Rahul Gandhi: ಸೆಂಟ್ರಲ್ ದೆಹಲಿಯಲ್ಲಿರುವ ಅಧಿಕೃತ ನಿವಾಸ ಖಾಲಿ ಮಾಡಿದ ರಾಹುಲ್ ಗಾಂಧಿ

12 ತುಘ್ಲಕ್ ಲೇನ್​​ನಲ್ಲಿರುವ ಬಂಗ್ಲೆಯನ್ನು ಏಪ್ರಿಲ್ 22ರೊಳಗೆ ಖಾಲಿ ಮಾಡಬೇಕು ಎಂದು ಲೋಕಸಭಾ ಹೌಸಿಂಗ್ ಕಮಿಟಿಯ ಅಧ್ಯಕ್ಷ ಬಿಜೆಪಿ ಸಂಸದ ಸಿಆರ್ ಪಾಟೀಲ್ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದರು. 2005ರಿಂದ ರಾಹುಲ್ ಇಲ್ಲಿ ವಾಸವಾಗಿದ್ದಾರೆ.

Rahul Gandhi: ಸೆಂಟ್ರಲ್ ದೆಹಲಿಯಲ್ಲಿರುವ ಅಧಿಕೃತ ನಿವಾಸ ಖಾಲಿ ಮಾಡಿದ ರಾಹುಲ್ ಗಾಂಧಿ
ರಾಹುಲ್ ಗಾಂಧಿ

Updated on: Apr 22, 2023 | 5:45 PM

ದೆಹಲಿ: ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ರಾಹುಲ್ ಗಾಂಧಿ (Rahul Gandhi) ಸೆಂಟ್ರಲ್ ದೆಹಲಿಯಲ್ಲಿರುವ ಅಧಿಕೃತ ನಿವಾಸವನ್ನು ಖಾಲಿ ಮಾಡಿದ್ದಾರೆ. ರಾಹುಲ್ ಗಾಂಧಿ ಮತ್ತು ಸಹೋದರಿ, ಕಾಂಗ್ರೆಸ್ (Congress) ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಅವರು ಶುಕ್ರವಾರ ಬೆಳಗ್ಗೆ ಎರಡು ಭಾರಿ ಈ ಬಂಗ್ಲೆಗೆ ಭೇಟಿ ನೀಡಿದ್ದಾರೆ. ರಾಹುಲ್ ಗಾಂಧಿ ಅವರು ಇಂದು ಮೂರು ಗಂಟೆಗೆ ಬಂಗ್ಲೆಯ ಕೀ ಹಸ್ತಾಂತರಿಸುವ ಸಾಧ್ಯತೆ ಇದೆ. 12 ತುಘ್ಲಕ್ ಲೇನ್​​ನಲ್ಲಿರುವ ಬಂಗ್ಲೆಯನ್ನು ಏಪ್ರಿಲ್ 22ರೊಳಗೆ ಖಾಲಿ ಮಾಡಬೇಕು ಎಂದು ಲೋಕಸಭಾ ಹೌಸಿಂಗ್ ಕಮಿಟಿಯ ಅಧ್ಯಕ್ಷ ಬಿಜೆಪಿ ಸಂಸದ ಸಿಆರ್ ಪಾಟೀಲ್ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದರು. 2005ರಿಂದ ರಾಹುಲ್ ಇಲ್ಲಿ ವಾಸವಾಗಿದ್ದಾರೆ. ಪ್ರೋಟೊಕಾಲ್ ಪ್ರಕಾರ ರಾಹುಲ್ ಈ ವಸತಿ ತೊರೆಯಬೇಕಿದೆ. ಆದಾಗ್ಯೂ ಇದು ಕೇಂದ್ರ ಸರ್ಕಾರದ ರಾಜಕೀಯ ಹಗೆತನ ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದಾರೆ.

ಅನರ್ಹಗೊಂಡ ಸಂಸದರು ಸರ್ಕಾರಿ ವಸತಿಗೆ ಅರ್ಹರಲ್ಲ ಮತ್ತು ಅವರ ಅಧಿಕೃತ ನಿವಾಸವನ್ನು ಖಾಲಿ ಮಾಡಲು ಒಂದು ತಿಂಗಳ ಅವಧಿಯನ್ನು ಪಡೆಯುತ್ತಾರೆ. ಮೇಲ್ಮನವಿ ಸಲ್ಲಿಸಲು ಗುಜರಾತ್ ನ್ಯಾಯಾಲಯ 30 ದಿನಗಳ ಕಾಲಾವಕಾಶ ನೀಡಿತ್ತು. ಈ ಮನವಿಗೆ ಶುಕ್ರವಾರ ಹಿನ್ನಡೆಯಾಗಿದೆ. ಇದರರ್ಥ ರಾಹುಲ್ ಗಾಂಧಿ ಅವರು ಸಂಸದರಾಗಿ ಮುಂದುವರಿಯಲು ಸಾಧ್ಯವಿಲ್ಲ

ಬಿಜೆಪಿ ಕೆಳ ನ್ಯಾಯಾಲಯದ ಶಿಕ್ಷೆಯನ್ನು ಎತ್ತಿಹಿಡಿಯುವ ಮೇಲ್ಮನವಿ ನ್ಯಾಯಾಲಯದ ತೀರ್ಪನ್ನು “ಗಾಂಧಿ ಕುಟುಂಬಕ್ಕೆ ಕಪಾಳಮೋಕ್ಷ” ಎಂದು ಕರೆದಿದೆ. ಕಾನೂನು ಎಲ್ಲರಿಗೂ ಸಮಾನವಾಗಿದೆ ಎಂದು ನ್ಯಾಯಾಲಯವು ಸಾಬೀತುಪಡಿಸಿದೆ. ಯಾವುದೇ ಕುಟುಂಬಕ್ಕೆಆದ್ಯತೆ ನೀಡಲಾಗುವುದಿಲ್ಲ” ಎಂದು ಹೇಳಿದೆ.

ವಯನಾಡಿನ ಮಾಜಿ ಸಂಸದರು ತಮ್ಮ ಲೋಕಸಭಾ ಸದಸ್ಯತ್ವವನ್ನು ಉಳಿಸಿಕೊಳ್ಳಲು ಸೂರತ್ ನ್ಯಾಯಾಲಯದ ಆದೇಶದ ವಿರುದ್ಧ ಈಗ ಗುಜರಾತ್ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ.

ಇದನ್ನೂ ಓದಿ: ಪೂಂಚ್‌ನಲ್ಲಿ ಉಗ್ರರ ದಾಳಿಗೊಳಗಾದ ಸೇನಾ ಟ್ರಕ್ ಇಫ್ತಾರ್​​ಗಾಗಿ ಹಣ್ಣುಗಳನ್ನು ಸಾಗಿಸುತ್ತಿತ್ತು; ಈದ್ ಆಚರಿಸುವುದಿಲ್ಲ ಎಂದ ಗ್ರಾಮ

ಇದಕ್ಕೂ ಮುನ್ನ ಏಪ್ರಿಲ್ 3 ರಂದು ಸೂರತ್ ಸೆಷನ್ಸ್ ಕೋರ್ಟ್ ಕಾಂಗ್ರೆಸ್ ನಾಯಕನಿಗೆ ಜಾಮೀನು ನೀಡಿತು, ಅವರು ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಮೇಲ್ಮನವಿ ಸಲ್ಲಿಸಿದ್ದರು.

ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯವಾದ ಗುಜರಾತ್‌ನ ಸೂರತ್‌ನ ನ್ಯಾಯಾಲಯವು 52 ವರ್ಷದ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಘೋಷಿಸಿತು. 2019 ರ ಮಾನನಷ್ಟ ಮೊಕದ್ದಮೆಯಲ್ಲಿ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಎಲ್ಲ ಕಳ್ಳರ ಸರ್ ನೇಮ್ ಮೋದಿ ಎಂದೇ ಯಾಕಿದೆ ಎಂದು ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:41 pm, Sat, 22 April 23