರ ಇದೀಗ ಮತ್ತೆ ಪ್ರತಿದಿನ ಏರಿಕೆಯಾಗುತ್ತಿದೆ. ಪ್ರತಿದಿನ 80 ಪೈಸೆಯಂತೆ ಕಳೆದ 9 ದಿನಗಳಲ್ಲಿ 5.60 ರೂ.ಹೆಚ್ಚಳವಾಗಿದೆ. ಇದು ಸಹಜವಾಗಿಯೇ ಗ್ರಾಹಕರಿಗೆ ಹೊರೆಯಾಗಿ ಪರಿಣಮಿಸಿದೆ.  ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಮುಗಿಯುತ್ತಿದ್ದಂತೆ ಬಿಜೆಪಿ ಪೆಟ್ರೋಲ್​-ಡೀಸೆಲ್​ ಬೆಲೆ ಏರಿಕೆ ಮಾಡಿತು ಎಂದು ಪ್ರತಿಪಕ್ಷಗಳು ಆರೋಪ ಮಾಡುತ್ತಿವೆ. ಆದರೆ ಇದನ್ನು ಬಿಜೆಪಿ ನಿರಾಕರಿಸಿದೆ. ರಷ್ಯಾ-ಉಕ್ರೇನ್​ ಯುದ್ಧದ ಕಾರಣದಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಏರಿಕೆಯಾಗಿದ್ದು, ಅದರ ಪರಿಣಾಮ ಬಹುತೇಕ ಎಲ್ಲ ದೇಶಗಳಲ್ಲೂ ಪೆಟ್ರೋಲ್​-ಡೀಸೆಲ್​ ಬೆಲೆ ಅಷ್ಟೇ ಅಲ್ಲ, ನಿತ್ಯ ಬಳಕೆಯ ಅನೇಕ ವಸ್ತುಗಳ ಬೆಲೆಯಲ್ಲಿ ಏರಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ತಿಳಿಸಿದ್ದಾರೆ.

ಇದನ್ನೂ ಓದಿ: ‘ನನಗೆ ಹುಚ್ಚುನಾಯಿ ಕಚ್ಚಿಲ್ಲ’; ಒಂದೇ ಪ್ರಶ್ನೆಗೆ ಪಿತ್ತ ನೆತ್ತಿಗೇರಿಸಿಕೊಂಡ ರಣಬೀರ್​ ಕಪೂರ್

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ