AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ್ ಯಾತ್ರೆ ಜನವರಿ 14ರಂದು ಆರಂಭ

ಕಳೆದ ವರ್ಷದ ಭಾರತ್ ಜೋಡೋ ಯಾತ್ರೆಯಿಂದ ಉಂಟಾದ ಪರಿಣಾಮವನ್ನು ಮರುಸೃಷ್ಟಿಸಲು "ಜೋಡೋ" ಪದವನ್ನು ಸೇರಿಸಲು ನಿರ್ಧರಿಸಿದ್ದೇವೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. ರಾಹುಲ್ ಗಾಂಧಿಯವರ ಯಾತ್ರೆಯ ಕಲ್ಪನೆಯು ನ್ಯಾಯವಾಗಿದೆ. ಭಾರತದ ಜನರಿಗೆ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ನ್ಯಾಯವನ್ನು ಖಚಿತಪಡಿಸುವುದು ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.

ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ್ ಯಾತ್ರೆ ಜನವರಿ 14ರಂದು ಆರಂಭ
ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
|

Updated on: Jan 04, 2024 | 5:59 PM

Share

ದೆಹಲಿ ಜನವರಿ 04: ತಿಂಗಳುಗಟ್ಟಲೆ ಜನಾಂಗೀಯ ಹಿಂಸಾಚಾರದ ನಂತರವೂ ಸಹಜ ಸ್ಥಿತಿಗೆ ಬರಲು ಹೆಣಗಾಡುತ್ತಿರುವ ಈಶಾನ್ಯ ರಾಜ್ಯಕ್ಕೆ ಮಣಿಪುರದಿಂದ (Manipur) ರಾಹುಲ್ ಗಾಂಧಿಯವರ (Rahul Gandhi) ಭಾರತ್ ಜೋಡೋ ಯಾತ್ರೆ 2.0 ಜನವರಿ 14 ರಂದು ಆರಂಭವಾಗಲಿದೆ. 66 ದಿನಗಳ 6,700-ಕಿಮೀ ಕ್ರಮಿಸಲಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆ(Bharat Jodo Nyaya Yatra) ಎಂಬ ಹೆಸರಿನ  ಈ ಯಾತ್ರೆ ಮಹಾತ್ಮ ಗಾಂಧಿಯವರ ಜನ್ಮಸ್ಥಳವಾದ ಗುಜರಾತ್‌ನ ಪೋರಬಂದರ್‌ನಲ್ಲಿ ಮುಕ್ತಾಯಗೊಳ್ಳಲಿದೆ.ಇದು 15 ರಾಜ್ಯಗಳು ಮತ್ತು 100 ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿದೆ. ಪಕ್ಷವು ಆರಂಭದಲ್ಲಿ ಅರುಣಾಚಲ ಪ್ರದೇಶದಿಂದ ಯಾತ್ರೆಯನ್ನು ಪ್ರಾರಂಭಿಸಲು ಯೋಜಿಸಿತ್ತು.

ಆರಂಭದಂತೆಯೇ, ಎರಡನೇ ಹಂತದ ಮೆರವಣಿಗೆಯ ಹೆಸರನ್ನು ಬದಲಾಯಿಸಲಾಯಿತು. ಕಳೆದ ವರ್ಷದ ಭಾರತ್ ಜೋಡೋ ಯಾತ್ರೆಯಿಂದ ಉಂಟಾದ ಪರಿಣಾಮವನ್ನು ಮರುಸೃಷ್ಟಿಸಲು “ಜೋಡೋ” ಪದವನ್ನು ಸೇರಿಸಲು ನಿರ್ಧರಿಸಿದ್ದೇವೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

“ರಾಹುಲ್ ಗಾಂಧಿಯವರ ಯಾತ್ರೆಯ ಕಲ್ಪನೆಯು ನ್ಯಾಯವಾಗಿದೆ. ಭಾರತದ ಜನರಿಗೆ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ನ್ಯಾಯವನ್ನು ಖಚಿತಪಡಿಸುವುದು ಉದ್ದೇಶವಾಗಿದೆ” ಎಂದು ಜೈರಾಮ್ ರಮೇಶ್ ಹೇಳಿದರು. ಭಾರತ್ ಜೋಡೋ ಕನ್ಯಾಕುಮಾರಿ-ಶ್ರೀನಗರ ಯಾತ್ರೆಯು ಭಾರತವನ್ನು ದಕ್ಷಿಣದಿಂದ ಉತ್ತರಕ್ಕೆ ಸಂಚರಿಸಿದ್ದು, ಹೆಚ್ಚಿನ ಅಭಿಮಾನವನ್ನು ಹುಟ್ಟುಹಾಕಿದೆ ಎಂದು ಕಾಂಗ್ರೆಸ್ ಹೇಳಿದೆ. ಇದು ಗಂಭೀರ ರಾಜಕೀಯ ನಾಯಕನಾಗಿ ಗಾಂಧಿಯೆಡೆಗಿನ ಅನೇಕರ ದೃಷ್ಟಿಕೋನವನ್ನು ಬದಲಿಸಿದೆ.

ಭಾರತ್ ಜೋಡೋ ನ್ಯಾಯ್ ಯಾತ್ರೆಯು ಇಂಫಾಲ್‌ನಿಂದ ಮಧ್ಯಾಹ್ನ 12.30 ಕ್ಕೆ ಪ್ರಾರಂಭವಾಗಲಿದೆ. ಇದು ಮಣಿಪುರ, ನಾಗಾಲ್ಯಾಂಡ್, ಅಸ್ಸಾಂ, ಅರುಣಾಂಚಲ್ ಪ್ರದೇಶ, ಮೇಘಾಲಯ ಮೂಲಕ ಹಾದುಹೋಗುತ್ತದೆ. ಇದು ಮಧ್ಯ ಭಾರತವನ್ನು ತಲುಪುವ ಮೊದಲು ಬಂಗಾಳವನ್ನು ತಲುಪುತ್ತದೆ.

ಕಳೆದ ಬಾರಿಯಂತೆ ಯಾತ್ರೆಯು ಸಂಪೂರ್ಣವಾಗಿ ಕಾಲ್ನಡಿಗೆಯಲ್ಲಿ ಇರುವುದಿಲ್ಲ. ಪ್ರಯಾಣದ ಭಾಗಗಳಿಗೆ, ಪಕ್ಷವು ಬಸ್‌ಗಳನ್ನು ಬಳಸುತ್ತದೆ ಎಂದು ಜೈರಾಮ್ ರಮೇಶ್ ಸುದ್ದಿಗಾರರಿಗೆ ತಿಳಿಸಿದರು. ಪಕ್ಷದ ಹಿರಿಯ ನಾಯಕರ ಆರೋಗ್ಯದ ಕಾಳಜಿಯಂತೆ ಸಾರ್ವತ್ರಿಕ ಚುನಾವಣೆಯ ಸಮಯದ ನಿರ್ಬಂಧದಿಂದಾಗಿ ಬದಲಾವಣೆಯಾಗಿದೆ. ನಾವು ಇಂಡಿಯಾ ಮೈತ್ರಿಕೂಟದ ಎಲ್ಲಾ ಪಕ್ಷಗಳ ನಾಯಕರು, ಅವರ ಬೆಂಬಲಿಗರು, ಸಾರ್ವಜನಿಕರು ಮತ್ತು ಎನ್‌ಜಿಒಗಳನ್ನು ಯಾತ್ರೆಯಲ್ಲಿ ಭಾಗವಹಿಸಲು ಆಹ್ವಾನಿಸುತ್ತಿದ್ದೇವೆ” ಎಂದು ರಮೇಶ್ ಹೇಳಿದ್ದಾರೆ.

ಇದನ್ನೂ ಓದಿ: ನೀನಾ, ನಾನಾ ನೋಡೇ ಬಿಡೋಣ, ಕುಸ್ತಿಪಟುಗಳ ಜತೆ ಅಖಾಡಕ್ಕಿಳಿದ ರಾಹುಲ್ ಗಾಂಧಿ

ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷವನ್ನು ಆಹ್ವಾನಿಸಲಾಗುತ್ತದೆಯೇ ಎಂದು ಕೇಳಿದಾಗ, ರಮೇಶ್ ಅವರು ಇಂಡಿಯಾ ಬಣದ ಭಾಗವಾಗಿರುವ ಎಲ್ಲಾ ಪಕ್ಷಗಳನ್ನು ಆಹ್ವಾನಿಸಲಾಗಿದೆ. ಎಎಪಿ ಮತ್ತು ಅರವಿಂದ್ ಕೇಜ್ರಿವಾಲ್ ಇಂಡಿಯಾ ಒಕ್ಕೂಟದ ಭಾಗವೇ ಆಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಪ್ರತಿಪಕ್ಷದ ಎಲ್ಲಾ ಮುಖ್ಯಮಂತ್ರಿಗಳು ಇಂಫಾಲ್‌ನಲ್ಲಿ ಯಾತ್ರೆಯ ಆರಂಭ ವೇಳೆ ಉಪಸ್ಥಿತರಿರುತ್ತಾರೆ ಎಂದು ಕಾಂಗ್ರೆಸ್ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?