AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಪೌರತ್ವ ಸಿಗುವ ಮೊದಲೇ ಮತದಾರರ ಪಟ್ಟಿಯಲ್ಲಿ ಸೋನಿಯಾ ಗಾಂಧಿ ಹೆಸರಿತ್ತು; ದೆಹಲಿ ಪೊಲೀಸರಿಂದ ನ್ಯಾಯಾಲಯಕ್ಕೆ ಮಾಹಿತಿ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಭಾರತದ ಪೌರತ್ವ ಸಿಗುವ ಮೊದಲೇ ಅವರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿತ್ತು ಎಂದು ದೆಹಲಿ ಪೊಲೀಸರು ಇಂದು ದೆಹಲಿಯ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ. ಸೋನಿಯಾ ಗಾಂಧಿ ಅವರಿಗೆ ಏಪ್ರಿಲ್ 30, 1983ರಂದು ಭಾರತೀಯ ಪೌರತ್ವ ನೀಡಲಾಗಿದೆ ಎಂಬುದನ್ನು ಕೇಂದ್ರ ಗೃಹ ಸಚಿವಾಲಯದ ವಿದೇಶಿಯರ ವಿಭಾಗ ಖಚಿತಪಡಿಸಿದೆ ಎಂದು ಪೊಲೀಸರು ವರದಿಯಲ್ಲಿ ತಿಳಿಸಿದ್ದಾರೆ. ಅದಕ್ಕೂ ಮುನ್ನ 1980ರಲ್ಲಿ ಅವರು ಭಾರತೀಯ ಪ್ರಜೆಯಾಗಿರದಿದ್ದರೂ ಅವರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿತ್ತು ಎಂದು ತಿಳಿಸಲಾಗಿದೆ.

ಭಾರತೀಯ ಪೌರತ್ವ ಸಿಗುವ ಮೊದಲೇ ಮತದಾರರ ಪಟ್ಟಿಯಲ್ಲಿ ಸೋನಿಯಾ ಗಾಂಧಿ ಹೆಸರಿತ್ತು; ದೆಹಲಿ ಪೊಲೀಸರಿಂದ ನ್ಯಾಯಾಲಯಕ್ಕೆ ಮಾಹಿತಿ
ಸೋನಿಯಾ ಗಾಂಧಿImage Credit source: PTI
ಸುಷ್ಮಾ ಚಕ್ರೆ
|

Updated on: Nov 28, 2026 | 10:26 PM

Share

ನವದೆಹಲಿ, ನವೆಂಬರ್ 28: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಭಾರತೀಯ ಪೌರತ್ವ ಪಡೆಯುವ 3 ವರ್ಷಗಳ ಮೊದಲೇ, ಅಂದರೆ 1980ರ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಸೇರ್ಪಡೆಯಾಗಿತ್ತು ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇಂದು ನ್ಯಾಯಾಲಯಕ್ಕೆ 2 ವರದಿಗಳನ್ನು ಸಲ್ಲಿಸಿದ್ದಾರೆ. ಸೋನಿಯಾ ಗಾಂಧಿ ಪೌರತ್ವ ಪಡೆಯುವ ಮೊದಲೇ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಸೇರಿಸಲಾಗಿತ್ತು ಎಂಬ ಆರೋಪವನ್ನು ಪರಿಶೀಲಿಸಲು ಮೂಲ ನೋಂದಣಿ ದಾಖಲೆಗಳ ಹುಡುಕಾಟ ಅತ್ಯಗತ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರೋಸ್ ಅವೆನ್ಯೂ ನ್ಯಾಯಾಲಯದ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವಿನೋದ್ ಜೋಶಿ ಅವರ ಮುಂದೆ ದೆಹಲಿ ಪೊಲೀಸರು 2 ವರದಿಗಳನ್ನು ಸಲ್ಲಿಸಿದ್ದಾರೆ. ನವೆಂಬರ್ 27ರ ಮೊದಲ ವರದಿಯಲ್ಲಿ ಈ ದೂರು ಐಪಿ ಎಸ್ಟೇಟ್ ಪೊಲೀಸ್ ಠಾಣೆಯ ವ್ಯಾಪ್ತಿಗೆ ಬರುವುದಿಲ್ಲವಾದ್ದರಿಂದ ನವದೆಹಲಿ ಪೊಲೀಸ್ ಜಿಲ್ಲೆಗೆ ಮತ್ತು ತದನಂತರ ತುಘಲಕ್ ರಸ್ತೆ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ ಎಂದು ತಿಳಿಸಲಾಗಿತ್ತು. ಮ್ಯಾಜಿಸ್ಟ್ರೇಟ್ ಹೆಚ್ಚಿನ ವಿವರಗಳನ್ನು ಕೇಳಿದ ಬಳಿಕ ತುಘಲಕ್ ರಸ್ತೆ ಪೊಲೀಸ್ ಠಾಣೆಯ ಅಧಿಕಾರಿಗಳು ಎರಡನೇ ವರದಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ‘ನಿನ್ನನ್ನೂ ಕೊಂದುಬಿಡುತ್ತಾರೆ!’; ಪ್ರಧಾನಿಯಾಗದಂತೆ ರಾಜೀವ್ ಗಾಂಧಿ ಬಳಿ ಬೇಡಿಕೊಂಡಿದ್ದ ಸೋನಿಯಾ ಗಾಂಧಿ

1980 ಮತ್ತು 1983ರ ಮತದಾರರ ಪಟ್ಟಿಯಲ್ಲಿ ಸೋನಿಯಾ ಗಾಂಧಿ ಅವರ ಹೆಸರು ಇರುವುದನ್ನು ಸಂಬಂಧಪಟ್ಟ ಚುನಾವಣಾ ನೋಂದಣಾಧಿಕಾರಿ ಹಾಗೂ ನವದೆಹಲಿ ಜಿಲ್ಲಾಧಿಕಾರಿ ಕಚೇರಿ ದೃಢಪಡಿಸಿದೆ ಎಂದು ಪೊಲೀಸರು ವರದಿಯಲ್ಲಿ ತಿಳಿಸಿದ್ದಾರೆ. ಹಾಗೆಯೇ, ಏಪ್ರಿಲ್ 30, 1983ರಂದು ಅವರಿಗೆ ಭಾರತೀಯ ಪೌರತ್ವ ಪ್ರಮಾಣಪತ್ರ ನೀಡಲಾಗಿದೆ ಎಂಬುದನ್ನು ಕೇಂದ್ರ ಗೃಹ ಸಚಿವಾಲಯದ ವಿದೇಶಿಯರ ವಿಭಾಗ ಖಚಿತಪಡಿಸಿದೆ.

1980 ಮತ್ತು 1983ರ ಮತದಾರರ ಪಟ್ಟಿಯಲ್ಲಿ ಸೋನಿಯಾ ಗಾಂಧಿ ಅವರ ಹೆಸರು ಇರುವುದನ್ನು ನವದೆಹಲಿ ಜಿಲ್ಲಾಧಿಕಾರಿ ಕಚೇರಿ ಹಾಗೂ ಚುನಾವಣಾ ನೋಂದಣಾಧಿಕಾರಿ ದೃಢಪಡಿಸಿದ್ದಾರೆ. ಆದರೆ, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಸಂಬಂಧಿಸಿದ ಫಾರ್ಮ್ 6 ಮತ್ತು ಮೂಲ ಅರ್ಜಿ ದಾಖಲೆಗಳನ್ನು ಇನ್ನೂ ಪತ್ತೆಹಚ್ಚಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ವಿವಾದಕ್ಕೆ ಕಾರಣವಾಯ್ತು 201ನೇ ಪುಟ; ಸೋನಿಯಾ ಗಾಂಧಿ ಆತ್ಮಚರಿತ್ರೆ ನಿಷೇಧಕ್ಕೆ ಶಿವಸೇನೆ ಆಗ್ರಹ

ಮುಂದಿನ ವಿಚಾರಣೆ ಡಿಸೆಂಬರ್ 14ಕ್ಕೆ:

ಹೆಚ್ಚಿನ ದಾಖಲೆಗಳ ಪರಿಶೀಲನೆ ಮತ್ತು ತನಿಖೆ ನಡೆಸಲು ಪೊಲೀಸರು ಕಾಲಾವಕಾಶ ಕೋರಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಡಿಸೆಂಬರ್ 14ಕ್ಕೆ ಮುಂದೂಡಿದೆ.

ಪ್ರಕರಣದ ಹಿನ್ನೆಲೆ:

ವಕೀಲ ವಿಕಾಸ್ ತ್ರಿಪಾಠಿ 2025ರ ಆಗಸ್ಟ್‌ನಲ್ಲಿ ಸಲ್ಲಿಸಿದ್ದ ದೂರಿಗೆ ಸಂಬಂಧಿಸಿದಂತೆ ಈ ವಿಚಾರಣೆ ನಡೆಯುತ್ತಿದೆ. 1980ರಲ್ಲಿ ಭಾರತೀಯ ಪೌರತ್ವ ಇಲ್ಲದಿದ್ದರೂ ಮತದಾರರ ಪಟ್ಟಿಯಲ್ಲಿ ಹೆಸರು ಹೇಗೆ ಬಂತು ಎಂಬುದರ ಕುರಿತು ತನಿಖೆ ನಡೆಸಬೇಕೆಂದು ದೂರುದಾರರು ಒತ್ತಾಯಿಸಿದ್ದಾರೆ. ಈ ಹಿಂದೆ ನ್ಯಾಯಾಲಯದಲ್ಲಿ ಪ್ರತಿಕ್ರಿಯೆ ಸಲ್ಲಿಸಿದ್ದ ಸೋನಿಯಾ ಗಾಂಧಿ, ಯಾವುದೇ ಮೂಲ ದಾಖಲೆಗಳಿಲ್ಲದೆ ಕೇವಲ ಊಹಾಪೋಹಗಳು ಮತ್ತು ಮಾಧ್ಯಮ ವರದಿಗಳ ಆಧಾರದ ಮೇಲೆ ಈ ದೂರು ಸಲ್ಲಿಸಲಾಗಿದೆ ಎಂದು ಆಕ್ಷೇಪಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಆಶಾ ಕಾರ್ಯಕರ್ತೆಯರು ಮತ್ತು ಸರ್ಕಾರದ ನಡುವೆ ಕೊಂಡಿಯಾದವರು ಇವರೇ
ಆಶಾ ಕಾರ್ಯಕರ್ತೆಯರು ಮತ್ತು ಸರ್ಕಾರದ ನಡುವೆ ಕೊಂಡಿಯಾದವರು ಇವರೇ
ಆಶಾ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್‌: ಸಿಎಂ ಸಂಧಾನ ಸಕ್ಸಸ್‌
ಆಶಾ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್‌: ಸಿಎಂ ಸಂಧಾನ ಸಕ್ಸಸ್‌
ಬಿಗ್​​ಬಾಸ್ ಸ್ಪರ್ಧಿಯ ಅನುಕರಣೆ ಮಾಡಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಯ ಅನುಕರಣೆ ಮಾಡಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಧರ್ಮ ದಂಗಲ್: ಕಾರ್ಯಕ್ರಮದಿಂದ ಅರ್ಧಕ್ಕೆ ಎದ್ದು ಹೋದ ವಿಜಯೇಂದ್ರ
ಧರ್ಮ ದಂಗಲ್: ಕಾರ್ಯಕ್ರಮದಿಂದ ಅರ್ಧಕ್ಕೆ ಎದ್ದು ಹೋದ ವಿಜಯೇಂದ್ರ
ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು
ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು
ಯಶಸ್ ಚಾಣಾಕ್ಷತೆಗೆ ಮೆಚ್ಚಿದ ಸುದೀಪ್; ಕಿಚ್ಚನ ಚಪ್ಪಾಳೆ ಫಿಕ್ಸ್?
ಯಶಸ್ ಚಾಣಾಕ್ಷತೆಗೆ ಮೆಚ್ಚಿದ ಸುದೀಪ್; ಕಿಚ್ಚನ ಚಪ್ಪಾಳೆ ಫಿಕ್ಸ್?
ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ನಮ್ಮ ಧ್ವನಿ ಅಡಗಿಸಲಾಗಲ್ಲ: ಡಿಕೆಶಿ
ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ನಮ್ಮ ಧ್ವನಿ ಅಡಗಿಸಲಾಗಲ್ಲ: ಡಿಕೆಶಿ
ಸಿದ್ದರಾಮಯ್ಯ ಕುರಿತ ಸ್ಟಿಂಗ್​ ಆಪರೇಷನ್ ಪ್ರಕರಣಕ್ಕೆ ಕೇರಳ ನಂಟು
ಸಿದ್ದರಾಮಯ್ಯ ಕುರಿತ ಸ್ಟಿಂಗ್​ ಆಪರೇಷನ್ ಪ್ರಕರಣಕ್ಕೆ ಕೇರಳ ನಂಟು
ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ? ಇಂದು ದೆಹಲಿಗೆ ಸಿಎಂ
ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ? ಇಂದು ದೆಹಲಿಗೆ ಸಿಎಂ
ಸುದೀಪ್ ಪಾರ್ಟಿಗೆ ಬರ್ತಿಲ್ಲ; ದೂರಿದ ನಲಪಾಡ್
ಸುದೀಪ್ ಪಾರ್ಟಿಗೆ ಬರ್ತಿಲ್ಲ; ದೂರಿದ ನಲಪಾಡ್