Lakshwadeep ಕಠಿಣ ನಿಯಮಗಳು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತವೆ; ಲಕ್ಷದ್ವೀಪದಲ್ಲಿ ಕೇಂದ್ರದ ಹಸ್ತಕ್ಷೇಪ ಬಯಸಿದ ರಾಹುಲ್ ಗಾಂಧಿ

Rahul Gandhi: ಇತ್ತೀಚಿನ ಸುಧಾರಣೆಗಳನ್ನು ಕಠಿಣ ಎಂದು ಕರೆದ ರಾಹುಲ್ ಗಾಂಧಿ, ಇತ್ತೀಚಿನ ನಿಯಮಗಳು ಭಿನ್ನಾಭಿಪ್ರಾಯವನ್ನು ದಂಡನೆಗೆ ಗುರಿಮಾಡುತ್ತದೆ ಮತ್ತು ತಳಮಟ್ಟದ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತವೆ ಎಂದು ಹೇಳಿದರು

Lakshwadeep ಕಠಿಣ ನಿಯಮಗಳು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತವೆ; ಲಕ್ಷದ್ವೀಪದಲ್ಲಿ ಕೇಂದ್ರದ ಹಸ್ತಕ್ಷೇಪ ಬಯಸಿದ ರಾಹುಲ್ ಗಾಂಧಿ
ರಾಹುಲ್ ಗಾಂಧಿ
Follow us
ರಶ್ಮಿ ಕಲ್ಲಕಟ್ಟ
|

Updated on: May 27, 2021 | 3:51 PM

ದೆಹಲಿ: ಮುಸ್ಲಿಂ ಪ್ರಾಬಲ್ಯದ ದ್ವೀಪವಾದ ಲಕ್ಷದ್ವೀಪದಲ್ಲಿ ಹೊಸ ಆಡಳಿತಗಾರರು ಗೋಮಾಂಸ ನಿಷೇಧ, ಮದ್ಯ ಮಾರಾಟಕ್ಕೆ ಅನುಮತಿ ನೀಡುವ ಇತ್ತೀಚಿನ ಸುಧಾರಣೆ ಕ್ರಮ ನೀತಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ  ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಲಕ್ಷದ್ವೀಪದಲ್ಲಿ ಕ್ಯಾರೆಂಟೈನ್ ನಿಯಮಗಳನ್ನು ದುರ್ಬಲಗೊಳಿಸುವುದರಿಂದ ಕೊವಿಡ್ ಪ್ರಕರಣಗಳಲ್ಲಿ ತೀವ್ರ ಏರಿಕೆ ಉಂಟಾಗಿದೆ ಎಂದು ಗಾಂಧಿ ಹೇಳಿದ್ದಾರೆ. ಆಡಳಿತವು ಮೀನುಗಾರರಿಂದ ನಿರ್ಮಿಸಿದ್ದ ಶೆಡ್ ಗಳನ್ನು ನೆಲಸಮಗೊಳಿಸಿತು, ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಿತು ಎಂದು ರಾಹುಲ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇತ್ತೀಚಿನ ಸುಧಾರಣೆಗಳನ್ನು ಕಠಿಣ ಎಂದು ಕರೆದ ರಾಹುಲ್ ಗಾಂಧಿ, ಇತ್ತೀಚಿನ ನಿಯಮಗಳು ಭಿನ್ನಾಭಿಪ್ರಾಯವನ್ನು ದಂಡನೆಗೆ ಗುರಿಮಾಡುತ್ತದೆ ಮತ್ತು ತಳಮಟ್ಟದ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತವೆ ಎಂದು ಹೇಳಿದರು. “ಲಕ್ಷದ್ವೀಪದ ಜನರು ತಮ್ಮ ಜೀವನ ವಿಧಾನವನ್ನು ಗೌರವಿಸುವ ಮತ್ತು ಅವರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುವ ಅಭಿವೃದ್ಧಿಗೆ ಅರ್ಹರಾಗಿದ್ದಾರೆ” ಎಂದು ಅವರು ಹೇಳಿದರು.

ಕಳೆದ ವರ್ಷ ಲಕ್ಷದ್ವೀಪದ ನಿರ್ವಾಹಕರಾಗಿ ಅಧಿಕಾರ ವಹಿಸಿಕೊಂಡಾಗಿನಿಂದ, ಪ್ರಫುಲ್ ಪಟೇಲ್ ಅವರು ಲಕ್ಷದ್ವೀಪದಲ್ಲಿ ಸ್ಥಳೀಯ ಆಡಳಿತದಲ್ಲಿ ಬದಲಾವಣೆಗಳನ್ನು ಮಾಡುತ್ತಿದ್ದು, ದೇಶಾದ್ಯಂತ ಆಕ್ರೋಶಕ್ಕೆ ನಾಂದಿ ಹಾಡಿದ್ದಾರೆ. ಹೊಸ ಸುಧಾರಣೆಗಳಲ್ಲಿ ಸಾಮಾಜಿಕ ವಿರೋಧಿ ಚಟುವಟಿಕೆಗಳ ನಿಯಂತ್ರಣ ಮಸೂದೆ 2021, ಅಥವಾ ಅಪರಾಧದ ಪ್ರಮಾಣವು ಈಗಾಗಲೇ ತೀರಾ ಕಡಿಮೆ ಇರುವ ದ್ವೀಪ ಪ್ರದೇಶದಲ್ಲಿ ಗೂಂಡಾ ಕಾಯ್ದೆಯನ್ನು ಅನುಷ್ಠಾನಗೊಳಿಸುವುದು ಸೇರಿದೆ.

ಶಿಕ್ಷಣ, ಆರೋಗ್ಯ ರಕ್ಷಣೆ, ಕೃಷಿ, ಪಶುಸಂಗೋಪನೆ ಮತ್ತು ಮೀನುಗಾರಿಕೆಗೆ ಸಂಬಂಧಿಸಿದಂತೆ ಚುನಾಯಿತ ಜಿಲ್ಲಾ ಪಂಚಾಯತ್‌ನ ಸ್ಥಳೀಯ ಆಡಳಿತ ಅಧಿಕಾರಗಳ ನಿಯಂತ್ರಣವನ್ನೂ ಸರ್ಕಾರ ವಹಿಸಿಕೊಂಡಿದೆ.

ಹೊಸ ಪ್ರಸ್ತಾಪವು ಪಂಚಾಯತ್ ನಿಯಮಗಳಲ್ಲಿ ಬದಲಾವಣೆಗಳನ್ನು ತರುತ್ತದೆ ಮತ್ತು ಎರಡು ಮಕ್ಕಳಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಯಾವುದೇ ವ್ಯಕ್ತಿಯು ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರಾಗುವಂತೆ ಮಾಡುತ್ತದೆ. ಪ್ರವಾಸೋದ್ಯಮವನ್ನು ಉತ್ತೇಜಿಸಲು ಮುಸ್ಲಿಂ ಜನಸಂಖ್ಯೆಯ ಕಾರಣದಿಂದಾಗಿ ಮದ್ಯಮುಕ್ತ ವಲಯವಾದ ದ್ವೀಪದಲ್ಲಿ ಮದ್ಯದಂಗಡಿಗಳನ್ನು ತೆರೆಯಲು ಅವರು ಅನುಮತಿ ನೀಡಿದರು. ಗೋಮಾಂಸ ನಿಷೇಧ ಮತ್ತು ಅಂಗನವಾಡಿ ಮಕ್ಕಳ ಮೆನುವಿನಿಂದ ಮಾಂಸಾಹಾರಿ ಆಹಾರವನ್ನು ತೆಗೆದುಹಾಕುವುದು ಮೊದಲಾದ ಕ್ರಮಗಳನ್ನು ಕೈಗೊಳ್ಳಲು ಫ್ರಫುಲ್ ಪಟೇಲ್ ಮುಂದಾಗಿದ್ದಾರೆ.

ಈ ನೀತಿಯು ನೆಲದ ಸಂಸ್ಕೃತಿಗೆ ವಿರುದ್ಧವಾಗಿದೆ ಎಂದು ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದಾಗ್ಯೂ, ಸ್ಥಳೀಯ ರಾಜಕಾರಣಿಗಳನ್ನು ಒಳಗೊಂಡ “ಭ್ರಷ್ಟಾಚಾರಗಳನ್ನು” ಕೊನೆಗೊಳಿಸಲು ಪಟೇಲ್ ಮಾಡುತ್ತಿರುವ ಪ್ರಯತ್ನಗಳು ಇವು ಎಂದು ಈ ಟೀಕೆಗೆ ಕೇಂದ್ರ ಪ್ರತಿಕ್ರಿಯಿಸಿದೆ.

ಇದನ್ನೂ ಓದಿ: Save Lakshadweep ಲಕ್ಷದ್ವೀಪದಲ್ಲಿ ಬೀಫ್ ನಿಷೇಧ, ಗೂಂಡಾ ಕಾಯ್ದೆ, ಮದ್ಯ ಮಾರಾಟಕ್ಕೆ ಅನುಮತಿ: ಆಡಳಿತಾಧಿಕಾರಿ ಪ್ರಫುಲ್ ಪಟೇಲ್ ನಿರ್ಧಾರಕ್ಕೆ ಜನರ ಆಕ್ರೋಶ

Lakshadweep ಲಕ್ಷದ್ವೀಪದಲ್ಲಿ ಪ್ರಫುಲ್ ಪಟೇಲ್ ಅವರ ಸುಧಾರಣಾ ಕ್ರಮಗಳಿಗೆ ವಿರೋಧ: ಇಂದು ಸರ್ವ ಪಕ್ಷ ಸಭೆ

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ