Sonia Gandhi: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ, ಅವರ ಸ್ಥಿತಿ ಸ್ಥಿರವಾಗಿದ್ದು, ತಜ್ಞರ ಮೇಲ್ವಿಚಾರಣೆಯಲ್ಲಿದ್ದಾರೆ. ಅವರು ದೀರ್ಘಕಾಲದ ಕೆಮ್ಮಿನಿಂದ ಬಳಲುತ್ತಿದ್ದಾರೆ, ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಾಗಿ ಈ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.ಸೋಮವಾರ ಸಂಜೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ನವದೆಹಲಿ, ಜನವರಿ 06: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ(Sonia Gandhi) ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ. ಸೋಮವಾರ ಸಂಜೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅವರಿಗೆ ಕೆಲವು ದಿನಗಳಿಂದ ಕೆಮ್ಮು ಕಾಣಿಸಿಕೊಂಡಿತ್ತು. ದೆಹಲಿಯಲ್ಲಿ ಮಾಲಿನ್ಯ ಹೆಚ್ಚಾದ ಹಿನ್ನೆಲೆಯಲ್ಲಿ ಕೆಮ್ಮು ಕಡಿಮೆಯಾಗುತ್ತಿರಲಿಲ್ಲ. ಹೀಗಾಗಿ ಆಸ್ಪತ್ರೆಗೆ ತೆರಳಿದ್ದಾರೆ.
ಸೋನಿಯಾ ಗಾಂಧಿಗೆ ಡಿಸೆಂಬರ್ನಲ್ಲಿ 79 ವರ್ಷ ತುಂಬಿತ್ತು. ಕೆಲವು ತಿಂಗಳ ಹಿಂದೆ, ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಫೆಬ್ರವರಿಯಲ್ಲಿ ಅವರ ಆಸ್ಪತ್ರೆಗೆ ಒಂದು ದಿನ ಚಿಕಿತ್ಸೆ ನೀಡಲಾಯಿತು, ಆ ಸಮಯದಲ್ಲಿ ಅವರು ಗ್ಯಾಸ್ಟ್ರೋಎಂಟರಾಲಜಿ ತಜ್ಞರ ಮೇಲ್ವಿಚಾರಣೆಯಲ್ಲಿದ್ದರು.
ಜೂನ್ 19 ರಂದು, ಹೊಟ್ಟೆಗೆ ಸಂಬಂಧಿತ ಸಮಸ್ಯೆಗೆ ಚಿಕಿತ್ಸೆ ಪಡೆದ ನಂತರ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಜೂನ್ 15 ರಂದು ಹೊಟ್ಟೆಯ ಸೋಂಕಿಗೆ ಒಳಗಾಘಿದ್ದರು, ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಲ್ಕು ದಿನಗಳಿಂದ,ಗಾಂಧಿಯವರ ಮೇಲೆ ತೀವ್ರ ವೈದ್ಯಕೀಯ ನಿಗಾ ಇಡಲಾಗಿತ್ತು.
ಮತ್ತಷ್ಟು ಓದಿ: ನೆಹರುಗೆ ಸಂಬಂಧಿಸಿದ ದಾಖಲೆಗಳು ಕಾಣೆಯಾಗಿರಲಿಲ್ವಾ? ಗಜೇಂದ್ರ ಶೇಖಾವತ್ ಹೇಳಿದ್ದೇನು? ಸೋನಿಯಾ ಕುರಿತು ಚರ್ಚೆ ಶುರು
ಜೂನ್ 7 ರಂದು ಕೂಡ ಕಾಂಗ್ರೆಸ್ ನಾಯಕಿ ಹಿಮಾಚಲ ಪ್ರದೇಶದ ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಹೋಗಿದ್ದರು, ಕೆಲವು ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಂದಾಗಿ ನಿಯಮಿತ ಆರೋಗ್ಯ ತಪಾಸಣೆಗಾಗಿ ಅವರನ್ನು ಕರೆತರಲಾಗಿತ್ತು ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿಯ ಪ್ರಧಾನ ಸಲಹೆಗಾರ (ಮಾಧ್ಯಮ) ನರೇಶ್ ಚೌಹಾಣ್ ಹೇಳಿದ್ದರು.
ಸೆಪ್ಟೆಂಬರ್ 2022 ರಲ್ಲಿ, ಸೋನಿಯಾ ಗಾಂಧಿ ವೈದ್ಯಕೀಯ ತಪಾಸಣೆಗಾಗಿ ಅಮೆರಿಕಕ್ಕೆ ಹೋಗಲು ಮುಂದಾಗಿದ್ದರು, ಆದರೆ ಕೋವಿಡ್-19 ಕೋವಿಡ್ನಿಂದಾಗಿ ಆ ಭೇಟಿಯನ್ನು ಮುಂದೂಡಲಾಗಿತ್ತು. ಆ ಪ್ರವಾಸದಲ್ಲಿ ಅವರ ಮಗ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಇದ್ದರು.
ರಾಷ್ಟ್ರಿಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
