ಕಾಂಗ್ರೆಸ್ ನಾಯಕರ ಪ್ರತಿಕ್ರಿಯೆಗಳು ಅವರು ದೇಶದ ಸಂಸ್ಥೆಗಳನ್ನು ಗೌರವಿಸುವುದಿಲ್ಲ ಎಂಬುದನ್ನು ತೋರಿಸುತ್ತದೆ: ಪ್ರಲ್ಹಾದ್ ಜೋಶಿ

ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯವು ಅವರನ್ನು ಕ್ಷಮೆಯಾಚಿಸುತ್ತೀರಾ ಎಂದು ಮತ್ತೆ ಮತ್ತೆ ಕೇಳಿತು. ಅವರು ಅದನ್ನು ನಿರಾಕರಿಸಿದರು. ಕೋರ್ಟ್ ತೀರ್ಪು ಪ್ರಕಟಿಸಿದಾಗ ಅವರು ಕ್ಷಮೆ ಕೇಳುವುದಿಲ್ಲ ಎಂದರು

ಕಾಂಗ್ರೆಸ್ ನಾಯಕರ ಪ್ರತಿಕ್ರಿಯೆಗಳು ಅವರು ದೇಶದ ಸಂಸ್ಥೆಗಳನ್ನು ಗೌರವಿಸುವುದಿಲ್ಲ ಎಂಬುದನ್ನು ತೋರಿಸುತ್ತದೆ: ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ
Follow us
ರಶ್ಮಿ ಕಲ್ಲಕಟ್ಟ
|

Updated on: Mar 23, 2023 | 9:19 PM

ಮೋದಿ ಸರ್​​ನೇಮ್ (Modi Surname) ವಿಚಾರದಲ್ಲಿನ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ದೋಷಿ ಎಂದು ತೀರ್ಪು ನೀಡಿದೆ. ಕಳ್ಳರ ಹೆಸರೆಲ್ಲ ಮೋದಿ ಎಂದೇ ಇರುತ್ತದೆ ಹೇಗೆ? ಎಂದು ಪ್ರಶ್ನಿಸಿದ್ದ ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಇದರಿಂದ ಸದ್ಯ ತಮ್ಮ ಸಂಸದ ಸ್ಥಾನವನ್ನು ಕಳೆದುಕೊಳ್ಳುವ ಆತಂಕವನ್ನು ವಯನಾಡು ಸಂಸದರಾದ ರಾಹುಲ್ ಗಾಂಧಿ ಎದುರಿಸುತ್ತಿದ್ದಾರೆ. ರಾಹುಲ್ ಗಾಂಧಿ ವಿರುದ್ಧ ಕೋರ್ಟ್ ತೀರ್ಪು ಬಗ್ಗೆ ಪ್ರತಿಕ್ರಿಯಿಸಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi), ಕಾಂಗ್ರೆಸ್ ನಾಯಕರ ಪ್ರತಿಕ್ರಿಯೆಗಳು ಅವರು ದೇಶದ ಸಂಸ್ಥೆಗಳನ್ನು ಗೌರವಿಸುವುದಿಲ್ಲ ಎಂಬುದನ್ನು ತೋರಿಸುತ್ತವೆ. ಅವರು ಸಂಸ್ಥೆಗಳ ಬಗ್ಗೆ ಕಡಿಮೆ ಗೌರವವನ್ನು ಹೊಂದಿದ್ದು ಅವರು ಅದನ್ನು ಪದೇ ಪದೇ ತೋರಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯವು  ಕ್ಷಮೆಯಾಚಿಸುತ್ತೀರಾ ಎಂದು ಅವರಲ್ಲಿ ಮತ್ತೆ ಮತ್ತೆ ಕೇಳಿತು. ಅವರು ಅದನ್ನು ನಿರಾಕರಿಸಿದರು. ಕೋರ್ಟ್ ತೀರ್ಪು ಪ್ರಕಟಿಸಿದಾಗ ಅವರು ಕ್ಷಮೆ ಕೇಳುವುದಿಲ್ಲ ಎಂದರು. ರಾಹುಲ್ ಗಾಂಧಿಯ ಪೂರ್ವ ನಿದರ್ಶನವನ್ನು ನೋಡಿದರೆ, ಅವರು ಮತ್ತೆ ಮತ್ತೆ ತಪ್ಪು ಎಸಗಿರುವುದು ಕಾಣುತ್ತದೆ ಎಂದಿದ್ದಾರೆ ಜೋಶಿ.

ಇದೇ ವಿಷಯಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪೀಯೂಷ್ ಗೋಯಲ್ ಇಂದು ‘ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮತ್ತು ವಿಶ್ವದಾದ್ಯಂತ ಅತ್ಯಂತ ಪ್ರೀತಿಪಾತ್ರರು, ಮೆಚ್ಚುಗೆ ಪಡೆದ ಮತ್ತು ಅತ್ಯಂತ ವಿಶ್ವಾಸಾರ್ಹ ನಾಯಕರಾಗಿದ್ದಾರೆ’ ಎಂಬ ಅಂಶವನ್ನು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅರಿತುಕೊಳ್ಳಬೇಕು. ತಮ್ಮ ಬೇಜವಾಬ್ದಾರಿ, ಅವಹೇಳನಕಾರಿ ಹೇಳಿಕೆಗಾಗಿ ಕಾಂಗ್ರೆಸ್ ಸಂಸದ ರಾಹುಲ್ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮಾತನಾಡುವಾಗ ಅದು ಯಾವಾಗಲೂ ಅವರ ಪಕ್ಷ ಮತ್ತು ದೇಶದ ಮೇಲೆ ಪರಿಣಾಮ ಬೀರುತ್ತದೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಸೂರತ್ ಕೋರ್ಟ್ ತೀರ್ಪನ್ನು “ಮಾತುಗಳು ಆಯುಧಗಳಿಗಿಂತ ಮಾರಕ” ಎಂದು ಕಲಿಯಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ರವಿಶಂಕರ್ ಪ್ರಸಾದ್ ಗುಜರಾತ್ ನ್ಯಾಯಾಲಯದ ತೀರ್ಪಿನ ಬಗ್ಗೆ ಗಾಂಧಿಯವರ ಪ್ರತಿಕ್ರಿಯೆಯನ್ನು ಟೀಕಿಸಿದ್ದಾರೆ. ತೀರ್ಪು ನಂತರ ರಾಹುಲ್, ನನ್ನ ಧರ್ಮವು ಸತ್ಯ ಮತ್ತು ಅಹಿಂಸೆಯ ಮೇಲೆ ಆಧಾರಿತವಾಗಿದೆ.ಸತ್ಯವೇ ನನ್ನ ದೇವರು, ಅಹಿಂಸೆ ಅದನ್ನು ಪಡೆಯುವ ಸಾಧನ ಎಂದು ಮಹಾತ್ಮ ಗಾಂಧಿಯವರ ಹೇಳಿಕೆಯನ್ನು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: Rahul Gandhi: ರಾಹುಲ್ ಗಾಂಧಿಯನ್ನು ಲೋಕಸಭೆಯಿಂದ ಅನರ್ಹಗೊಳಿಸುವಂತೆ ಸುಪ್ರೀಂ ಕೋರ್ಟ್ ವಕೀಲ ಮನವಿ

ಇದಕ್ಕೆ ಪ್ರತಿಕ್ರಯಿಸಿದ ರವಿಶಂಕರ್ ಪ್ರಸಾದ್, ರಾಹುಲ್ ಗಾಂಧಿ ಹೇಳಿದ್ದೇನು?ಅವರು ಸತ್ಯ ಮತ್ತು ಅಹಿಂಸೆಯಲ್ಲಿ ನಂಬಿಕೆ ಇಟ್ಟವರು.ಅಂದರೆ ನೀವು ಜನರನ್ನು ಅವಮಾನಿಸಬಹುದೇ? ಅಂದರೆ ನೀವು ರಾಷ್ಟ್ರವನ್ನು ಅವಮಾನಿಸಬಹುದೇ? ಅವರು ಹೇಳಿದ್ದನ್ನು ನಾನು ಪುನರಾವರ್ತಿಸುವುದಿಲ್ಲ. ಅವರು ಏನು ಹೇಳಿದ್ದಾರೆ ಎಂಬುದು ನಿಮಗೆ ತಿಳಿದಿದೆ ಎಂದಿದ್ದಾರೆ.

ರಾಹುಲ್ ಗಾಂಧಿಗೆ ಯಾರನ್ನಾದರೂ ನಿಂದಿಸುವ ಅಥವಾ ಅಗೌರವ ತೋರುವ ಹಕ್ಕು ಇದ್ದರೆ, ಅಂತಹ ಹೇಳಿಕೆಗಳಿಂದ ನೊಂದವರಿಗೆ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡುವ ಹಕ್ಕು ಇದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ