ಹುಟ್ಟುಹಬ್ಬಕ್ಕೆ ಕರೆ ಮಾಡಿ ಶುಭಾಶಯ ಕೋರಿದ್ದಾರೆ ಅಮಿತ್ ಶಾ; ಏನೋ ವಿಶೇಷ ಇರಬೇಕು ಎಂದ ಶಶಿ ತರೂರ್

ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಹುಟ್ಟುಹಬ್ಬದ ಶುಭಾಶಯಗಳನ್ನು ಸ್ವೀಕರಿಸಿರುವುದಾಗಿ ತರೂರ್ ಹೇಳಿದ್ದಾರೆ.

ಹುಟ್ಟುಹಬ್ಬಕ್ಕೆ ಕರೆ ಮಾಡಿ ಶುಭಾಶಯ ಕೋರಿದ್ದಾರೆ ಅಮಿತ್ ಶಾ; ಏನೋ ವಿಶೇಷ ಇರಬೇಕು ಎಂದ ಶಶಿ ತರೂರ್
ಶಶಿ ತರೂರ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Mar 09, 2022 | 7:40 PM

ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah)  ಅವರಿಂದ ದೂರವಾಣಿ ಕರೆ ಮಾಡಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್(Shashi Tharoor) ಬುಧವಾರ ಹೇಳಿದ್ದಾರೆ. ಕಾಂಗ್ರೆಸ್ ನಾಯಕ ಕೇಂದ್ರ ಗೃಹ ಸಚಿವರಿಂದ ಕರೆಯನ್ನು ನಿರೀಕ್ಷಿಸಿರಲಿಲ್ಲ ಎಂಬುದು ಅವರ ಟ್ವೀಟ್​​ನಿಂದಲೇ ತಿಳಿಯುತ್ತಿದೆ. “66 ನೇ ವರ್ಷಕ್ಕೆ ಕಾಲಿಡುವುದರಲ್ಲಿ ಏನೋ ವಿಶೇಷತೆ ಇರಬೇಕು! ಒಳ್ಳೆಯ ಮಾತುಗಳಿಗೆ ಅತ್ಯಂತ ಕೃತಜ್ಞರಾಗಿರುತ್ತೇನೆ” ಎಂದು ತರೂರ್ ಟ್ವೀಟ್ ಮಾಡಿದ್ದಾರೆ.  ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಂದ ಹುಟ್ಟುಹಬ್ಬದ ಶುಭಾಶಯಗಳನ್ನು ಸ್ವೀಕರಿಸಿರುವುದಾಗಿ ತರೂರ್ ಹೇಳಿದ್ದಾರೆ. ನರೇಂದ್ರ ಮೋದಿಜಿಯವರಿಂದ ಈ ಚಿಂತನಶೀಲ ಶುಭಾಶಯಗಳನ್ನು ಸ್ವೀಕರಿಸಿ ಖುಷಿಯಾಗಿದೆ. ಅವರು ಯಾವತ್ತೂ ಈ ರೀತಿಯ ಸೌಜನ್ಯವನ್ನು ತೋರುತ್ತಾರೆ” ಎಂದು ತರೂರ್ ಟ್ವೀಟ್ ಮಾಡಿದ್ದಾರೆ.  ತರೂರ್ ಅವರಿಗೆ ಬರೆದ ಪತ್ರದಲ್ಲಿ ಪ್ರಧಾನಿ ಮೋದಿ ಅವರು ತರೂರ್ ಅವರಿಗೆ ಸಮಾಧಾನ ಮತ್ತು ಸಂತೋಷಕ್ಕಾಗಿ ಪ್ರಾರ್ಥಿಸಿದ್ದಾರೆ. “ಜನ್ಮದಿನವು ಹಿಂದಿನ ನೆನಪುಗಳನ್ನು ನೆನಪಿಸಿಕೊಳ್ಳುವ ಒಂದು ವಿಶೇಷ ಸಂದರ್ಭವಾಗಿದೆ. ಅದೇ ಸಮಯದಲ್ಲಿ, ನಮ್ಮ ಕುಟುಂಬ, ಸಮಾಜ ಮತ್ತು ರಾಷ್ಟ್ರದ ಕಡೆಗೆ ನಮ್ಮ ಕರ್ತವ್ಯಗಳನ್ನು ಹೊಸ ಉತ್ಸಾಹದಿಂದ ಪೂರೈಸಲು ಪ್ರೇರೇಪಿಸುವ ದಿನವಾಗಿದೆ” ಎಂದು ಪತ್ರದಲ್ಲಿ ಬರೆಯಲಾಗಿದೆ.

ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ ಅವರ ಜನ್ಮದಿನದಂದು ಶುಭಾಶಯ ಕೋರಿದ್ದಕ್ಕಾಗಿ ಕಾಂಗ್ರೆಸ್ ನಾಯಕ ಈ ಹಿಂದೆ ಟ್ವಿಟರ್‌ನಲ್ಲಿ ಟೀಕೆಗಳನ್ನು ಎದುರಿಸಿದ್ದರು.ತರೂರ್ ಈ ಟೀಕೆಗಳನ್ನು ಅವರು ತೀವ್ರವಾಗಿ ವಿರೋಧಿಸಿದರು ಮತ್ತು ವಿಭಿನ್ನ ರಾಜಕೀಯ ದೃಷ್ಟಿಕೋನಗಳ ಕಾರಣ ಸೌಜನ್ಯವನ್ನು ಎಂದಿಗೂ ತಪ್ಪಿಸುವುದಿಲ್ಲ ಎಂದು ಹೇಳಿದ್ದರು. “ಹೌದು, ನಾನು ಎಲ್.ಕೆ. ಅಡ್ವಾಣಿ ಮತ್ತು ನರೇಂದ್ರ ಮೋದಿಯವರ ಜನ್ಮದಿನದಂದು ಶುಭ ಹಾರೈಸುವುದನ್ನು ಮುಂದುವರಿಸಲು ಉದ್ದೇಶಿಸಿದ್ದೇನೆ. ಅದೇ ವೇಳೆ ಅವರು ರಾಜಕೀಯ ನಿಲುವುಗಳನ್ನು ನಾನು ವಿರೋಧಿಸುತ್ತೇನೆ. ನನ್ನ 40 ವರ್ಷಗಳ ಬರವಣಿಗೆ ನಾನು ನಂಬಿದ್ದನ್ನು ಸ್ಪಷ್ಟಪಡಿಸುತ್ತದೆ. ನನ್ನನ್ನು ಓದದವರು ಮಾತ್ರ ನನ್ನನ್ನು ಸಂಘಿ ಎಂದು ಕರೆಯುತ್ತಾರೆ. ಅವರಿಗಾಗಿ ನನ್ನ ಮೌಲ್ಯಗಳನ್ನು ತಿರಸ್ಕರಿಸಲಾಗುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ:Assembly Election Results 2022: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ನಾಳೆ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್