ಬಾಂಗ್ಲಾದೇಶದ ಅಕ್ರಮ ವಲಸಿಗರು ಭಾರತಕ್ಕೆ ಬರಲಿ; ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ವಿವಾದಾತ್ಮಕ ಹೇಳಿಕೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಆಪ್ತ ಹಾಗೂ ಹಿರಿಯ ಕಾಂಗ್ರೆಸ್ ನಾಯಕರಾದ ಸ್ಯಾಮ್ ಪಿತ್ರೋಡಾ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿ ಸುದ್ದಿಯಲ್ಲಿದ್ದಾರೆ. ಒಂದುವೇಳೆ ಬಾಂಗ್ಲಾದೇಶದ ವಲಸಿಗರು ಭಾರತದಲ್ಲಿ ನೆಲೆಸಲು ಬಯಸಿದರೆ ಅದು ಅಕ್ರಮವಾಗಿದ್ದರೂ ಅವರು ಬರಲು ಅಡ್ಡಿಯಿಲ್ಲ. ಅಕ್ರಮ ವಲಸೆಯ ಸಮಸ್ಯೆಯನ್ನು ಪರಿಹರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಸ್ಯಾಮ್ ಪಿತ್ರೋಡಾ ಟೀಕಿಸಿದ್ದಾರೆ.

ಬಾಂಗ್ಲಾದೇಶದ ಅಕ್ರಮ ವಲಸಿಗರು ಭಾರತಕ್ಕೆ ಬರಲಿ; ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ವಿವಾದಾತ್ಮಕ ಹೇಳಿಕೆ
Sam Pitroda
Follow us
ಸುಷ್ಮಾ ಚಕ್ರೆ
|

Updated on: Jan 27, 2025 | 7:50 PM

ನವದೆಹಲಿ: ಕಾಂಗ್ರೆಸ್​ನ ಹಿರಿಯ ನಾಯಕ ಸ್ಯಾಮ್ ಪಿತ್ರೋಡಾ ಅಕ್ರಮ ವಲಸಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿದ್ದಾರೆ. ಬಾಂಗ್ಲಾದೇಶಿ ವಲಸಿಗರು ಒಂದುವೇಳೆ ಭಾರತಕ್ಕೆ ಬರಲು ಬಯಸಿದರೆ, ಅದು ಅಕ್ರಮವಾಗಿದ್ದರೂ ಸಹ ಅವರು ಬರಲಿ. ನಾವು ಎಲ್ಲರನ್ನೂ ಸೇರಿಸಿಕೊಳ್ಳಬೇಕು. ನಮಗೆ ಅದರಿಂದ ಸ್ವಲ್ಪ ಕಷ್ಟವಾದರೂ ಪರವಾಗಿಲ್ಲ ಎಂದಿರುವ ಸ್ಯಾಮ್ ಪಿತ್ರೋಡಾ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ನಡುವೆ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಆಪ್ತ ಸಹಾಯಕ ಸ್ಯಾಮ್ ಪಿತ್ರೋಡಾ, ಅಕ್ರಮ ವಲಸಿಗರು ಭಾರತದಲ್ಲಿ ನೆಲೆಸಬೇಕೆಂದು ಪ್ರತಿಪಾದಿಸಿದರು. ಈ ಸಮಸ್ಯೆಯನ್ನು ಪರಿಹರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು. ಬಾಂಗ್ಲಾದೇಶದ ವಲಸಿಗರು ಇಲ್ಲಿಗೆ ಬರಲು ಬಯಸಿದರೆ ಅಕ್ರಮವಾಗಿಯಾದರೂ ಅವರು ಬರಲಿ. ನಾವು ಎಲ್ಲರನ್ನೂ ಸೇರಿಸಿಕೊಳ್ಳಬೇಕು. ಅದರಿಂದ ನಾವು ಸ್ವಲ್ಪ ಅನುಭವಿಸಬೇಕಾದರೂ ಪರವಾಗಿಲ್ಲ ಎಂದು ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ.

ಇದನ್ನೂ ಓದಿ: ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ಹಳೇ ದೋಸ್ತಿಯ ರಾಜಕೀಯ ಗುಟ್ಟು ಬಿಚ್ಚಿಟ್ಟ ರೆಡ್ಡಿ

ಅಕ್ರಮ ವಲಸಿಗರ ವಿರುದ್ಧ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಕಠಿಣ ಕ್ರಮವನ್ನು ಟೀಕಿಸಿದ ಸ್ಯಾಮ್ ಪಿತ್ರೋಡಾ, ಸರ್ಕಾರವು ವಲಸೆಯನ್ನು ನಿಭಾಯಿಸುವ ಬದಲು ಜಾಗತಿಕ ತಾಪಮಾನದ ಏರಿಕೆಯಂತಹ ಸಾರ್ವಜನಿಕರಿಗೆ ಮುಖ್ಯವಾದ ಸಮಸ್ಯೆಗಳನ್ನು ಪರಿಹರಿಸುವತ್ತ ಹೆಚ್ಚು ಗಮನಹರಿಸಬೇಕು ಎಂದು ಒತ್ತಿ ಹೇಳಿದ್ದಾರೆ.

ಸ್ಯಾಮ್ ಪಿತ್ರೋಡಾ ಈ ರೀತಿ ವಿವಾದಕ್ಕೆ ಸಿಲುಕಿದ್ದು ಇದೇ ಮೊದಲಲ್ಲ. ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ “ಈಶಾನ್ಯ ಜನರು ಚೀನಿಯರಂತೆ ಕಾಣುತ್ತಾರೆ, ಪಶ್ಚಿಮದ ಜನರು ಅರಬ್ಬರಂತೆ ಕಾಣುತ್ತಾರೆ, ಉತ್ತರದ ಜನರು ಬಿಳಿಯರಂತೆ ಕಾಣುತ್ತಾರೆ ಮತ್ತು ದಕ್ಷಿಣ ಭಾಗದ ಜನರು ಆಫ್ರಿಕನ್ನರಂತೆ ಕಾಣುತ್ತಾರೆ” ಎಂದು ಜನಾಂಗೀಯ ಹೇಳಿಕೆ ನೀಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಡಿಗೆ ಮನೆಯಲ್ಲಿದ್ದೇನೆ, ಸಂಭಾವನೆಯಿಂದ ಸಾಲ ತೀರಿಸ್ತೀನಿ: ತ್ರಿವಿಕ್ರಮ್
ಬಾಡಿಗೆ ಮನೆಯಲ್ಲಿದ್ದೇನೆ, ಸಂಭಾವನೆಯಿಂದ ಸಾಲ ತೀರಿಸ್ತೀನಿ: ತ್ರಿವಿಕ್ರಮ್
ಜನಪ್ರತಿನಿಧಿಗಳು ಅಧಿಕಾರಿಗಳ ಮೇಲೆ ರೇಗುವುದು ಯಾಕೆ?
ಜನಪ್ರತಿನಿಧಿಗಳು ಅಧಿಕಾರಿಗಳ ಮೇಲೆ ರೇಗುವುದು ಯಾಕೆ?
ಬಿಜೆಪಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಬಹುದೊಡ್ಡ ಪಕ್ಷವಾಗಿ ಬೆಳೆದಿದೆ: ಸಂಸದ
ಬಿಜೆಪಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಬಹುದೊಡ್ಡ ಪಕ್ಷವಾಗಿ ಬೆಳೆದಿದೆ: ಸಂಸದ
ಹನುಮಂತುಗೆ ಹೊಡೆದರೂ ಭವ್ಯಾನ ಹೊರಗೆ ಹಾಕಲಿಲ್ಲ ಯಾಕೆ? ಮಂಜು ಹೇಳಿದ್ದೇನು?
ಹನುಮಂತುಗೆ ಹೊಡೆದರೂ ಭವ್ಯಾನ ಹೊರಗೆ ಹಾಕಲಿಲ್ಲ ಯಾಕೆ? ಮಂಜು ಹೇಳಿದ್ದೇನು?
ಜಲಮಂಡಳಿ ನಿರ್ವಹಣೆಗೆ ಹಣ ಹೊಂದಿಸಲಾಗುತ್ತಿಲ್ಲ, ದರಯೇರಿಕೆ ಅನಿವಾರ್ಯ: ಸಚಿವ
ಜಲಮಂಡಳಿ ನಿರ್ವಹಣೆಗೆ ಹಣ ಹೊಂದಿಸಲಾಗುತ್ತಿಲ್ಲ, ದರಯೇರಿಕೆ ಅನಿವಾರ್ಯ: ಸಚಿವ
ವಲಸಿಗರ ವಿಚಾರದಲ್ಲಿ ಭಾರತ ಸೂಕ್ತ ಕ್ರಮ ಕೈಗೊಳ್ಳಲಿದೆ; ಟ್ರಂಪ್ ಹೇಳಿಕೆ
ವಲಸಿಗರ ವಿಚಾರದಲ್ಲಿ ಭಾರತ ಸೂಕ್ತ ಕ್ರಮ ಕೈಗೊಳ್ಳಲಿದೆ; ಟ್ರಂಪ್ ಹೇಳಿಕೆ
ಇಕ್ಬಾಲ್ ಹುಸ್ಸೇನ್ ಹೇಳಿಕೆಗೆ ಕೌಂಟರ್ ನೀಡಿದ ಸಚಿವ ರಾಜಣ್ಣ
ಇಕ್ಬಾಲ್ ಹುಸ್ಸೇನ್ ಹೇಳಿಕೆಗೆ ಕೌಂಟರ್ ನೀಡಿದ ಸಚಿವ ರಾಜಣ್ಣ
ಕಾಂಗ್ರೆಸ್ ಪಕ್ಷ ಒಂದು ಸಿಟಿ ಬಸ್​ನಂತೆ, ಯಾರು ಬೇಕಾದರೂ ಹತ್ತಬಹುದು: ಲಾಡ್
ಕಾಂಗ್ರೆಸ್ ಪಕ್ಷ ಒಂದು ಸಿಟಿ ಬಸ್​ನಂತೆ, ಯಾರು ಬೇಕಾದರೂ ಹತ್ತಬಹುದು: ಲಾಡ್
150 ರೂ.ಗೆ ಕೆಲಸ ಮಾಡಿದ್ದ ಉಗ್ರಂ ಮಂಜು; ಬಿಗ್ ಬಾಸ್​ನಿಂದ ದೊಡ್ಡ ಸಂಭಾವನೆ
150 ರೂ.ಗೆ ಕೆಲಸ ಮಾಡಿದ್ದ ಉಗ್ರಂ ಮಂಜು; ಬಿಗ್ ಬಾಸ್​ನಿಂದ ದೊಡ್ಡ ಸಂಭಾವನೆ
ಹುಡುಗಿ ಯಾರೇ ಆದರೂ ಬಂಜಾರಾ ಸಂಪ್ರದಾಯದಂತೆ ಮದುವೆ: ಮಾರುತಿ
ಹುಡುಗಿ ಯಾರೇ ಆದರೂ ಬಂಜಾರಾ ಸಂಪ್ರದಾಯದಂತೆ ಮದುವೆ: ಮಾರುತಿ