AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಕೇರಳದ ಸಿಎಂ ಹೆಸರು ಘೋಷಿಸಿದ AICC: ವಿ.ಡಿ.ಸತೀಶನ್​ ದೇವರನಾಡಿನ ನೂತನ ಮುಖ್ಯಮಂತ್ರಿ

Kerala New CM: ಎಐಸಿಸಿ ನಾಯಕರು ಕೊನೆಗೂ ಕೇರಳ ನೂತನ ಸಿಎಂ ಹೆಸರನ್ನು ಘೋಷಣೆ ಮಾಡಿದ್ದಾರೆ. ದೇವರನಾಡಿನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದು, 140 ವಿಧಾನಸಭಾ ಸ್ಥಾನಗಳ ಪೈಕಿ 102 ಸ್ಥಾನಗಳನ್ನು ಗೆಲ್ಲುವ ಮೂಲಕ ಕೇರಳದಲ್ಲಿ ಯುಡಿಎಫ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ನಾನಾ ಲೆಕ್ಕಾಚಾರಗಳ ಬಳಿಕ ವರಿಷ್ಠರು ಅಂತಿಮವಾಗಿ ಇಂದು (ಮೇ 14) ಕೇರಳ ಕಾಂಗ್ರೆಸ್​​ ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡಿದ್ದಾರೆ.

ಕೊನೆಗೂ ಕೇರಳದ ಸಿಎಂ ಹೆಸರು ಘೋಷಿಸಿದ AICC: ವಿ.ಡಿ.ಸತೀಶನ್​ ದೇವರನಾಡಿನ ನೂತನ  ಮುಖ್ಯಮಂತ್ರಿ
ವಿ.ಡಿ.ಸತೀಶನ್
ಪ್ರಸನ್ನ ಹೆಗಡೆ
|

Updated on:May 14, 2026 | 12:33 PM

Share

ತಿರುವನಂತಪುರಂ/ದೆಹಲಿ, ಮೇ 14: ಸಾಕಷ್ಟು ಅಳೆದು ತೂಗಿ, ನಾನಾ ಲೆಕ್ಕಾಚಾರಗಳ ಬಳಿಕ ಕೊನೆಗೂ ಕೇರಳದ ನೂತನ ಸಿಎಂ ಆಗಿ ವಿ.ಡಿ.ಸತೀಶನ್ ಅವರ ಹೆಸರನ್ನು ಎಐಸಿಸಿ ಘೋಷಿಸಿದೆ. ಕೇರಳ ಕಾಂಗ್ರೆಸ್ ನಾಯಕರಾದ ಕೆ.ಸಿ ವೇಣುಗೋಪಾಲ್,  ವಿ.ಡಿ ಸತೀಶನ್ ಮತ್ತು  ರಮೇಶ್ ಚೆನ್ನಿತ್ತಲ ಹೆಸರುಗಳು ಪ್ರಮುಖವಾಗಿ ಸಿಎಂ ರೇಸ್​​ನಲ್ಲಿದ್ದವು. ಆದರೆ ಈ ಪೈಕಿ ವಿ.ಡಿ.ಸತೀಶನ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.

ಎಐಸಿಸಿ ಕೇರಳ ಉಸ್ತುವಾರಿ ದೀಪಾ ದಾಸ್ಮುನ್ಸಿ ಹಾಗೂ ಪಕ್ಷದ ಕೇಂದ್ರ ವೀಕ್ಷಕರಾದ ಅಜಯ್ ಮಾಕನ್ ಮತ್ತು ಮುಕುಲ್ ವಾಸ್ನಿಕ್ ಅವರು ಸುದ್ದಿಗೋಷ್ಠಿಯಲ್ಲಿ ನೂತನ ಸಿಎಂ ಹೆಸರು ಪ್ರಕಟಿಸಿದ್ದಾರೆ. ಮುಖ್ಯಮಂತ್ರಿ ಹೆಸರು ಘೋಷಣೆಗೆ ಮುನ್ನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಹಿರಿಯ ನಾಯಕರೊಂದಿಗೆ ಕೊನೆಯ ಹಂತದ ಸಮಾಲೋಚನೆಗಳನ್ನು ನಡೆಸಿದ್ದರು. ಮೂಲಗಳ ಪ್ರಕಾರ, ಖರ್ಗೆ ಅವರು ಎಐಸಿಸಿ ಕೇರಳ ಉಸ್ತುವಾರಿ ದೀಪಾ ದಾಸ್ಮುನ್ಸಿ ಹಾಗೂ ಹಿರಿಯ ವೀಕ್ಷಕರೊಂದಿಗೆ ಚರ್ಚೆ ನಡೆಸಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ 2 ಬಣವಾದ ಎನ್​ಡಿಎ; ಎಐಎಡಿಎಂಕೆಯಿಂದ ಬಂಡಾಯ ನಾಯಕರನ್ನು ಉಚ್ಛಾಟಿಸಿದ ಇಪಿಎಸ್

ಏಪ್ರಿಲ್​​ 9ರಂದು ಕೇರಳ ವಿಧಾನಸಭಾ ಚುನಾವಣೆ ನಡೆದಿದ್ದು, ಇದರ ಫಲಿತಾಂಶ ಮೇ 4ರಂದು ಪ್ರಕಟಗೊಂಡಿತ್ತು. ಕಾಂಗ್ರೆಸ್ ನೇತೃತ್ವದ ಯುಡಿಎಫ್ 140 ವಿಧಾನಸಭಾ ಸ್ಥಾನಗಳ ಪೈಕಿ 102 ಸ್ಥಾನಗಳನ್ನು ಗೆಲ್ಲುವ ಮೂಲಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆಡಳಿತಾರೂಢ ಎಲ್​​ಡಿಎಫ್​​ ಕೇವಲ 35 ಸ್ಥಾನಗಳನ್ನು ಪಡೆಯುವ ಮೂಲಕ ಹೀನಾಯ ಸೋಲುಂಡಿತ್ತು. ಹೀಗಿದ್ದರೂ ನೂತನ ಸಿಎಂ ಆಯ್ಕೆಗೆ ಬರೋಬ್ಬರಿ 10 ದಿನಗಳನ್ನು ಕಾಂಗ್ರೆಸ್​​ ನಾಯಕರು ತೆಗೆದುಕೊಂಡಿದ್ದಾರೆ.

ಕೇರಳದಲ್ಲಿ ಸಂಭ್ರಮಾಚರಣೆ

ಕೇರಳ ರಾಜ್ಯದ ನೂತನ ಸಿಎಂ ಆಗಿ ವಿ.ಡಿ.ಸತೀಶನ್​ ಆಯ್ಕೆ ಬೆನ್ನಲ್ಲೇ ತಿರುವನಂತಪುರಂನಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆದಿದೆ.

ಒಳ್ಳೆಯ ನಿರ್ಧಾರ ಎಂದ ಸನ್ನಿ ಜೋಸೆಫ್​

ನೂತನ ಸಿಎಂ ಆಗಿ ವಿ.ಡಿ.ಸತೀಶನ್ ಆಯ್ಕೆ ಸಂಬಂಧ ಕೇರಳ ಕಾಂಗ್ರೆಸ್ ಅಧ್ಯಕ್ಷ ಸನ್ನಿ ಜೋಸೆಫ್​ ಪ್ರತಿಕ್ರಿಯೆ ನೀಡಿದ್ದಾರೆ. ತಿರುವನಂತಪುರಂನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದು ತುಂಬಾ ಒಳ್ಳೆಯ ನಿರ್ಧಾರ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:09 pm, Thu, 14 May 26

Follow Us