2020ರಿಂದ ರಾಹುಲ್ ಗಾಂಧಿ 113 ಬಾರಿ ಭದ್ರತಾ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ: ಸಿಆರ್‌ಪಿಎಫ್

Rahul Gandhi violated security guidelines: 2020 ರಿಂದ 113 ಉಲ್ಲಂಘನೆಗಳನ್ನು ಗಮನಿಸಲಾಗಿದ್ದು ಇದನ್ನು ಅವರಿಗೆ ತಿಳಿಸಲಾಗಿದೆ. ಭಾರತ್ ಜೋಡೋ ಯಾತ್ರೆ ದೆಹಲಿಗೆ ಪ್ರವೇಶಿಸಿದಾಗ ರಾಹುಲ್ ಭದ್ರತಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ. CRPF ಈ ವಿಷಯವನ್ನು ಪ್ರತ್ಯೇಕವಾಗಿ ತೆಗೆದುಕೊಳ್ಳುತ್ತದೆ...

2020ರಿಂದ ರಾಹುಲ್ ಗಾಂಧಿ 113 ಬಾರಿ ಭದ್ರತಾ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ: ಸಿಆರ್‌ಪಿಎಫ್
ರಾಹುಲ್ ಗಾಂಧಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Dec 29, 2022 | 12:54 PM

ದೆಹಲಿ: ರಾಹುಲ್ ಗಾಂಧಿಯವರ (Rahul Gandhi) ಭದ್ರತೆಯಲ್ಲಿ ಲೋಪವಾಗಿದೆ ಎಂದು ಆರೋಪಿಸಿ ಗೃಹ ಸಚಿವ ಅಮಿತ್ ಶಾಗೆ(Amit Shah) ಕಾಂಗ್ರೆಸ್ ಪತ್ರ ಬರೆದ ಒಂದು ದಿನದ ನಂತರ, ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF), ದೆಹಲಿಯಲ್ಲಿ ನಡೆಯುತ್ತಿರುವ  ಭಾರತ್ ಜೋಡೋ ಯಾತ್ರೆ ಸೇರಿದಂತೆ 2020 ರಿಂದ ಇಲ್ಲಿಯವರೆಗೆ 113 ಸಂದರ್ಭಗಳಲ್ಲಿ ಭದ್ರತಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಿದೆ. ಅದೇ ವೇಳೆ ಈ ವಿಷಯವನ್ನು ಪ್ರತ್ಯೇಕವಾಗಿ ತೆಗೆದುಕೊಳ್ಳುವುದಾಗಿಯೂ ಪಡೆ ಹೇಳಿದೆ.ದೆಹಲಿಯಲ್ಲಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ತನ್ನ ನಾಯಕ ರಾಹುಲ್ ಗಾಂಧಿಯ ಭದ್ರತೆ ವಿಷಯದಲ್ಲಿ ರಾಜಿ ಮಾಡಿಕೊಳ್ಳಲಾಗಿದೆ. ಹೆಚ್ಚುತ್ತಿರುವ ಗುಂಪನ್ನು ನಿಯಂತ್ರಿಸಲು ಮತ್ತು Z+ ಭದ್ರತೆ ಇರುವ ವ್ಯಕ್ತಿಗೆ ಭದ್ರತೆ ನೀಡಲು ದೆಹಲಿ “ಸಂಪೂರ್ಣ” ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದ ನಂತರ ಬುಧವಾರ ತಡರಾತ್ರಿ ಸಿಆರ್‌ಪಿಎಫ್ ರೀತಿ ಪ್ರತಿಕ್ರಿಯಿಸಿದೆ. ಹಲವು ಸಂದರ್ಭಗಳಲ್ಲಿ ರಾಹುಲ್ ಗಾಂಧಿಯವರ ಕಡೆಯಿಂದ ಮಾರ್ಗಸೂಚಿಗಳ ಉಲ್ಲಂಘನೆಯನ್ನು ಗಮನಿಸಲಾಗಿದೆ ಮತ್ತು ಈ ಸಂಗತಿಯನ್ನು ಕಾಲಕಾಲಕ್ಕೆ ಅವರಿಗೆ ತಿಳಿಸಲಾಗಿದೆ” ಎಂದು ಸಿಆರ್‌ಪಿಎಫ್, ಕಾಂಗ್ರೆಸ್ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಗೆ ಪ್ರತಿಕ್ರಿಯಿಸಿರುವುದಾಗಿ ಬಲ್ಲಮೂಲಗಳು ಹೇಳಿವೆ.

ಉದಾಹರಣೆಗೆ, 2020 ರಿಂದ 113 ಉಲ್ಲಂಘನೆಗಳನ್ನು ಗಮನಿಸಲಾಗಿದ್ದು ಇದನ್ನು ಅವರಿಗೆ ತಿಳಿಸಲಾಗಿದೆ. ಭಾರತ್ ಜೋಡೋ ಯಾತ್ರೆ ದೆಹಲಿಗೆ ಪ್ರವೇಶಿಸಿದಾಗ ರಾಹುಲ್ ಭದ್ರತಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ. CRPF ಈ ವಿಷಯವನ್ನು ಪ್ರತ್ಯೇಕವಾಗಿ ತೆಗೆದುಕೊಳ್ಳುತ್ತದೆ ಎಂದು ಅದು ಹೇಳಿದೆ.ಅದೇ ವೇಳೆ ಮಾರ್ಗಸೂಚಿಗಳ ಪ್ರಕಾರ ರಾಹುಲ್ ಗಾಂಧಿ ಅವರಿಗೆ ಸಂಪೂರ್ಣ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ಪಡೆ ಹೇಳಿದೆ.

ಇದನ್ನೂ ಓದಿ:Rahul Gandhi: ನನ್ನ ಹೆಂಡತಿಯಾಗುವವಳು ಹೇಗಿರಬೇಕೆಂದರೆ…; ಜೀವನ ಸಂಗಾತಿ ಬಗ್ಗೆ ಮಾತಾಡಿದ ರಾಹುಲ್ ಗಾಂಧಿ

“ರಾಹುಲ್ ಭೇಟಿ ಸಮಯದಲ್ಲಿ ಸಿಆರ್‌ಪಿಎಫ್ ಮಾರ್ಗಸೂಚಿಗಳ ಪ್ರಕಾರ ರಾಜ್ಯ ಪೊಲೀಸ್ ಮತ್ತು ಭದ್ರತಾ ಏಜೆನ್ಸಿಗಳ ಸಮನ್ವಯದಲ್ಲಿ ಅಗತ್ಯವಿರುವ ಭದ್ರತಾ ವ್ಯವಸ್ಥೆಗಳನ್ನು ಮಾಡುತ್ತಿದೆ. ಬೆದರಿಕೆಯ ಮೌಲ್ಯಮಾಪನದ ಆಧಾರದ ಮೇಲೆ ಸಲಹೆಗಳನ್ನು ಗೃಹ ಸಚಿವಾಲಯದಿಂದ ರಾಜ್ಯ ಸರ್ಕಾರಗಳು ಸೇರಿದಂತೆ ಎಲ್ಲಾ ಅಧಿಕಾರಿಗಳಿಗೆ ನೀಡಲಾಗಿದೆ. ಪ್ರತಿ ಭೇಟಿಗೆ ಮುಂಗಡ ಭದ್ರತಾ ಸಂಪರ್ಕವನ್ನು (ASL) ಸಹ ಕೈಗೊಳ್ಳಲಾಗುತ್ತದೆ” ಎಂದು ಸಿಆರ್ ಪಿಎಫ್ ಹೇಳಿದೆ.

ಡಿಸೆಂಬರ್ 23, 2022 ರ ಭಾರತ್ ಜೋಡೋ ಪಾದಯಾತ್ರೆ ದೆಹಲಿ ಪ್ರವೇಶಿಸಿತ್ತು. ಆಗ ಎಲ್ಲಾ ಮಧ್ಯಸ್ಥಗಾರರನ್ನು ಒಳಗೊಂಡ ಮುಂಗಡ ಭದ್ರತಾ ಸಂಪರ್ಕವನ್ನು ಡಿಸೆಂಬರ್ 22, 2022 ರಂದು ನಡೆಸಲಾಯಿತು ಎಂದು ಸಿಆರ್‌ಪಿಎಫ್ ಹೇಳಿದೆ. ಎಲ್ಲಾ ಭದ್ರತಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗಿದೆ ಮತ್ತು ಸಾಕಷ್ಟು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ, ಭದ್ರತೆ ಇರುವವರೇ ಸ್ವತಃ ಸೂಚಿಸಿದ ಭದ್ರತಾ ಮಾರ್ಗಸೂಚಿಗಳಿಗೆ ಬದ್ಧವಾಗಿದ್ದಾಗ ಮಾತ್ರ ರಕ್ಷಕರಿಗಾಗಿ ಮಾಡಿದ ಭದ್ರತಾ ವ್ಯವಸ್ಥೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ ಎಂದು ಸಿಆರ್‌ಪಿಎಫ್ ತನ್ನ ಉತ್ತರದಲ್ಲಿ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:49 pm, Thu, 29 December 22

ನಾನ್ಯಾಕೆ ಬೇಡವಾಗಿದ್ದೇನೆಂದು ಕುಮಾರಸ್ವಾಮಿಯೇ ಹೇಳಬೇಕು: ದೇವೇಗೌಡ
ನಾನ್ಯಾಕೆ ಬೇಡವಾಗಿದ್ದೇನೆಂದು ಕುಮಾರಸ್ವಾಮಿಯೇ ಹೇಳಬೇಕು: ದೇವೇಗೌಡ
ಜಾಗೃತಿ ಅಭಿಯಾನಕ್ಕಾಗಿ ವಿಜಯೇಂದ್ರ 3 ತಂಡಗಳನ್ನು ರಚಿಸಿದ್ದಾರೆ: ಯಡಿಯೂರಪ್ಪ
ಜಾಗೃತಿ ಅಭಿಯಾನಕ್ಕಾಗಿ ವಿಜಯೇಂದ್ರ 3 ತಂಡಗಳನ್ನು ರಚಿಸಿದ್ದಾರೆ: ಯಡಿಯೂರಪ್ಪ
ನಂಬಿಕೆಗಳ ಮಹಾ ತರ್ಕ, ಲೆಕ್ಕಚಾರ ಮಾಡಲು ಬಂದ ಸುದೀಪ್
ನಂಬಿಕೆಗಳ ಮಹಾ ತರ್ಕ, ಲೆಕ್ಕಚಾರ ಮಾಡಲು ಬಂದ ಸುದೀಪ್
ವಕ್ಫ್ ಭೂವಿವಾದ; ಬಿಜೆಪಿಯ ಪ್ರಸ್ತಾಪಿತ ಜಾಗೃತಿ ಜಾಥಾಗೆ ಸಮನ್ವಯತೆಯ ಕೊರತೆ
ವಕ್ಫ್ ಭೂವಿವಾದ; ಬಿಜೆಪಿಯ ಪ್ರಸ್ತಾಪಿತ ಜಾಗೃತಿ ಜಾಥಾಗೆ ಸಮನ್ವಯತೆಯ ಕೊರತೆ
ರೌಡಿಶೀಟರ್ ಸ್ನೇಹಮಯಿ ಕೃಷ್ಣರನ್ನು ಗಡಿಪಾರು ಮಾಡುವಂತೆ ದೂರಿನಲ್ಲಿ ಕೋರಿಕೆ
ರೌಡಿಶೀಟರ್ ಸ್ನೇಹಮಯಿ ಕೃಷ್ಣರನ್ನು ಗಡಿಪಾರು ಮಾಡುವಂತೆ ದೂರಿನಲ್ಲಿ ಕೋರಿಕೆ
ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವುದು ಹೊಸದೇನಲ್ಲ: ಜಮೀರ್ ಅಹ್ಮದ್
ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವುದು ಹೊಸದೇನಲ್ಲ: ಜಮೀರ್ ಅಹ್ಮದ್
ಜಮೀರ್ ಪದಬಳಕೆ ವಿಷಯವನ್ನು ಶಿವಕುಮಾರ್ ನೋಡಿಕೊಳ್ಳುತ್ತಾರೆ: ಪರಮೇಶ್ವರ್
ಜಮೀರ್ ಪದಬಳಕೆ ವಿಷಯವನ್ನು ಶಿವಕುಮಾರ್ ನೋಡಿಕೊಳ್ಳುತ್ತಾರೆ: ಪರಮೇಶ್ವರ್
ಸಂಜು ಸಿಕ್ಸರ್​ಗೆ ಮಹಿಳೆ ಕಣ್ಣೀರು: ಕ್ಷಮೆ ಕೇಳಿದ ಸ್ಯಾಮ್ಸನ್
ಸಂಜು ಸಿಕ್ಸರ್​ಗೆ ಮಹಿಳೆ ಕಣ್ಣೀರು: ಕ್ಷಮೆ ಕೇಳಿದ ಸ್ಯಾಮ್ಸನ್
ಜಮೀರ್ ಮಾತಾಡಿದ್ದು ತಪ್ಪು ಎಂದು ಕೊನೆಗೂ ಅಂಗೀಕರಿಸಿದ ಡಿಕೆ ಶಿವಕುಮಾರ್
ಜಮೀರ್ ಮಾತಾಡಿದ್ದು ತಪ್ಪು ಎಂದು ಕೊನೆಗೂ ಅಂಗೀಕರಿಸಿದ ಡಿಕೆ ಶಿವಕುಮಾರ್
ಧೋನಿ ಸಂಪ್ರದಾಯ ಮುಂದುವರಿಸಿದ ಸೂರ್ಯಕುಮಾರ್ ಯಾದವ್
ಧೋನಿ ಸಂಪ್ರದಾಯ ಮುಂದುವರಿಸಿದ ಸೂರ್ಯಕುಮಾರ್ ಯಾದವ್